Close Menu
    Top News

    ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅಜ್ಜಿನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

    June 11, 2026

    ವಿಕಸಿತ ಭಾರತ ಪರಿಕಲ್ಪನೆಗೆ ಗಮನಾರ್ಹ ಕೊಡುಗೆ

    June 10, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯಲ್ಲಿ ಗ್ರಾಹಕರ ಸಭೆ

    June 10, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕೋಟ ಮೂರ್ತೆದಾರರ ಸಹಕಾರಿ ಸಂಘದ ಮಹಾಸಭೆ
    News

    ಕೋಟ ಮೂರ್ತೆದಾರರ ಸಹಕಾರಿ ಸಂಘದ ಮಹಾಸಭೆ

    adminBy adminJune 5, 2026

    570 ಕೋಟಿ ರೂ. ವ್ಯವಹಾರ, 1.15 ಕೋಟಿ ರೂ. ನಿವ್ವಳ ಲಾಭ

    ಕೋಟ: ಕೋಟ ಮೂರ್ತೆದಾರರ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ 570 ಕೋಟಿ ರೂ. ವ್ಯವಹಾರ ನಡೆಸಿದ್ದು, ರೂ. 1.15 ಕೋಟಿ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.13 ಡಿವಿಡೆಂಡ್‌ ನೀಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಕೆ.ಕೊರಗ ಪೂಜಾರಿ ಘೋಷಿಸಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ಸಂಘದ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನಡೆದ ಸಂಘದ 35ನೇ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷರು ಈ ವಿಷಯಗಳನ್ನು ಘೋಷಿಸಿದರು. ಸಂಘದ ಆರು ಶಾಖೆಗಳ ಮೂಲಕ ರೂ.102.67 ಕೋಟಿ ಠೇವಣಿ ಸಂಗ್ರಹಿಸಿದ್ದು, ಕಳೆದ ಬಾರಿಗೆ ಹೋಲಿಸಿದರೆ ಠೇವಣಿ ಸಂಗ್ರಹಣೆಯಲ್ಲಿ ಶೇ.23ರಷ್ಟು ಹೆಚ್ಚಳವಾಗಿದೆ. ಸಂಘದ ಸಾಲ ಮುಂಗಡಗಳು ರೂ.88.08 ಕೋಟಿ, ಪಾಲು ಬಂಡವಾಳ 1.45 ಕೋಟಿ, ವಿವಿಧ ಸಹಕಾರಿ ಸಂಘ ಹಾಗೂ ಬ್ಯಾಂಕ್‌ನಲ್ಲಿ ರೂ. 26.64 ಕೋಟಿ ವಿನಿಯೋಗಿಸಲಾಗಿದೆ. ವಿವಿಧ ನಿಧಿಗಳು ರೂ. 12.09 ಕೋಟಿ ಆಗಿದೆ. ಸಂಘದ ದುಡಿಯುವ ಬಂಡವಾಳ 125.20 ಕೋಟಿಗೂ ಮೀರಿದೆ. ಸತತ 30 ವರ್ಷಗಳಿಂದ ‘ಎ’ ತರಗತಿ ಆಡಿಟ್ ವರ್ಗೀಕರಣ ಪಡೆಯುತ್ತಿದೆ ಎಂದು ಅಧ್ಯಕ್ಷರು ತಿಳಿಸಿದರು.
    ಸಂಘದ ಕೇಂದ್ರ ಕಚೇರಿ ಹಾಗೂ ಸಾಸ್ತಾನ ಶಾಖೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇತ್ತೀಚೆಗೆ ಕೇಂದ್ರ ಕಚೇರಿಯ ಕಟ್ಟಡವು ಕೋಟ ಬಸ್ ನಿಲ್ದಾಣದ ಬಳಿ ರೂ.4 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಸುಸಜ್ಜಿತ ಹವಾನಿಯಂತ್ರಿತ ಸಭಾಭವನ ಹಾಗೂ ವಾಣಿಜ್ಯ ಸಂಕೀರ್ಣ ಈ ಕಟ್ಟಡದಲ್ಲಿದೆ. ಸಂಘವು ಮಹಿಳಾ ಸಶಕ್ತೀಕರಣಕ್ಕಾಗಿ 279 ಕಲ್ಪತರು ಮಹಿಳಾ ಸ್ವಸಹಾಯ ಗುಂಪುಗಳನ್ನು ಪ್ರಾಯೋಜಿಸಿದ್ದು ರೂ.5.56 ಕೋಟಿ ಸಾಲ ಸೌಲಭ್ಯ ಒದಗಿಸಿದೆ. ಸಂಘದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ, ಸದಸ್ಯರ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ, ಉನ್ನತ ವ್ಯಾಸಂಗ ನಿಧಿಯಿಂದ ವಿಧ್ಯಾರ್ಥಿವೇತನ, ಸಂಘದ ಸದಸ್ಯರಿಗೆ ಸಾಮೂಹಿಕ ವಿಮೆ, ಮರಣ ನಿಧಿ, ಸದಸ್ಯರ ಸಹಾಯಕ ನಿಧಿ ಮೂಲಕ ಅನಾರೋಗ್ಯಕ್ಕೆ ಒಳಗಾದ ಸದಸ್ಯರಿಗೆ ಸಹಾಯಹಸ್ತ, ಸದಸ್ಯರ ಕ್ಷೇಮಾಭಿವೃದ್ಧಿ ನಿಧಿಯಿಂದ ರೂ. 1 ಲಕ್ಷ ವೈಯಕ್ತಿಕ ಸಾಲ ಹಾಗೂ ಸ್ವಸಹಾಯ ಗುಂಪಿನ ಸಾಲ ಪಡೆದ ಸದಸ್ಯರು ಮೃತರಾದಲ್ಲಿ ಬಾಕಿ ಸಾಲದ ಮೊತ್ತದ ಶೇಕಡಾ 25ರಷ್ಟನ್ನು ಕ್ಷೇಮಾಭಿವೃದ್ಧಿ ನಿಧಿಯಿಂದ ಭರಿಸಲಾಗುತ್ತಿದೆ ಎಂದು ವಾರ್ಷಿಕ ಮಹಾಸಭೆಯ ವರದಿಯಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕೆಮ್ಮಣ್ಣು ತಿಳಿಸಿದರು.
    ಸಂಘದ ಉಪಾಧ್ಯಕ್ಷ ಜಯರಾಮ ಪೂಜಾರಿ ಬಾರ್ಕೂರು, ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ, ಪಿ.ಕೃಷ್ಣ ಪೂಜಾರಿ ಪಾರಂಪಳ್ಳಿ, ನಿರ್ದೇಶಕರಾದ ಜಿ.ಸಂಜೀವ ಪೂಜಾರಿ ಕೋಡಿ, ರಾಮ ಪೂಜಾರಿ, ಮಂಜುನಾಥ ಪೂಜಾರಿ ಬಂಡೀಮಠ, ಕೃಷ್ಣ ಪೂಜಾರಿ ಪಿ. ಕೋಡಿ ಕನ್ಯಾಣ, ಪ್ರಭಾವತಿ ಡಿ. ಬಿಲ್ಲವ ಕೋಟ, ಭಾರತಿ ಎಸ್.ಪೂಜಾರಿ ಕರಿಕಲ್‌ಕಟ್ಟೆ, ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಕೃಷ್ಣ ಹಾಗೂ ಶ್ರೀದೇವಿ ಕಲ್ಕೂರ ಉಪಸ್ಥಿತರಿದ್ದರು. ಹಿರಿಯ ವ್ಯವಸ್ಥಾಪಕರಾದ ಉದಯ ಪೂಜಾರಿ ಕೋಡಿ ಅತಿಥಿಗಳನ್ನು ಗೌರವಿಸಿದರು. ಕೋಟ ಶಾಖೆಯ ಹಿರಿಯ ವ್ಯವಸ್ಥಾಪಕ ದಿನೇಶ್ ಪೂಜಾರಿ ಬಾರ್ಕೂರು ಸ್ವಾಗತಿಸಿ, ನಿತೇಶ್ ಹಂದಟ್ಟು ವಂದಿಸಿದರು, ಹಿರಿಯ ವ್ಯವಸ್ಥಾಪಕರಾದ ರಮೇಶ್ ಪೂಜಾರಿ ಬಾರ್ಕೂರು ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Banking Co Operative ministry Cooperative Cooperative Department Cooperative Registrar Jagadish Kemmannu K.Koraga Poojary Kota Murtedaarara Sahakari Sangha
    Previous Articleದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಪರಿಸರ ದಿನಾಚರಣೆ, ಬೈರಾಡಿ ಕೆರೆ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

    Related Posts

    ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅಜ್ಜಿನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

    June 11, 2026

    ವಿಕಸಿತ ಭಾರತ ಪರಿಕಲ್ಪನೆಗೆ ಗಮನಾರ್ಹ ಕೊಡುಗೆ

    June 10, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯಲ್ಲಿ ಗ್ರಾಹಕರ ಸಭೆ

    June 10, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅಜ್ಜಿನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

    June 11, 2026

    ವಿಕಸಿತ ಭಾರತ ಪರಿಕಲ್ಪನೆಗೆ ಗಮನಾರ್ಹ ಕೊಡುಗೆ

    June 10, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯಲ್ಲಿ ಗ್ರಾಹಕರ ಸಭೆ

    June 10, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.