Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀಶಾ ಸೌಹಾರ್ದ ಸೊಸೈಟಿಯಿಂದ 120 ವಿದ್ಯಾರ್ಥಿಗಳಿಗೆ ಸಹಾಯಧನ, ಸನ್ಮಾನ
    News

    ಶ್ರೀಶಾ ಸೌಹಾರ್ದ ಸೊಸೈಟಿಯಿಂದ 120 ವಿದ್ಯಾರ್ಥಿಗಳಿಗೆ ಸಹಾಯಧನ, ಸನ್ಮಾನ

    adminBy adminJune 1, 2026

    ಸರಕಾರಿ/ಅನುದಾನಿತ ಕನ್ನಡ ಮಾಧ್ಯಮದ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    ಮಂಗಳೂರು: ನಗರದ ಪ್ರತಿಷ್ಠಿತ ಸೌಹಾರ್ದ ಸಹಕಾರಿ ಸಂಘ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯು, ಮಂಗಳೂರು ತಾಲೂಕು ವ್ಯಾಪ್ತಿಯ ಸರಕಾರಿ/ಅನುದಾನಿತ ಕನ್ನಡ ಮಾಧ್ಯಮದ ಶಾಲೆಗಳಲ್ಲಿ 2026ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 90 ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಿಸುವ ಮೂಲಕ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿದೆ.

    https://chat.whatsapp.com/FCEnlTkAKCC0MGPhXtX4i4
    ಜೂನ್‌ 7ರಂದು ಭಾನುವಾರ ಭಾನುವಾರ ಬೆಳಗ್ಗೆ 10.30 ಮಂಗಳಾದೇವಿಯ ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್‌ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವೇದವ್ಯಾಸ ಕಾಮತ್, ಶ್ರೀ ಕ್ಷೇತ್ರ ಶರವು ಮಹಾಗಣಪತಿ ದೇವಸ್ಥಾನದ ಶಿಲೆಶಿಲೆ ಮೊಕ್ತೇಸರರಾದ ರಾಘವೇಂದ್ರ ಶಾಸ್ತ್ರಿಗಳು, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಜಿ.ಭಟ್, ಮಂಗಳೂರು ಉತ್ತರ ಹಾಗೂ ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜೇಮ್ಸ್ ಕುಟಿನ್ಹೊ ಮತ್ತು ಹೆಚ್.ಆರ್.ಈಶ್ವರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ನಂಜನ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.
    120 ವಿಧ್ಯಾರ್ಥಿಗಳಿಗೆ ಸಹಾಯಧನದ ಜೊತೆಗೆ ಗೌರವ ಸನ್ಮಾನ, ಪ್ರಸಂಶನಾ ಪತ್ರ ಮತ್ತು ದೇಶ ಕಾಯುವ ಸಂದರ್ಭದಲ್ಲಿ ಹುತಾತ್ಮರಾದ 50 ವೀರಯೋಧರ ಜೀವನ ಚರಿತ್ರೆಯ ಯಶೋಗಾಥೆಯ “ವೀರಗಾಥೆ” ಪುಸ್ತಕ ನೀಡಿ ಗೌರವಿಸಲಾಗುವುದು. ಇವರಲ್ಲಿ ಆಯ್ದ 10 ವಿಧ್ಯಾರ್ಥಿಗಳಿಗೆ ಅವರ ಸಾಧನೆಗಳ ಆಧಾರದಲ್ಲಿ ಅವರ ಮುಂದಿನ ವಿಧ್ಯಾಭ್ಯಾಸಕ್ಕೆ ಹೆಚ್ಚಿನ ಸಹಾಯ ನೀಡಲಾಗುತ್ತದೆ ಎಂದು ಶ್ರೀಶಾ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ತಿಳಿಸಿದ್ದಾರೆ.
    ಶ್ರೀಶಾ ಸೌಹಾರ್ದ ಸೊಸೈಟಿಯು 2024ರಲ್ಲಿ ಅತ್ಯುತ್ತಮ ಸಹಕಾರಿ ಸಂಸ್ಥೆಯೆಂಬ ಪ್ರಶಸ್ತಿಗೆ ಪಾತ್ರವಾಗಿದೆ.ಕಳೆದ ಆರ್ಥಿಕ ವರ್ಷದಲ್ಲಿ ನಿರೀಕ್ಷೆಗೂ ಮೀರಿ ಅತ್ಯುತ್ತಮ ಸಾಧನೆಗೈದು 2.25 ಕೋಟಿಗೂ ಹೆಚ್ಚಿನ ಲಾಭ ಗಳಿಸಿದೆ. ಶ್ರೀಶಾ ಸೊಸೈಟಿಯು ತಾನು ಗಳಿಸಿದ ಲಾಭದ ದೊಡ್ಡ ಭಾಗವನ್ನು ಮರಳಿ ಸಮಾಜಕ್ಕೆ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ನೀಡುತ್ತಿದೆ. ಮುಖ್ಯವಾಗಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಶ್ರೀಶಾ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    H R Eeshwar James Kutinho M S Gururaj Shree Jithakamananda Maharaj Shree Ramakrishna Mata Mangalore Shreesha Souharda Co Operative Society
    Previous Articleಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಾಣ
    Next Article ಕಾರ್ಕಳ ಜೋಡುರಸ್ತೆಯ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ರೂ. 52.10 ಲಕ್ಷ ನಿವ್ವಳ ಲಾಭ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.