Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಮಾಜ ಸೇವಾ ಸಹಕಾರಿ ಸಂಘದ 18ನೇ ಶಾಖೆ ಬೋಳಿಯಾರ್ ನಲ್ಲಿ ಉದ್ಘಾಟನೆ
    News

    ಸಮಾಜ ಸೇವಾ ಸಹಕಾರಿ ಸಂಘದ 18ನೇ ಶಾಖೆ ಬೋಳಿಯಾರ್ ನಲ್ಲಿ ಉದ್ಘಾಟನೆ

    adminBy adminMay 18, 2026

    ಬಂಟ್ವಾಳ: ಜನಸಾಮಾನ್ಯರಿಗೆ ಆರ್ಥಿಕವಾಗಿ ಉನ್ನತವಾದ ಸೇವೆ ಸಿಗಬೇಕು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶವನ್ನು ನೀಡುವ ಮೂಲಕ ಜನಪರ ಸೇವೆ ನೀಡಬೇಕು ಎನ್ನುವ ಉದ್ದೇಶದಿಂದ ಡಾ. ಅಮ್ಮೆಂಬಳ ಬಾಳಪ್ಪ ಹಾಗೂ ಹೂವಯ್ಯ ಮೂಲ್ಯರವರು ಸ್ಥಾಪಿಸಿದ ಸಮಾಜ ಸೇವಾ ಸಹಕಾರಿ ಸಂಘ ಇಂದು ಅದೇ ಉದ್ದೇಶದಲ್ಲಿ ಮುಂದುವರಿಯುತ್ತಿರುವುದು ಅಭಿನಂದನೀಯ ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

    https://chat.whatsapp.com/FCEnlTkAKCC0MGPhXtX4i4

    ಉಳ್ಳಾಲ ತಾಲೂಕಿನ ಬೋಳಿಯಾರಿನ ಶ್ರೀ ದೇವಿಕಿರಣ್ ಸಂಕೀರ್ಣದಲ್ಲಿ ಭಾನುವಾರ ಸಮಾಜ ಸೇವಾ ಸಹಕಾರಿ ಸಂಘದ 18ನೇ ಶಾಖೆಯನ್ನು ಉದ್ಘಾಟಿಸಿ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.
    ಇಂದು ಸಮಾಜ ಸೇವಾ ಸಹಕಾರಿ ಸಂಘವು ಪ್ರಗತಿಯ ಹಾದಿಯಲ್ಲಿದ್ದು ಹೆಚ್ಚಿನ ಶಾಖೆಗಳು ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಸ್ಥಿತಿಗೆ ಅಭಿವೃದ್ದಿಯಾಗಿದೆ. ಒಳ್ಳೆಯ ಉದ್ದೇಶ ಇಟ್ಟುಕೊಂಡು ಪ್ರಾಮಾಣಿಕ ಸೇವೆ ನೀಡಿದಾಗ ಅದು ಖಂಡಿತವಾಗಿಯೂ ಪ್ರಕಾಶಕ್ಕೆ ಬರುತ್ತದೆ. ಬ್ಯಾಂಕ್ ಮುಂದಿನ ಪೀಳಿಗೆಯ ಸಮಾಜದ ಸಂಪತ್ತು. ಇದನ್ನು ಈ ಪೀಳಿಗೆಯ ಜನರು ಅರ್ಥ ಮಾಡಿಕೊಂಡು ಅಭುವೃದ್ದಿಗೆ ಶ್ರಮಿಸಬೇಕು ಎಂದು ತಿಳಿಸಿದರು.


    ಅಮ್ಮೆಂಬಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜಾರಾಮ ಭಟ್ ಭದ್ರತಾ ಕೊಠಡಿ ಉದ್ಘಾಟಿಸಿದರು.
    ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಠೇವಣಿ ಪತ್ರ ಬಿಡುಗಡೆಗೊಳಿಸಿ ಮಾತನಾಡಿ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಗ್ರಾಹಕರೊಂದಿಗೆ ಇಟ್ಟುಕೊಂಡಿರುವ ಉತ್ತಮ ಸಂಬಂಧದಿಂದ ಇಂದು ಈ ಸಂಘವು ಉನ್ನತಿಯ ಹಾದಿಯಲ್ಲಿದೆ. ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಸಮಾಜ ಸೇವಾ ಸಹಕಾರಿ ಸಂಘ ಕೊಡುಗೆ ನೀಡುತ್ತಿದ್ದು ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿರುವ ಸಹಕಾರಿ ಸಂಘವಾಗಿದೆ ಎಂದು ಅಭಿಪ್ರಾಯ ಪಟ್ಟರು.
    ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ಅಧ್ಯಕ್ಷತೆ ವಹಿಸಿ ಮಾತನಾಡಿ ಬೋಳಿಯಾರಿನಲ್ಲಿ ಹೊಸ ಶಾಖೆ ಆರಂಭಗೊಂಡಿದ್ದು ಗ್ರಾಹಕರು ಠೇವಣಾತಿ ನೀಡಿ, ಸಾಲ ಪಡೆದು ಸಂಘದ ಅಭಿವೃದ್ದಿಗೆ ಸಹಕರಿಸುವಂತೆ ವಿನಂತಿಸಿದರು.
    ಕಾರ್ಯಕ್ರಮದಲ್ಲಿ ಕಟ್ಟಡ ಮಾಲಕ ಕೇಶವ ಭಂಡಾರಿ ಅವರನ್ನು ಸನ್ಮಾನಿಸಲಾಯಿತು. ಅಮೂಲ್ಯ ಸ್ವಸಹಾಯ ಸಂಘಗಳನ್ನು ಅಭಿನಂದಿಸಲಾಯಿತು.
    ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಬೋಳಿಯಾರ್ ಎಂಜೆಎಂ ಮಸೀದಿ ಅಧ್ಯಕ್ಷ ಪಿ.ಕೆ. ಅಬ್ದುಲ್ಲ, ಮಂಗಳೂರು ತಾಲೂಕು ಪಂಚಾಯತ್ ಮಾಜಿ ಸದಸ್ಯ ಬಿ.ಕೆ ಅಬ್ದುಲ್ ಜಬ್ಬಾರ್, ಬೋಳ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಶಕೂರು, ಮೆಸ್ಕಾಂ ನಿವೃತ್ತ ಎಂ.ಡಿ. ಮಂಜಪ್ಪ ಮೂಲ್ಯ, ಕುರ್ನಾಡು ದತ್ತಾತ್ರೇಯ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕ ಗಣೇಶ್ ನಾಯಕ್ ಕುರ್ನಾಡುಗುತ್ತು, ಸಜೀಪಮುನ್ನೂರು ಗ್ರಾ.ಪಂ. ಮಾಜಿ ಅಧ್ಯಕ್ಷ
    ಪರಮೇಶ್ವರ ಮೂಲ್ಯ, ನಾಗುರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಕಾರ್ಯದರ್ಶಿ ಮೋಹನದಾಸ್ ಗಾಂಭೀರ್ ಬೋಳಿಯಾರ್ ಗುತ್ತು, ಉಳ್ಲಾಲ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಭಾಸ್ಕರ ಕುತ್ತಾರ್, ಗುರುದೇವಾ ಸೇವಾ ಬಳಗ ಅಧ್ಯಕ್ಷ ನೇಮಿರಾಜ್ ಶೆಟ್ಟಿ, ಅಮ್ಮೆಂಬಳ ಕುಲಾಲ ಜಾತಿ ಅಭ್ಯುದಯ ಸಂಘದ ಅಧ್ಯಕ್ಷ ನಾಗಪ್ಪ ಕುಲಾಲ್ ಉದ್ದ, ದ.ಕ.ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್, ಸೆಲ್ಕೋ ಸೀನಿಯರ್ ಮ್ಯಾನೇಜರ್ ರವೀಣ ಬಂಗೇರ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಪ್ರಗತಿಪರ ಕೃಷಿಕ ಚಿನ್ನಯ್ಯ ಸಾಲ್ಯಾನ್, ಸಂಘದ ಉಪಾಧ್ಯಕ್ಷ ಜನಾರ್ದನ ಬೊಂಡಾಲ ವೇದಿಕೆಯಲ್ಲಿದ್ದರು.

    ನಿರ್ದೇಶಕರಾದ ರಮೇಶ್ ಸಾಲ್ಯಾನ್, ಸತೀಶ್, ಬಿ. ರಮೇಶ್ ಸಾಲ್ಯಾನ್, ಸುರೇಶ್ ಕುಲಾಲ ಎನ್., ಭೋಜ ಸಾಲಿಯಾನ್, ಹರೀಶ್, ಪ್ರೇಮನಾಥ ಬಂಟ್ವಾಳ್, ವಿದ್ಯಾ,ಮಾಲತಿ ಮಚೇಂದ್ರ, ಜಗನ್ನಿವಾಸ ಗೌಡ,ಗಣೇಶ್ ಸಮಗಾರ, ರೇಖಾ ನಾಯಕ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
    ಪ್ರಧಾನ ವ್ಯವಸ್ಥಾಪಕ ಭೋಜ ಮೂಲ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿರ್ದೇಶಕರಾದ ಅರುಣ್ ಕುಮಾರ್ ಕೆ. ಸ್ವಾಗತಿಸಿದರು, ಕಿರಣ್ ಕುಮಾರ್ ಎ. ವಂದಿಸಿದರು. ಸತೀಶ್ ಹೊಸ್ಮಾರ್ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Ammembala Balappa Boliyar Devikiran Sankirna Cooperative Cooperative Registrar Samaja Seva Sahakara Sangha Bantwala Suresh Kulal
    Previous Articleಮಾನವೀಯ ಮಿಡಿತದ ಸೇವೆ ಮುಖ್ಯ
    Next Article ಪ್ರಣವ ಸಂಸ್ಥೆಯ ಗ್ರಾಹಕ ಸದಸ್ಯರಿಗೆ ಮೊಬೈಲ್ ಬ್ಯಾಂಕಿಂಗ್ ಆ್ಯಪ್ ಮೂಲಕ ಹಣಕಾಸು ವ್ಯವಹಾರ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.