Close Menu
    Top News

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

    June 2, 2026

    ಪಟ್ಟಣ ಸಹಕಾರಿ ಬ್ಯಾಂಕುಗಳ ಮಾದರಿ ಉಪನಿಯಮಗಳ ಕರಡು ರಚನೆಗೆ ಐವರು ಸದಸ್ಯರ ಸಮಿತಿ ರಚಿಸಿದ ರಿಸರ್ವ್‌ ಬ್ಯಾಂಕ್‌

    June 2, 2026

    ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾಷಿಕ ಮಹಾಸಭೆ

    June 2, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
    News

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

    adminBy adminJune 2, 2026

    ಬಂಟ್ವಾಳ: 2025-2026ನೇ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ರ್ಯಾಂಕ್‌ ಪಡೆದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯಾಪ್ತಿಯ ಸದಸ್ಯರ ಮಕ್ಕಳನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.

    https://chat.whatsapp.com/FCEnlTkAKCC0MGPhXtX4i4
    ಸಂಘದ ಸದಸ್ಯ ಡೊಂಬಯ ಡಿ.ಅರಳ ಇವರ ಮಗಳು ಜ್ಞಾನಶ್ರೀ ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 600ರಲ್ಲಿ 596 ಅಂಕಗಳನ್ನು ಪಡೆದು ರಾಜ್ಯಮಟ್ಟದ ನಾಲ್ಕನೇ ಸ್ಥಾನ, ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಮೂರನೇ ಸ್ಥಾನ ಹಾಗೂ ಬಂಟ್ವಾಳ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದರು. ಸಂಘದ ಇನ್ನೊಬ್ಬ ಸದಸ್ಯ ನವೀನ ಶೆಟ್ಟಿ ಕರಿಂಕಿಜೆ ಇವರ ಮಗಳು ಕೃತ್ವಿ ಎನ್. ಶೆಟ್ಟಿ ರೋಟರಿ ಪದವಿಪೂರ್ವ ಕಾಲೇಜಿನಲ್ಲಿ 600ರಲ್ಲಿ 590 ಅಂಕಗಳೊಂದಿಗೆ ರಾಜ್ಯದಲ್ಲಿ ಹತ್ತನೇ ಸ್ಥಾನ, ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದರು. ಈ ಇಬ್ಬರನ್ನೂ ಸಂಘದ ಆಡಳಿತ ಮಂಡಳಿಯಿಂದ ಅಭಿನಂದಿಸಲಾಯಿತು.
    ಅಭಿನಂದಿಸಿ ಮಾತನಾಡಿದ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಸಿದ್ದಕಟ್ಟೆ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಬರುವ ಸಂಘದ ಸದಸ್ಯರ ಮಕ್ಕಳು ಮಾಡಿದ ಶೈಕ್ಷಣಿಕ ಸಾಧನೆಯು ನಮ್ಮ ಸಂಘಕ್ಕೂ ಹೆಮ್ಮೆಯ ವಿಚಾರವಾಗಿದೆ. ಮುಂದಿನ ಶೈಕ್ಷಣಿಕ ವರ್ಷಗಳಲ್ಲಿಯೂ ಇದೇ ರೀತಿಯ ಪ್ರಗತಿಯೊಂದಿಗೆ ಸಾಧನೆಯನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು.
    ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ, ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ, ರಶ್ಮಿತ್ ಶೆಟ್ಟಿ, ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ್ ಶೆಟ್ಟಿಗಾರ್, ಜಾರಪ್ಪ ನಾಯ್ಕ, ವೀರಪ್ಪ ಪರವ, ಎ ಶಿವ ಗೌಡ, ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ ಹೆಗ್ಡೆ, ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಪೋಷಕರಾದ ನವೀನ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರ್ವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Alwas College Cooperative Department Cooperative Registrar Prabhakara Prabhu Siddakatte Prathamika Krushi Pattina Sahakara Sangha
    Previous Articleಪಟ್ಟಣ ಸಹಕಾರಿ ಬ್ಯಾಂಕುಗಳ ಮಾದರಿ ಉಪನಿಯಮಗಳ ಕರಡು ರಚನೆಗೆ ಐವರು ಸದಸ್ಯರ ಸಮಿತಿ ರಚಿಸಿದ ರಿಸರ್ವ್‌ ಬ್ಯಾಂಕ್‌

    Related Posts

    ಪಟ್ಟಣ ಸಹಕಾರಿ ಬ್ಯಾಂಕುಗಳ ಮಾದರಿ ಉಪನಿಯಮಗಳ ಕರಡು ರಚನೆಗೆ ಐವರು ಸದಸ್ಯರ ಸಮಿತಿ ರಚಿಸಿದ ರಿಸರ್ವ್‌ ಬ್ಯಾಂಕ್‌

    June 2, 2026

    ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾಷಿಕ ಮಹಾಸಭೆ

    June 2, 2026

    ಆರೋಗ್ಯ ಕ್ಯಾಂಪ್‌ಗಳ ಸದುಪಯೋಗ

    June 2, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

    June 2, 2026

    ಪಟ್ಟಣ ಸಹಕಾರಿ ಬ್ಯಾಂಕುಗಳ ಮಾದರಿ ಉಪನಿಯಮಗಳ ಕರಡು ರಚನೆಗೆ ಐವರು ಸದಸ್ಯರ ಸಮಿತಿ ರಚಿಸಿದ ರಿಸರ್ವ್‌ ಬ್ಯಾಂಕ್‌

    June 2, 2026

    ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾಷಿಕ ಮಹಾಸಭೆ

    June 2, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.