ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಂಪನಕಟ್ಟೆ ಶಾಖೆಯ ದಶಮಾನೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಹಂಪನಕಟ್ಟೆಯ ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಎನ್.ಜಿ.ಒ ಕಟ್ಟಡದಲ್ಲಿ ಜರುಗಿತು.
https://chat.whatsapp.com/FCEnlTkAKCC0MGPhXtX4i4
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದ.ಕ ಜಿಲ್ಲೆಯ ಅಧ್ಯಕ್ಷ ನವೀನ್ ಕುಮಾರ್ ಎಂ.ಎಸ್, ಸಂಘದ ಗ್ರಾಹಕರಾದ ರಾಜಗೋಪಾಲ್ ಬಿ.ಎಂ, ಚೂಡಾಮಣಿ, ಮೋಹನದಾಸ್ ಎಂ, ಬೋಳಾರ್ ರಮಣಿ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.
ಸದಸ್ಯರಾದ ಮಾಧವ ಎಂ.ಅಮೀನ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉತ್ತಮ ಬ್ಯಾಂಕಿಂಗ್ ಸೇವೆಯೊಂದಿಗೆ ೧೪ ವರ್ಷಗಳಲ್ಲಿ ೩೫ ಶಾಖೆಗಳನ್ನು ತೆರೆದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಖೆಗಳನ್ನು ತೆರೆದು ಸಾರ್ವಜನಿಕರಿಗೆ ಸೇವೆ ನೀಡುವಂತಾಗಲಿ” ಎಂದು ಶುಭ ಹಾರೈಸಿದರು. ಸದಸ್ಯರಾದ ರಾಜಗೋಪಾಲ್ ಬಿ.ಎಂ ಹಾಗೂ ರಾಮಚಂದ್ರ ರಾವ್ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿ ಹೊಂದಲು ಸಾಧ್ಯವಾಗಿದೆ. ಸಂಘದ ಸದಸ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿನ್ನಾಭರಣ ಸಾಲದ ಸೇವೆ ಹೆಚ್ಚಾಗಿ ನೀಡುತ್ತಿದೆ. ಸಂಘವು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಜೊತೆಯಲ್ಲಿ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತ ಬರುತ್ತಿದೆ. ಸಂಘದ ಸದಸ್ಯರಿಗೆ ಸ್ಮರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯಗಳನ್ನು ನೀಡುತ್ತಿದೆ. ಹಂಪನಕಟ್ಟೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ೫೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.೧೦ ಹಾಗೂ ೧೦೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.೧೦.೫೦ ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂಗೆ ಗರಿಷ್ಟ ಮೌಲ್ಯ ರೂ. ೧೨,೦೦೦ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು ಎಂದರು.
ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ಸೀತಾರಾಮ ಎನ್, ದಿವಾಕರ್ ಬಿ.ಪಿ, ಗೋಪಾಲ್ ಎಂ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮತ್ತಿತರರು ಉಪಸ್ಥಿತರಿದ್ದರು. ಶಾಖೆಯ ಸಿಬ್ಬಂದಿ ಸುಮಲತಾ ಸ್ವಾಗತಿಸಿ, ಶ್ರೀಮತಿ ಅಕ್ಷತಾ ವಂದಿಸಿದರು. ಶಾಖೆಯ ಶಾಖಾಧಿಕಾರಿ ಪ್ರಣೀತಾ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com


