ಸಿಂಧನೂರು: ವಿದ್ಯಾರ್ಥಿಗಳಿಗೆ ಸಹಕಾರ ಚಳವಳಿಯ ಬಗ್ಗೆ ಮಾಹಿತಿ ನೀಡುವುದು ಅತ್ಯಗತ್ಯವಾಗಿದೆ. ಸಹಕಾರ ಚಳವಳಿ ಆರಂಭವಾದ ಬಗೆ, ಅದರ ಕಾರ್ಯಗಳು ಮತ್ತು ಉಪಯೋಗಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವುದು ಬಹಳ ಮುಖ್ಯವಾಗಿದೆ ಎಂದು ಇಲ್ಲಿನ ಎಕ್ಸಲೆಂಟ್ ಕಾಲೇಜು ಪ್ರಾಂಶುಪಾಲರಾದ ಮಂಜುನಾಥ ಸೋಮಲಾಪುರ ಹೇಳಿದರು.
https://chat.whatsapp.com/FCEnlTkAKCC0MGPhXtX4i4
ಸಿಂಧನೂರಿನ ಎಕ್ಸಲೆಂಟ್ ಕಾಲೇಜಿನಲ್ಲಿ ಮಂಗಳವಾರ ರಾಜ್ಯ ಸಹಕಾರ ಮಹಾಮಂಡಳ, ರಾಯಚೂರು ಜಿಲ್ಲಾ ಸಹಕಾರ ಒಕ್ಕೂಟ ಮತ್ತು ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಯುವ ಜನರಿಗೆ ಕ್ಲಸ್ಟರ್ ಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಸಹಕಾರ ಚಳವಳಿ, ಇತಿಹಾಸ, ಸಹಕಾರ ಸಂಘದ ರಚನೆ ಬಗ್ಗೆ ಜಾಗೃತಿ ಮೂಡಬೇಕಿದೆ. ಅದು ಇಂಥ ತರಬೇತಿಯಿಂದ ಮಾತ್ರ ಸಾಧ್ಯ ಎಂದರು.
ಕಾರ್ಯದರ್ಶಿ ವೆಂಕಟರಾವ್ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಯುವಜನರ ಪಾತ್ರ ಪ್ರಮುಖವಾಗಿದ್ದು, ಇಂಥ ತರಬೇತಿಗಳಲ್ಲಿ ಭಾಗವಹಿಸಿ ಅದರ ಮಾಹಿತಿ ಪಡೆದು ಸದುಪಯೋಗ ಪಡಿಸಿಕೊಳ್ಳಬೇಕು. ಸಹಕಾರ ಕ್ಷೇತ್ರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿ, ಹೆಚ್ಚಿನ ಉದ್ಯೋಗಾವಕಾಶಗಳನ್ನು ಹೊಂದಬೇಕು ಎಂದು ಸಲಹೆ ನೀಡಿದರು. ರಾಯಚೂರು ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯಕಾರ್ಯನಿರ್ವಹಣಾಧಿಕಾರಿ ಗಾಯತ್ರಿ ವೈ. ಮಾತನಾಡಿ, ಕ್ಲಸ್ಟರ್ ತರಗತಿ ಉದ್ದೇಶ, ಮಹತ್ವ ಕುರಿತು ಮಾಹಿತಿ ನೀಡಿ, ಜಿಲ್ಲಾ ಸಹಕಾರ ಒಕ್ಕೂಟದಿಂದ ಆಯೋಜಿಸಿದ್ದ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಗಳು, ವಿವಿಧ ತರಬೇತಿ ಕಾರ್ಯಕ್ರಮಗಳು, ಸಹಕಾರ ಚಳುವಳಿ, ಇತಿಹಾಸ, ತತ್ವಗಳು, ವಿದ್ಯಾರ್ಥಿ ಗ್ರಾಹಕರ ಸಹಕಾರ ಸಂಘದ ರಚನೆ, ಯುವ ನಾಯಕತ್ವ ಕುರಿತು ಮಾಹಿತಿ ನೀಡಿದರು. ಕಾಲೇಜು ಉಪನ್ಯಾಸಕ ಮೆಹಬೂಬ್ ಪಾಷಾ ಹಾಜರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

