Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪಂಜದಗುತ್ತು ಶಾಂತಾರಾಮ ಶೆಟ್ಟಿಯವರು ಶಿಕ್ಷಣ ಕ್ಷೇತ್ರಕ್ಕೆ ಆದರ್ಶ: ಎಚ್ ವಸಂತ್ ಬೆರ್ನಾರ್ಡ್
    News

    ಪಂಜದಗುತ್ತು ಶಾಂತಾರಾಮ ಶೆಟ್ಟಿಯವರು ಶಿಕ್ಷಣ ಕ್ಷೇತ್ರಕ್ಕೆ ಆದರ್ಶ: ಎಚ್ ವಸಂತ್ ಬೆರ್ನಾರ್ಡ್

    adminBy adminJune 2, 2026

    ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ

    ಹಳೆಯಂಗಡಿ: ಪಂಜದಗುತ್ತು ಶಾಂತಾರಾಮ ಶೆಟ್ಟಿಯವರು ಶಿಕ್ಷಣ ಪ್ರೇಮಿಯಾಗಿದ್ದು, ಇದರ ಕಾರಣದಿಂದಲೇ ಗ್ರಾಮೀಣ ಪ್ರದೇಶದ ಪಂಜ ಎಂಬಲ್ಲಿ ಪ್ರೌಢಶಾಲೆ ಪ್ರಾರಂಭಗೊಳ್ಳಲು ಕಾರಣವಾಯಿತು. ತನ್ನ ಜೀವಿತದುದ್ದಕ್ಕೂ ಶಿಕ್ಷಣ ವಂಚಿತರ ಬಗ್ಗೆ ಚಿಂತನೆ ಮಾಡಿದ ಅಪರೂಪದ ವ್ಯಕ್ತಿತ್ವದ ಪಂಜದಗುತ್ತು ಶಾಂತಾರಾಮ ಶೆಟ್ಟಿ ಅವರನ್ನು ಸ್ಮರಣೆ ಮಾಡುವುದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಆದ್ಯ ಕರ್ತವ್ಯವೆಂದು ಎನಿಸುತ್ತಾ ಸೊಸೈಟಿಯ ಪ್ರೇರಣಾಶಕ್ತಿಯಾಗಿದ್ದ ಇವರ ಹೆಸರಿನಲ್ಲಿ ಪಂಜದಗುತ್ತು ಶಾಂತಾರಾಮ ಶೆಟ್ಟಿ ಸರಕಾರಿ ಪ್ರೌಢಶಾಲೆ ಇದರ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲು ಸಂತೋಷವಾಗುತ್ತದೆ ಎಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾರ್ಡ್ ಹೇಳಿದರು.

    https://chat.whatsapp.com/FCEnlTkAKCC0MGPhXtX4i4

    ಅವರು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಹಳೆಯಂಗಡಿ ಇದರ ವತಿಯಿಂದ ಪಂಜದಗುತ್ತು ಶಾಂತಾರಾಮ ಶೆಟ್ಟಿ ಸರಕಾರಿ ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಮುಖ್ಯ ಅತಿಥಿಯಾಗಿ ದಿ. ಶಾಂತಾರಾಮ ಶೆಟ್ಟಿಯವರ ಮಗಳು ಸರಿತಾ ಶೆಟ್ಟಿ ಭಾಗವಹಿಸಿ, ತಂದೆ ಸ್ಥಾಪನೆ ಮಾಡಿದ ಈ ಸರಕಾರಿ ಶಾಲೆಯೊಂದಿಗೆ ಸದಾ ನಮ್ಮ ಕುಟುಂಬ ಇದೆ ಎಂದು ತಿಳಿಸಿ, ಶೇಕಡ 100 ಫಲಿತಾಂಶ ಗಳಿಸಿದ ಹಿನ್ನೆಲೆಯಲ್ಲಿ ಶಿಕ್ಷಕ ವೃಂದಕ್ಕೆ ಅಭಿನಂದನೆ ಸಲ್ಲಿಸಿದರು.

    ಮೂಲ್ಕಿ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷೆ ಹಾಗೂ ಸಹ ಶಿಕ್ಷಕಿ ಶರ್ಲಿ ಸುಮಾಲಿನಿ ಶಾಂತಾರಾಮ ಶೆಟ್ಟಿ ಅವರ ಕಾರ್ಯವೈಖರಿಯ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯೋಪಾಧ್ಯಾಯರಾದ ಜೋಯಿಸಿ ಆಲ್ಫೋಸ್  ಸ್ವಾಗತಿಸಿದರು, ಪಂಚಾಯತ್ ನ ಮಾಜಿ ಸದಸ್ಯರಾದ ಸುಮಿತ್ರ  ಅಧ್ಯಕ್ಷತೆ ವಹಿಸಿದ್ದರು, ಮುಖ್ಯ ಅತಿಥಿಯಾಗಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪ್ರಭಾಕರ್, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ವೇದಿಕೆಯಲ್ಲಿ ಇದ್ದರು.

    ಇದೇ ಸಂದರ್ಭ ಸರಿತಾ ಶೆಟ್ಟಿ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಪ್ರಭಾಕರ್ ಮತ್ತು 100 ಫಲಿತಾಂಶ ಅವಧಿಯ ಮುಖ್ಯೋಪಾಧ್ಯಾಯರಾದ ಶರ್ಲಿ ಸುಮಲಿನಿ ಅವರನ್ನು ಗೌರವಿಸಲಾಯಿತು. ಸಹಶಿಕ್ಷಕಿ ರಶ್ಮಿ  ಧನ್ಯವಾದ ಅರ್ಪಿಸಿದ ಈ ಕಾರ್ಯಕ್ರಮವನ್ನು ಸಹ ಶಿಕ್ಷಕಿ ಮಂಜುಳಾ ಶೆಟ್ಟಿ  ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    H.Vasanth Bernad Panjadaguttu Shanatrama Shetty Panjadaguttu Shantaram Shetty Highschool Priyadarshini Co Operative Society Haleyangadi
    Previous Article“ಸ್ವಾರ್ಥವಲ್ಲ ಸೇವೆ”, “ವಹಿವಾಟಲ್ಲ ವಿಶ್ವಾಸ”, “ಲಾಭವಲ್ಲ ವ್ಯಕ್ತಿ” – ಮೌಲ್ಯಗಳ ಅಳವಡಿಕೆ
    Next Article ಭಾರತಿ ಪ್ರವಾಸೋದ್ಯಮ ಅಭಿವೃದ್ಧಿ ಸಹಕಾರಿಯ ಅಧ್ಯಕ್ಷರಾಗಿ ಮೋಹನ್ ಕುಮಾರ್ ಕುಂಬ್ಳೇಕರ್‌, ಉಪಾಧ್ಯಕ್ಷರಾಗಿ ಗಣೇಶ್ ಕುಮಾರ್ ಪರಕಟ್ಟ ಆಯ್ಕೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.