Close Menu
    Top News

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ
    News

    ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

    adminBy adminJune 9, 2026

    ಉಡುಪಿ: ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಮೂರು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯು ಎಂಜಿಎಂ ಕಾಲೇಜು ಆವರಣದ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು.

    https://chat.whatsapp.com/FCEnlTkAKCC0MGPhXtX4i4
    ಸೊಸೈಟಿಯ ಅಧ್ಯಕ್ಷೆ ಜೆಸಿಂತಾ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಉಡುಪಿ ವಿಭಾಗದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಸೊಸೈಟಿಯ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
    ಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ, ವಾರ್ಷಿಕ ವರದಿ ಮಂಡಿಸಿದರು. ಗತ ವರ್ಷದಲ್ಲಿ 19 ಕೋಟಿ ರೂ. ವ್ಯವಹಾರ ಆಗಿದ್ದು, ಸೊಸೈಟಿ ಪ್ರಸ್ತುತ 19.50 ಲಕ್ಷ ರೂ. ಲಾಭದಲ್ಲಿದೆ. ಎರಡು ವರ್ಷಗಳ ಬೆಳವಣಿಗೆಯಲ್ಲಿ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸಿದರು.
    ಕಳೆದ ಮೂರು ವರ್ಷಗಳಲ್ಲಿ ಗ್ರಾಹಕರಿಂದ ಸೊಸೈಟಿಗೆ ಉತ್ತಮ ವ್ಯವಹಾರ ದೊರಕಿದ್ದು, ದಿನೇದಿನೆ ಉತ್ತಮ ಪ್ರಗತಿ ಹೊಂದುತ್ತಿದೆ. ಗೃಹ, ಚಿನ್ನಾಭರಣ ಮತ್ತು ವಾಹನ ಸಾಲ ನೀಡಲಾಗುತ್ತಿದೆ. ಮಾತ್ರವಲ್ಲದೆ ನಿರ್ದೇಶಕರುಗಳ ಸಹಕಾರದೊಂದಿಗೆ ವಿವಿಧ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಉಡುಪಿ ಸಿಂಡಿಕೇಟ್ ಸೌಹಾರ್ದ ಸೊಸೈಟಿ ಮಾಡುತ್ತಿದೆ ಎಂದು ಸೊಸೈಟಿಯ ಉಪಾಧ್ಯಕ್ಷ ಅಜಯ್ ಕುಮಾರ್ ತಿಳಿಸಿದರು.


    ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪತ್ರ ಮತ್ತು ಮುಂದಿನ ಯೋಜನೆಗಳನ್ನು ಮಂಡಿಸಲಾಯಿತು. ಸೊಸೈಟಿ ನಿರ್ದೇಶಕರಾದ ಪ್ರಶಾಂತ್ ಕುಮಾರ್, ರೋಹನ್ ಕುಲಾಸೋ, ಜೂಡ್ ನೆಲ್ಸನ್ ಡಿಸೋಜ, ಗುರುಚರಣ್, ಪ್ರತಿಭಾ, ಸೀಮಾ, ಪ್ರಶಾಂತಿ ಪ್ರಿಯ ಕಸ್ತಲಿನೋ, ಅಜಿತ್ ಉಪಸ್ಥಿತರಿದ್ದರು. ಸೊಸೈಟಿಯ ಸಿಬ್ಬಂದಿಗಳು ಪ್ರಾರ್ಥನಾ ಗೀತೆ ಹಾಡಿದರು. ಹಾಜರಾದ ಎಲ್ಲಾ ಸದಸ್ಯರಿಗೂ ಭೋಜನ ವ್ಯವಸ್ಥೆ ಮತ್ತು ನೆನಪಿನ ಕಾಣಿಕೆ ನೀಡಲಾಯಿತು.
    ಪ್ರಧಾನ ಶಾಖೆ ವ್ಯವಸ್ಥಾಪಕಿ ಫೆಲ್ಸಿ ಡಿಸೋಜ ಸ್ವಾಗತಿಸಿದರು, ಲೆಕ್ಕ ವ್ಯವಸ್ಥಾಪಕರಾದ ಕುಮಾರ್ ಎಚ್.ಎನ್ ಧನ್ಯವಾದ ಸಮರ್ಪಿಸಿದರು. ನಿರ್ದೇಶಕ ಸ್ಟೀವನ್ ಕುಲಾಸೊ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Co Operative ministry Cooperative Cooperative Department Cooperative Registrar Jecintha Dsouza Jeevan Dsouza Udupi MGM College Udupi Syndicate Credit Souharda Co Operative Society
    Previous Articleಸಂಸ್ಕಾರಯುತ, ಪ್ರಾಮಾಣಿಕ ವ್ಯಕ್ತಿಗಳಿಂದ ಸಹಕಾರ ಕ್ಷೇತ್ರದಲ್ಲಿ ವಿಶ್ವಾಸಾರ್ಹತೆ ಸಾಧ್ಯ
    Next Article ಪ್ರಾಮಾಣಿಕತೆ ಮೆರೆದ ಹಳೆಯಂಗಡಿ ಪ್ರಿಯದರ್ಶಿನಿ ಸೊಸೈಟಿ ಸಿಬ್ಬಂದಿ

    Related Posts

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.