ಚನ್ನರಾಯಪಟ್ಟಣ: ಇಲ್ಲಿನ ನುಗ್ಗೆಹಳ್ಳಿ ಶ್ರೀ ಗುರು ರಾಘವೇಂದ್ರ ಸೌಹಾರ್ದ ಸಹಕಾರಿ ಸಂಘದ ಪ್ರಾರಂಭೋತ್ಸವ ಹಾಗೂ ಉದ್ಘಾಟನಾ ಕಾರ್ಯಕ್ರಮ ಭಾನುವಾರ ಸಂಘದ ಕಚೇರಿಯಲ್ಲಿ ನಡೆಯಿತು.
https://chat.whatsapp.com/FCEnlTkAKCC0MGPhXtX4i4
ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಜಿಲ್ಲೆಯ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ನೆರವೇರಿಸಿದರು. ಮುಖ್ಯ ಅತಿಥಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಸೌಹಾರ್ದ ಕಾಯ್ದೆಯ ಕುರಿತು ಮಾಹಿತಿ ನೀಡಿ, ನೂತನ ಆಡಳಿತ ಮಂಡಳಿ ಸದಸ್ಯರಿಗೆ ಸಂಯುಕ್ತ ಸಹಕಾರಿ ಪರವಾಗಿ ಅಭಿನಂದನೆ ತಿಳಿಸಿದರು. ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ನುಗ್ಗೇಹಳ್ಳಿ ಇದರ ಅಧ್ಯಕ್ಷರಾದ ಎನ್.ಡಿ ಶಿವಪ್ಪ, ಸಹಕಾರಿಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com


