Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಾನವೀಯ ಮಿಡಿತದ ಸೇವೆ ಮುಖ್ಯ
    News

    ಮಾನವೀಯ ಮಿಡಿತದ ಸೇವೆ ಮುಖ್ಯ

    adminBy adminMay 16, 2026

    ವಿಶ್ವಕರ್ಮ ಸಹಕಾರ ಬ್ಯಾಂಕ್‌ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಎಸ್.ಪಿ. ಗುರುದಾಸ್ ಅಭಿಪ್ರಾಯ

    ಮಂಗಳೂರು: ಯಾವುದೇ ಒಂದು ಸಂಸ್ಥೆಯ ಸ್ಥಾಪನೆಯ ಹಿನ್ನೆಲೆ ಮತ್ತು ಉದ್ದೇಶವನ್ನು ಅರಿತುಕೊಂಡು ಸಿಬ್ಬಂದಿಗಳು ಅದಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಿದರೆ ಸಂಸ್ಥಾಪಕರ ಆಶಯವು ಪೂರ್ಣಗೊಳ್ಳುತ್ತದೆ ಎಂದು ವಿಶ್ವಕರ್ಮ ಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ.ಎಸ್.ಪಿ.ಗುರುದಾಸ್ ಅಭಿಪ್ರಾಯಪಟ್ಟರು.
    ವಿಶ್ವಕರ್ಮ ಸಹಕಾರ ಬ್ಯಾಂಕಿನ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಬ್ಯಾಂಕಿನ ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿದರು.

    https://chat.whatsapp.com/FCEnlTkAKCC0MGPhXtX4i4
    ಬ್ಯಾಂಕ್ ನಡೆದು ಬಂದ ಹಾದಿ ಹಾಗೂ ಸಂಸ್ಥಾಪಕರಿಂದ ಹಿಡಿದು ಇಂದಿನವರೆಗಿನ ಆಡಳಿತ ನಿರ್ದೇಶಕರು ಮತ್ತು ಸಿಬ್ಬಂದಿಗಳು ಬ್ಯಾಂಕಿನ ಬೆಳವಣಿಗೆಗಾಗಿ ಸಲ್ಲಿಸಿದ ತ್ಯಾಗ ಮತ್ತು ಅವಿರತ ಶ್ರಮವನ್ನು ಅವರು ಸ್ಮರಿಸಿದರು. ಸಿಬ್ಬಂದಿಗಳ ಮಾನವೀಯ ಸ್ಪರ್ಶದಿಂದ ಸಮರ್ಪಿತ ಸೇವೆಯಿಂದ ಗ್ರಾಹಕರ ವಿಶ್ವಾಸಾರ್ಹತೆ ಬೆಳೆಯುತ್ತದೆ. ಮಧ್ಯಮ ಮತ್ತು ಕೆಳವರ್ಗದ ಸದಸ್ಯರಿಂದ ಕೂಡಿದ ಸಂಸ್ಥೆಯಲ್ಲಿ ಸದಸ್ಯರಿಗೆ ಹಣಕಾಸು ವ್ಯವಸ್ಥೆಯ ಅರಿವು ಮತ್ತು ಜಾಗೃತಿಯನ್ನು ಸಿಬ್ಬಂದಿಗಳು ಮೂಡಿಸಬೇಕಾಗಿದೆ ಎಂದು ಅವರು ಹೇಳಿದರು.


    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್. ಆರ್. ಹರೀಶ್ ಆಚಾರ್ಯ ಅವರು, ಬ್ಯಾಂಕಿನ ಬೆಳವಣಿಗೆಯನ್ನು ಅದರ ಪರಂಪರೆಯನ್ನು ಅರಿತುಕೊಂಡು ಮುಂದುವರಿಸುವ ಗುರುತರ ಜವಾಬ್ದಾರಿ ಸಿಬ್ಬಂದಿಗಳ ಮೇಲೆ ಇದೆ. ಸಿಬ್ಬಂದಿಗಳು ಬ್ಯಾಂಕಿನ ಸದಸ್ಯರೊಂದಿಗೆ ನಿರಂತರ ಸಂಪರ್ಕವನ್ನು ಇಟ್ಟುಕೊಂಡು ಅವರಲ್ಲಿ ಜಾಗೃತಿ ಮತ್ತು ಅರಿವನ್ನು ಮೂಡಿಸುವ ಆಪ್ತ ಸಮಾಲೋಚಕರ ರೀತಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಹೇಳಿದರು.
    ಬ್ಯಾಂಕಿನ ಉಪಾಧ್ಯಕ್ಷರಾದ ಪಿ. ಜಗದೀಶ್ ಆಚಾರ್ಯ, ನಿರ್ದೇಶಕರಾದ ಭಾಸ್ಕರ ಆಚಾರ್ಯ ಡಿ., ಸೀತಾರಾಮ ಆಚಾರ್ಯ ಬೆಳುವಾಯಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಿ. ಗುರುಪ್ರಸಾದ್ ಶೆಟ್ಟಿ, ಹರಿಪ್ರಸಾದ್, ಶರತ್ ಕೆ. ಆಚಾರ್ಯ, ಭರತ್ ನಿಡ್ಪಳ್ಳಿ, ಜಯಶ್ರೀ ವಿ. ಆಚಾರ್ಯ, ಪಿ. ಪ್ರಶಾಂತ್ ಆಚಾರ್ , ಬಿಜು ಜಯ, ಬಿ. ಜಯಪ್ರಕಾಶ್ ಆಚಾರ್ಯ, ಶ್ರುತಿ ಆಚಾರ್ಯ ಕೆ., ವ್ಯವಸ್ಥಾಪಕ ನಿರ್ದೇಶಕರಾದ ವಸಂತ ಅಡ್ಯಂತಾಯ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Co Operative ministry Cooperative Department Cooperative Registrar Dr.S.P Gurudas. Vishwakarma Kala parishath Vishwakarma Sahakara Bank Limited Vishwakarma Sahakara Bank Swarna Sambhrama
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಂಪನಕಟ್ಟೆ ಶಾಖೆಯ ದಶಮಾನೋತ್ಸವ
    Next Article ಸಮಾಜ ಸೇವಾ ಸಹಕಾರಿ ಸಂಘದ 18ನೇ ಶಾಖೆ ಬೋಳಿಯಾರ್ ನಲ್ಲಿ ಉದ್ಘಾಟನೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.