Close Menu
    Top News

    ಧವಳ ಕೋ ಆಪರೇಟಿವ್ ಸೊಸೈಟಿ ರೂ. 50.95 ಲಕ್ಷ ನಿವ್ವಳ ಲಾಭ

    April 27, 2026

    ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ತ್ರಿಂಶತಿ ಸಂಭ್ರಮ, ಸಹಕಾರ ಸಿಂಧೂರ ವಾಣಿಜ್ಯ ಸಂಕೀರ್ಣ ಉದ್ಘಾಟನೆ

    April 27, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಕೆ.ಸಿ.ರೋಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    April 26, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ ದಾಖಲೆಯ ರೂ. 3.07 ಕೋಟಿ ಲಾಭ
    News

    ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ ದಾಖಲೆಯ ರೂ. 3.07 ಕೋಟಿ ಲಾಭ

    adminBy adminApril 25, 2026

    ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿಷ್ಠಿತ ಕುದ್ರೋಳಿ ಶ್ರೀ ಗೋಕರ್ಣನಾಥ ಕೋ- ಆಪರೇಟಿವ್ ಬ್ಯಾಂಕ್ 2025-26ನೇ ಆರ್ಥಿಕ ವರ್ಷದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ್ದು ಒಟ್ಟು ರೂ. 3.07 ಕೋಟಿ ಲಾಭ ದಾಖಲಿಸಿದೆ. ಬ್ಯಾಂಕು 2025 26ನೇ ಸಾಲಿನಲ್ಲಿ ಒಟ್ಟು 2028.64 ಕೋಟಿ ರೂ. ವ್ಯವಹಾರ ದಾಖಲಿಸಿದ್ದು, ಗಣನೀಯ ಏರಿಕೆ ಕಂಡಿದೆ. ಕಳೆದ ಸಾಲಿಗಿಂತ ಠೇವಣಿಯಲ್ಲಿ 16% ಹಾಗೂ ಸಾಲ ನೀಡುವಿಕೆಯಲ್ಲಿ 25% ವೃದ್ಧಿ ಸಾಧಿಸಿರುವ ಬ್ಯಾಂಕ್, ಅನುತ್ಪಾದಕ ಆಸ್ತಿ NPA ಪ್ರಮಾಣವನ್ನು 1.13% ಇಳಿಸುವಲ್ಲಿ ಯಶಸ್ವಿಯಾಗಿದೆ.

    https://chat.whatsapp.com/FCEnlTkAKCC0MGPhXtX4i4
    ನೂರು ವರ್ಷಗಳ ಪ್ರಾಮಾಣಿಕ ಸೇವೆಯೊಂದಿಗೆ ಗ್ರಾಹಕರ ನಂಬಿಕಸ್ತ ಬ್ಯಾಂಕ್ ಎನಿಸಿಕೊಂಡಿರುವ ಶ್ರೀ ಗೋಕರ್ಣನಾಥ ಕೋ- ಆಪರೇಟಿವ್ ಬ್ಯಾಂಕ್, 17 ಶಾಖೆಗಳ ಮೂಲಕ ಗ್ರಾಹಕರಿಗೆ ಅತ್ಯಾಧುನಿಕ ಸೇವೆಗಳನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ. ಡಿಜಿಟಲ್ ತಂತ್ರಜ್ಞಾನಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದು ವಿಶೇಷವಾಗಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಹಕರಿಗೆ ಯುಪಿಐ (UPI) ಸೌಲಭ್ಯ ಪರಿಚಯಿಸಿದ ಮೊದಲ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮೂಲಕ ಬ್ಯಾಂಕಿನ ಗ್ರಾಹಕರು ಕ್ಷಿಪ್ರವಾಗಿ ಯಾವುದೇ ಅಡೆತಡೆಯಿಲ್ಲದೆ ಡಿಜಿಟಲ್ ಪಾವತಿಗಳನ್ನು ಮಾಡಲು ಸಾಧ್ಯವಾಗಿದೆ.
    ಪ್ರಸ್ತುತ ಶ್ರೀ ಗೋಕರ್ಣನಾಥ ಬ್ಯಾಂಕ್‌ ‘ಸಂಪೂರ್ಣ ಡಿಜಿಟಲ್ ಬ್ಯಾಂಕಿಂಗ್” (Fully digital) ಸೌಲಭ್ಯ ಅಳವಡಿಸಿದ್ದು ಮೊಬೈಲ್ ಬ್ಯಾಂಕಿಂಗ್, ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಎಟಿಎಂ ಸೌಲಭ್ಯಗಳ ಮೂಲಕ ಗ್ರಾಹಕರು ಬ್ಯಾಂಕಿಗೆ ಭೇಟಿ ನೀಡದೆಯೇ ಸುಲಭವಾಗಿ ಬಹುತೇಕ ವ್ಯವಹಾರಗಳನ್ನು ನಡೆಸುವಂತಾಗಿದೆ. ಜೊತೆಗೆ, Paytm ಸಂಸ್ಥೆಯೊಂದಿಗೆ ಸಹಭಾಗಿತ್ವದ ಮೂಲಕ QR ಕೋಡ್ ಸೌಲಭ್ಯ ಒದಗಿಸಲಾಗಿದ್ದು ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಯ ಎಲ್ಲಾ ಸುರಕ್ಷತಾ ಕ್ರಮಗಳನ್ನು ಬ್ಯಾಂಕಿನಲ್ಲಿ ಅಳವಡಿಸಿಕೊಳ್ಳಲಾಗಿದೆ.
    ಪ್ರಸಕ್ತ ಆರ್ಥಿಕ ವರ್ಷದಲ್ಲಿ ಇನ್ನೂ ಹೆಚ್ಚಿನ ನವೀನ ಹಾಗೂ ಗ್ರಾಹಕ ಸ್ನೇಹಿ ಸೇವೆಗಳನ್ನು ಪರಿಚಯಿಸಲು ಉದ್ದೇಶಿಸಲಾಗಿದ್ದು, ಜನರ ಆರ್ಥಿಕ ಅಭಿವೃದ್ಧಿಗಾಗಿ ಚಿನ್ನಾಭರಣ, ವ್ಯಾಪಾರ, ಸಣ್ಣ ಕೈಗಾರಿಕೆ, ಆಸ್ತಿ ಅಡವು, ವಾಹನ ಸಾಲಗಳಿಗೆ ಹೆಚ್ಚಿನ ಆದ್ಯತೆ ನೀಡಲು ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸಾಧನೆಗೆ ಸಹಕರಿಸಿದ ಎಲ್ಲಾ ಸದಸ್ಯರು ಗ್ರಾಹಕರು, ನಿರ್ದೇಶಕರು, ಮಹಾಪ್ರಬಂಧಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಬ್ಯಾಂಕಿನ ಅಧ್ಯಕ್ಷರಾದ ಚಂದ್ರಶೇಖರ್ ಕುಮಾರ್ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿರುತ್ತಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Chandrashekhar Kumar Co Operative ministry Cooperative Cooperative Registrar Kudroli Shree Gokarnanatha Co operative Bank
    Previous Articleಕೆ.ಸಿ.ರೋಡ್‌ನಲ್ಲಿ ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆ, ದಂತ ಚಿಕಿತ್ಸಾ ಶಿಬಿರ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಕೆ.ಸಿ.ರೋಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    Related Posts

    ಧವಳ ಕೋ ಆಪರೇಟಿವ್ ಸೊಸೈಟಿ ರೂ. 50.95 ಲಕ್ಷ ನಿವ್ವಳ ಲಾಭ

    April 27, 2026

    ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ತ್ರಿಂಶತಿ ಸಂಭ್ರಮ, ಸಹಕಾರ ಸಿಂಧೂರ ವಾಣಿಜ್ಯ ಸಂಕೀರ್ಣ ಉದ್ಘಾಟನೆ

    April 27, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಕೆ.ಸಿ.ರೋಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    April 26, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಧವಳ ಕೋ ಆಪರೇಟಿವ್ ಸೊಸೈಟಿ ರೂ. 50.95 ಲಕ್ಷ ನಿವ್ವಳ ಲಾಭ

    April 27, 2026

    ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ತ್ರಿಂಶತಿ ಸಂಭ್ರಮ, ಸಹಕಾರ ಸಿಂಧೂರ ವಾಣಿಜ್ಯ ಸಂಕೀರ್ಣ ಉದ್ಘಾಟನೆ

    April 27, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಕೆ.ಸಿ.ರೋಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    April 26, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.