ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಳದಂಗಡಿ ಶಾಖೆಯ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ರಕ್ತದಾನ ಶಿಬಿರವು ಅಳದಂಗಡಿಯ ಶ್ರೀ ಗುರು ಸಭಾಭವನದಲ್ಲಿ ಜರುಗಿತು.
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಬಳಂಜ ಇದರ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ ಸಮಾಜದಲ್ಲಿ ಶ್ರೀಮಂತ ವ್ಯಕ್ತಿ ಎಂದರೆ ಹಣ ಇರುವವನಲ್ಲ, ಒಳ್ಳೆಯ ಆರೋಗ್ಯ ಇರುವ ವ್ಯಕ್ತಿ ಶ್ರೀಮಂತ. ಈ ನಿಟ್ಟಿನಲ್ಲಿ ನಿರಂತರವಾಗಿ ಶಿಬಿರಗಳನ್ನು ಆಯೋಜಿಸಿ ಉತ್ತಮ ಆರೋಗ್ಯಪೂರ್ಣ ಸಮಾಜ ನಿರ್ಮಿಸುವಲ್ಲಿ ಆತ್ಮಶಕ್ತಿ ಸಹಕಾರ ಸಂಘದ ಪಾತ್ರ ಹೆಚ್ಚಿದೆ. ಸಂಘದ ಅಧ್ಯಕ್ಷರಾದಚಿತ್ತರಂಜನ್ ಬೋಳಾರ್ ಅವರ ಬದಲಾವಣೆಯ ದೃಷ್ಟಿಕೋನ ಹಾಗೂ ಮಹಿಳಾ ಸಬಲೀಕರಣದಿಂದ ಸಂಘವು ಅಭಿವೃದ್ಧಿ ಪಥದತ್ತ ಮುನ್ನುಗುತ್ತಿದೆ ಎಂದು ಶ್ಲಾಘಿಸಿದರು.
https://chat.whatsapp.com/FCEnlTkAKCC0MGPhXtX4i4
ಸಂಘದ ಅಳದಂಗಡಿ ಶಾಖೆಯ ಕಟ್ಟಡದ ಮಾಲೀಕ ವಿಶ್ವನಾಥ ಕುದ್ಯಾಡಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಊರಿನ ಸಂಘ ಸಂಸ್ಥೆಗಳ ಜೊತೆಗೆ ಎಲ್ಲಾ ಹಿರಿಯರನ್ನು ಒಟ್ಟುಗೂಡಿಸಿ ಮಾಡುತ್ತಿರುವ ವೈದ್ಯಕೀಯ ಶಿಬಿರವು ಸಮಾಜಮುಖಿ ಚಟುವಟಿಕೆಯಾಗಿದ್ದು, ಇಂತಹ ಕಾರ್ಯಕ್ರಮವನ್ನು ಆಯೋಜಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಅಭಿನಂದನೆ ಸಲ್ಲಿಸಿದರು.
ಜೆಸಿಐ ಬೆಳ್ತಂಗಡಿ ಇದರ ಕಾರ್ಯದರ್ಶಿ ರಕ್ಷಿತ್ ಅಂಡಿಜೆ ಮಾತನಾಡಿ ಆತ್ಮಶಕ್ತಿ ಸಹಕಾರ ಸಂಘವು ಬೇರೆ ಎಲ್ಲಾ ಸಹಕಾರಿ ಸಂಘಗಳಿಗಿ೦ತ ವಿಭಿನ್ನವಾಗಿ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಕಾರ್ಯಚರಿಸುತ್ತಿದೆ” ಎಂದು ಶ್ಲಾಘಿಸಿದರು.
ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೊಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇದರ ಸಾರ್ವಜನಿಕ ಸಂಪರ್ಕ ಅಧಿಕಾರಿ ಭರತ್ ಕುಮಾರ್ ಮಾತನಾಡಿ ರಕ್ತದಾನ ಶ್ರೇಷ್ಠ ದಾನ . ಸಾರ್ವಜನಿಕರ ಆರೋಗ್ಯದ ದೂರದೃಷ್ಟಿಯನ್ನು ಗಮನದಲ್ಲಿಸಿ ಶಿಬಿರಗಳನ್ನು ಆಯೋಜಿಸುತ್ತಿರುವುದಕ್ಕೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಅಭಿನಂದನೆಗಳನ್ನು ಸಲ್ಲಿಸಿ, ಶಿಬಿರದಲ್ಲಿ ಲಭ್ಯವಿರುವ ಸೇವೆಗಳ ಬಗ್ಗೆ ತಿಳಿಸಿ, ಸೇವೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಿನಂತಿಸಿದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 14 ವರ್ಷಗಳಿಂದ ಆರೋಗ್ಯ ಶಿಬಿರವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಇದು ಸಂಘದ 110ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಹಣಕಾಸಿನಲ್ಲಿ ನಾವು ಎಷ್ಟೇ ಸದೃಢರಿದ್ದರೂ, ಆರೋಗ್ಯವು ನಮಗೆ ಮುಖ್ಯ. ಇಂತಹ ಉಚಿತ ಆರೋಗ್ಯ ಶಿಬಿರಗಳಲ್ಲಿ ತಪಾಸಣೆ ಮಾಡಿಸುವುದರ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬಹುದು. ಗ್ರಾಮೀಣ ಪ್ರದೇಶದ ಜನರ ಆರೋಗ್ಯದ ದೃಷ್ಟಿಯನ್ನು ಗಮನದಲ್ಲಿರಿಸಿ ಗ್ರಾಮೀಣ ಭಾಗದಲ್ಲಿ ಇಂತಹ ಶಿಬಿರವನ್ನು ಸಂಘವು ಆಯೋಜಿಸಿರುತ್ತದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಈ ಶಿಬಿರವು ಅಳದಂಗಡಿ ಪರಿಸರದ ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರ ನೀಡಿದೆ. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ಯೆನೆಪೊಯ ದಂತ ಕಾಲೇಜು ಮತ್ತು ಆಸ್ಪತ್ರೆ ,ದೇರಳಕಟ್ಟೆ ಹಾಗೂ ರಕ್ತದಾನ ವಿಭಾಗ, ಯೆನೆಪೋಯ ಆಸ್ಪತ್ರೆಯ ಸಿಬ್ಬಂದಿ ವರ್ಗದವರಿಗೂ, ಸಹಕರಿಸಿದ ಎಲ್ಲಾ ಸಂಘ -ಸಂಸ್ಥೆಗಳಿಗೂ ಕೃತಜ್ಞತೆ ಸಲ್ಲಿಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮಾನಾಥ್ ಸನಿಲ್, ಗೋಪಾಲ್ ಎಂ., ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಶಿರ್ಲಾಲು ಇದರ ಉಪಾಧ್ಯಕ್ಷ ಹರೀಶ್ಚಂದ್ರ ಕಲ್ಲಾಜೆ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರದ ಮೆಡಿಕಲ್ ಆಫೀಸರ್ ಡಾ.ಶಿರಿಶ್, ಸಮುದಾಯ ದಂತ ವಿಭಾಗದ ಉಪನ್ಯಾಸಕರಾದ ಡಾ.ಮಿಫ್ರಾ, ಹಿರಿಯ ವೈದಕೀಯ ಸಮಾಜ ಸೇವಾ ಅಧಿಕಾರಿ ಡಾ.ಸ್ವೀಕೃತಾ ಮತ್ತಿತರರು ಉಪಸ್ಥಿತರಿದ್ದರು.
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಬಳಂಜ, ಜೆಸಿಐ ಬೆಳ್ತಂಗಡಿ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಶಿರ್ಲಾಲು ಹಾಗೂ ಯುವಶಕ್ತಿ ನಾವುರ ಇವರ ಜಂಟಿ ಸಹಯೋಗದೊಂದಿಗೆ ಶಿಬಿರ ಆಯೋಜನೆ ಮಾಡಲಾಗಿತ್ತು. ಶಿಬಿರದಲ್ಲಿ ವಿಶೇಷವಾಗಿ ಬಸವ ಆಕ್ಯೂ ಅಕಾಡೆಮಿಯ ಡಾ.ಬಸವರಾಜ್ ಕೆ. ಅವರ ವಿದ್ಯಾರ್ಥಿ ಸುಕೇಶ್ ಜೈನ್ ತಂಡದಿ೦ದ ಕಲರ್ ಥೆರಪಿಯನ್ನು ಆಯೋಜಿಸಲಾಗಿತ್ತು. 150ಕ್ಕೂ ಅಧಿಕ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಳದಂಗಡಿ ಶಾಖೆಯ ಗುಮಾಸ್ತೆ ಸ್ವಾತಿ ಎಸ್. ಸ್ವಾಗತಿಸಿ, ಮೂಡುಬಿದಿರೆ ಶಾಖೆಯ ಹಿರಿಯ ಶಾಖಾಧಿಕಾರಿ ರವಿಕಲಾ ವಂದಿಸಿದರು. ಅಳದಂಗಡಿ ಶಾಖೆಯ ಶಾಖಾಧಿಕಾರಿ ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com




