Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಿಯದರ್ಶಿನಿ ಕಿನ್ನಿಗೋಳಿ ಶಾಖೆಯ ಎರಡನೇ ವಾರ್ಷಿಕೋತ್ಸವ, ಹೊಲಿಗೆ ಯಂತ್ರ ವಿತರಣೆ
    News

    ಪ್ರಿಯದರ್ಶಿನಿ ಕಿನ್ನಿಗೋಳಿ ಶಾಖೆಯ ಎರಡನೇ ವಾರ್ಷಿಕೋತ್ಸವ, ಹೊಲಿಗೆ ಯಂತ್ರ ವಿತರಣೆ

    adminBy adminApril 17, 2026

    ಮೂಲ್ಕಿ: ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಕಿನ್ನಿಗೋಳಿ ಶಾಖೆಯ ಎರಡನೇ ವರ್ಷದ ವಾರ್ಷಿಕೋತ್ಸವ ಹಾಗೂ ಕಿನ್ನಿಗೋಳಿ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್ ನ ವಿದ್ಯಾರ್ಥಿಗಳಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ ಕಿನ್ನಿಗೋಳಿ ಶಾಖೆಯ ಆವರಣದಲ್ಲಿ ನಡೆಯಿತು.

    https://chat.whatsapp.com/FCEnlTkAKCC0MGPhXtX4i4

    ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ ಹೊಲಿಗೆ ಯಂತ್ರ ವಿತರಿಸಿ ಮಾತನಾಡಿ ಬಡವರಿಗೆ ಸಹಕಾರಿ ಬ್ಯಾಂಕುಗಳು ಜನಸ್ನೇಹಿಯಾಗಿದ್ದು, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾಡ್ ಅವರ ನೇತೃತ್ವದಲ್ಲಿ ಅಸಹಾಯಕರಿಗೆ ಸಹಾಯ ಹಸ್ತ ನೀಡುವ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನಡೆಸುತ್ತಿರುವುದು ಶ್ಲಾಘನೀಯವಾಗಿದ್ದು ನಿರಂತರವಾಗಿ ನಡೆಯಲಿ ಎಂದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್ ವಸಂತ್ ಬೆರ್ನಾಡ್, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಕಳೆದ ಐದು ವರ್ಷಗಳಿಂದ ಸಹಕಾರಿ ಧುರೀಣ ದಿ.ನಾರಾಯಣ ಸನಿಲ್ ಹಾಗೂ ಪಂಜದಗುತ್ತು ದಿ.ಶಾಂತಾರಾಮ ಶೆಟ್ಟಿಯವರ ಪ್ರೇರಣೆಯಿಂದ ಆರಂಭಗೊಂಡಿದ್ದು 38 ಕೋಟಿ ರೂ. ಠೇವಣಿ ಹೊಂದಿದೆ. ಮಾಜಿ ಸಚಿವ ಕೆ ಅಭಯಚಂದ್ರ ಜೈನ್ ಅವರ ಸಹಕಾರದಿಂದ ಸೊಸೈಟಿಯು ಈಗಾಗಲೇ ನಾಲ್ಕು ಶಾಖೆಗಳನ್ನು ಹೊಂದಿದ್ದು, ಆರ್ಥಿಕವಾಗಿ ಸಹಾಯಹಸ್ತ, ಉದ್ಯೋಗ ಸೃಷ್ಟಿ ಹಾಗೂ ಗ್ರಾಹಕರ ಸಹಕಾರದಿಂದ ಯಶಸ್ಸು ಸಾಧಿಸಿದೆ ಎಂದು ಹೇಳಿದರು.
    ಸಮಾರಂಭದ ಮುಖ್ಯ ಅತಿಥಿಗಳಾಗಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಸದಸ್ಯೆ ಕೋಕಿಲ ಡಿ ಅಮೀನ್, ಕಿನ್ನಿಗೋಳಿ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್ ಮುಖ್ಯೋಪಾಧ್ಯಾಯಿನಿ
    ರೇಷ್ಮಾ ಮಾರ್ಟಿನ್, ಸೊಸೈಟಿ ಉಪಾಧ್ಯಕ್ಷ ವಿಜಯಕುಮಾರ್ ಸನಿಲ್, ನಿರ್ದೇಶಕರುಗಳಾದ ಗಣೇಶ್ ಪ್ರಸಾದ್ ದೇವಾಡಿಗ, ರೇಖಾ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪೂಜಾರಿ, ಶಾಖಾ ಪ್ರಬಂಧಕಿ ಅಕ್ಷತಾ ಶೆಟ್ಟಿ, ಸಿಬ್ಬಂದಿಗಳಾದ ಕ್ಯಾರಲ್ ಡಿಸೋಜ, ದೀಪಕ್ ಸಾಲ್ಯಾನ್,ರೇಷ್ಮಾ ಮತ್ತಿತರರು ಉಪಸ್ಥಿತರಿದ್ದರು.
    ಸೊಸೈಟಿ ಅಧ್ಯಕ್ಷ ಎಚ್ ವಸಂತ್ ಬೆರ್ನಾಡ್ ಸ್ವಾಗತಿಸಿದರು.
    ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪೂಜಾರಿ ವಂದಿಸಿದರು. ಪ್ರಬಂಧಕಿ ಅಕ್ಷತಾ ಶೆಟ್ಟಿ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    EMAIL: sahakaraspandana@gmail.com

    Co Operative ministry Cooperative Cooperative Department Cooperative Registrar H.Vasanth Bernad Kinnigoli branch Priyadarshini Co Operative Society Haleyangadi
    Previous Articleಏಪ್ರಿಲ್ 19ರಂದು ಮೂಡುಬಿದಿರೆಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 35ನೇ ಶಾಖೆ ಲೋಕಾರ್ಪಣೆ
    Next Article ಶ್ರೀ ನಾರಾಯಣಗುರು ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಬಿ.ಎನ್ ಶಂಕರ ಪೂಜಾರಿ ಬ್ರಹ್ಮಾವರ, ಉಪಾಧ್ಯಕ್ಷರಾಗಿ ರಾಜು ಪೂಜಾರಿ ಉಪ್ಪೂರು ಅವಿರೋಧ ಆಯ್ಕೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.