Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ಕಾಯ್ದೆಗೆ ಹೈಕೋರ್ಟ್ ತಡೆ
    News

    ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ಕಾಯ್ದೆಗೆ ಹೈಕೋರ್ಟ್ ತಡೆ

    adminBy adminMay 13, 2026

    ಮಂಗಳೂರು: ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಕಾಯ್ದೆ 2025ಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯ ಕೆಲವು ತಿದ್ದುಪಡಿಗಳ ಜಾರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ಮಧ್ಯಂತರ ತಡೆ ನೀಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಏಕಸದಸ್ಯ ಪೀಠ, ಸರ್ಕಾರದ ಅಧಿಸೂಚನೆಯ ಜಾರಿಗೆ ಮಧ್ಯಂತರ ತಡೆ ಆದೇಶ ಹೊರಡಿಸಿದೆ.

    https://chat.whatsapp.com/FCEnlTkAKCC0MGPhXtX4i4

    ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಜಯಕುಮಾರ್‌ ಎಸ್. ಪಾಟೀಲ್, ರಾಜ್ಯ ಸರ್ಕಾರ 20250 ಸೆಪ್ಟೆಂಬರ್ 12ರಂದು ಹೊರಡಿಸಿದ ತಿದ್ದುಪಡಿ ಅಧಿಸೂಚನೆಯ ಮೂಲಕ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 53-ಅ ಮೂಲಕ ಸಹಕಾರ ಸಂಘಗಳ ಸಮಿತಿಗಳಿಗೆ ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡುವ ಅಧಿಕಾರ ಪಡೆದಿರುವುದು, ಸಹಕಾರ ಸಂಘಗಳ ಮೂಲ ತತ್ವಗಳನ್ನೇ ದುರ್ಬಲಗೊಳಿಸುವ ಕ್ರಮವಾಗಿದೆ. ಇದು ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆ ತಂದಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
    ಈ ವಾದ ಆಲಿಸಿದ ನ್ಯಾಯಾಲಯ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 53-ಎಯ ಮೇಲೆ ತಿಳಿಸಲಾದ ಸೇರ್ಪಡೆಯ ಪರಿಶೀಲನೆಯು ಕೇಂದ್ರ ಸರ್ಕಾರ ಮತ್ತು ನಬಾರ್ಡ್ ವ್ಯಾಪ್ತಿಯಲ್ಲಿರುವ ಸಂಘಗಳನ್ನು ಒಳಗೊಳ್ಳುತ್ತದೆ. ಆ ವಿಷಯದ ದೃಷ್ಟಿಯಿಂದ ಪರಿಚ್ಚೇದ 7ರೊಂದಿಗೆ ಆರ್ಟಿಕಲ್ 246ರ ಅಡಿಯಲ್ಲಿ ರಾಜ್ಯ ಶಾಸಕಾಂಗದ ಪರಿಮಿತಿಯನ್ನು ವಿವರವಾಗಿ ಪರಿಗಣಿಸಬೇಕು. ಈ ದೃಷ್ಟಿಯಿಂದ ಸೆಕ್ಷನ್ 2(ಎ-1-1), 28-ಎ, 58 ತಿದ್ದುಪಡಿ ಮಾಡುವ ಕಾರ್ಯಾಚರಣೆ ಮತ್ತು ಸೆಕ್ಷನ್ 53-ಎ ನ ಸೇರ್ಪಡೆಯನ್ನು ವಿಸ್ತ್ರತವಾಗಿ ಪರಿಗಣಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿತು. ಕರ್ನಾಟಕ ಸರ್ಕಾರ ದಿ.12.09.2025ರ ಅಧಿಸೂಚನೆ ಮೂಲಕ ಜಾರಿಗೆ ತಂದ ತಿದ್ದುಪಡಿ 2(23-1-1), 28-5, 58 ಮತ್ತು 53 -ಎಯ ತಿದ್ದುಪಡಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿತು.

    ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್‌ ಎಸ್. ಪಾಟೀಲ್, ವಕೀಲರಾದ ರಕ್ಷಿತ್ ಕುಮಾರ್‌ ಜೈನ್ ನಾರಾವಿ, ಮೊಹಮದ್ ತಾಹೀರ್‌ ವಾದಿಸಿದ್ದರು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Co Operative ministry Cooperative Cooperative Department Cooperative Registrar Karnataka High Court Karnataka Sahakara Sanghagala Tiddupadi Kayde
    Previous Articleಆತ್ಮಶಕ್ತಿ ಸಹಕಾರ ಸಹಕಾರ ಸಂಘದ ಪ್ರಧಾನ ಕಚೇರಿಗೆ ಶಿವಗಿರಿ ಮಠದ ಶ್ರೀ ವಿಶುದ್ಧಾನಂದ ಸ್ವಾಮೀಜಿ ಭೇಟಿ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕರಂಗಲ್ಪಾಡಿ ಶಾಖೆಯ 11ನೇ ವಾರ್ಷಿಕೋತ್ಸವ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.