ಮಂಗಳೂರು: ಮಂಗಳೂರು ಸ್ಟೋರ್ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡಕ ಉಚಿತ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಇದೇ ವೇಳೆ ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಕನ್ನಡಕ ಒದಗಿಸಲು ಪ್ರಸಾದ ನೇತ್ರಾಲಯ ಬದ್ಧವಾಗಿದೆ ಪ್ರಸಾದ್ ನೇತ್ರಾಲಯದ ವ್ಯವಸ್ಥಾಪಕ ನಿರ್ದೇಶಕ, ನಾಡೋಜ ಪ್ರಶಸ್ತಿ ಪುರಸ್ಕೃತ ಡಾ.ಕೃಷ್ಣಪ್ರಸಾದ್ ಕೂಡ್ಲು ತಿಳಿಸಿದರು.
https://chat.whatsapp.com/FCEnlTkAKCC0MGPhXtX4i4
ಪ್ರಸಾದ್ ನೇತ್ರಾಲಯದ ವ್ಯವಸ್ಥಾಪಕ ನಿರ್ದೇಶಕ, ನಾಡೋಜ ಪ್ರಶಸ್ತಿ ಪುರಸ್ಕೃತ ಡಾ.ಕೃಷ್ಣಪ್ರಸಾದ್ ಕೂಡ್ಲು ಅವರ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಕೃಷ್ಣಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಸ್ಟೋರ್ ಗ್ರಾಹಕರ ಪರವಾಗಿ ಡಾ.ಕೃಷ್ಣಪ್ರಸಾದ್ ಅವರನ್ನು ಅಭಿನಂದಿಸಲಾಯಿತು.
ಸುವರ್ಣ ಸಂಭ್ರಮದ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ, ಮಾಜಿ ಕಾರ್ಪೊರೇಟರ್ ಕೆ.ಭಾಸ್ಕರ್ ರಾವ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಭರತನಾಟ್ಯದಲ್ಲಿ ಪ್ರಶಸ್ತಿ ಪಡೆದ ರೆಮೋನಾ ಪಿರೇರ, ವಕೀಲರಾದ ನಾರಾಯಣ ಕೇಶವ್, ವೆಂಕಟೇಶ್ ಜಪ್ಪು, ಕೆ.ರವೀಂದ್ರ ರಾವ್- ಪೂರ್ಣಿಮಾ ಬಿ ರಾವ್ ಮುಖ್ಯ ಅತಿಥಿಗಳಾಗಿದ್ದರು. ಉಷಾ ಭವಾನಿಶಂಕರ ವಂದಿಸಿದರು.

ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

