Close Menu
    Top News

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಕಲ್ಲಡ್ಕ ಶ್ರೀರಾಮ ಕಾಲೇಜಿನ ವಿದ್ಯಾರ್ಥಿಗೆ ಗೌರವ ಅಭಿನಂದನೆ

    June 23, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸೌಹಾರ್ದ ಸಹಕಾರಿಗಳ ಒಕ್ಕೂಟದ ಉದ್ದೇಶ, ಕಾರ್ಯ ಶ್ಲಾಘನೀಯ

    June 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಕಲ್ಲಡ್ಕ ಶ್ರೀರಾಮ ಕಾಲೇಜಿನ ವಿದ್ಯಾರ್ಥಿಗೆ ಗೌರವ ಅಭಿನಂದನೆ
    News

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಕಲ್ಲಡ್ಕ ಶ್ರೀರಾಮ ಕಾಲೇಜಿನ ವಿದ್ಯಾರ್ಥಿಗೆ ಗೌರವ ಅಭಿನಂದನೆ

    adminBy adminJune 23, 2026

    ಬಂಟ್ವಾಳ: 2025-2026ನೇ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 600ಕ್ಕೆ 594 ಅಂಕಗಳನ್ನು ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ ಏಳನೇ ರ್ಯಾಂಕ್‌ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ, ಬಂಟ್ವಾಳ ತಾಲೂಕು ಕೊಯಿಲ ಗ್ರಾಮದ ಉಮೇಶ್ ಪೂಜಾರಿ -ಪುಷ್ಪಾವತಿ ದಂಪತಿಯ ಪುತ್ರ ಪ್ರೀತೇಶ್ ಎಂಬವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳ್ಳಿಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಗೌರವಿಸಿ ಅಭಿನಂದಿಸಲಾಯಿತು.

    https://chat.whatsapp.com/FCEnlTkAKCC0MGPhXtX4i4
    ಅಭಿನಂದಿಸಿ ಮಾತನಾಡಿದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಸಿದ್ದಕಟ್ಟೆ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿ ಪ್ರೀತೇಶ್ ತನ್ನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾಬ್ಯಾಸವನ್ನು ಸರಕಾರಿ ಶಾಲೆಯಲ್ಲಿ ಅಭ್ಯಾಸ ಮಾಡಿ ಇದೀಗ ಕಲ್ಲಡ್ಕ ಶ್ರೀರಾಮ ಕಾಲೇಜಿನಲ್ಲಿ ಕಲಿತು ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಏಳನೇ ಸ್ಥಾನ ಪಡೆದಿರುವುದು ಸಂಘಕ್ಕೂ ಹೆಮ್ಮೆಯ ವಿಚಾರವಾಗಿದ್ದು, ಸರಕಾರಿ ಶಾಲೆಯಲ್ಲಿ ಪ್ರಾರಂಭದ ಶಿಕ್ಷಣ ಪಡೆದುಕೊಂಡು ಉನ್ನತ ಸ್ಥಾನ ಪಡೆಯಲು ಸಾಧ್ಯವಿದೆ ಎಂಬುದನ್ನು ಇತರ ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳಿಗೂ ಮಾದರಿಯಾಗಿದ್ದಾರೆ ಎಂದರು.
    ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ ಮತ್ತು ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ ,ರಶ್ಮಿತ್ ಶೆಟ್ಟಿಯವರು ಮುಂದಿನ ಶೈಕ್ಷಣಿಕ ವರ್ಷಗಳಲ್ಲಿಯೂ ಇದೇ ರೀತಿಯ ಪ್ರಗತಿಯೊಂದಿಗೆ ಸಾಧನೆಯನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪ್ರೀತೇಶ್ ಸಂಘದ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು. ನಿರ್ದೇಶಕರಾದ ದಿನೇಶ್ ಪೂಜಾರಿ ಹುಲಿಮೆರು, ಚಂದ್ರಶೇಖರ ಶೆಟ್ಟಿ ಅರಳ, ವಿಶ್ವನಾಥ್ ಶೆಟ್ಟಿಗಾರ್ ಸಂಗಬೆಟ್ಟು, ಜಾರಪ್ಪ ನಾಯ್ಕ, ವೀರಪ್ಪ ಪರವ, ಎ ಶಿವ ಗೌಡ ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ ಹೆಗ್ಡೆ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಪ್ರತಿನಿಧಿ ಕೀರ್ತಿರಾಜ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ, ಪ್ರಮುಖರಾದ ಮೋಹನ್ ಕೊಯಿಲ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Bellipadi Krishna Rai Sabhangana Kalladka Shree Rama PU College Prabhakara Prabhu Siddakatte Prathamika Krushi Pattina Sahakara Sangha
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

    Related Posts

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸೌಹಾರ್ದ ಸಹಕಾರಿಗಳ ಒಕ್ಕೂಟದ ಉದ್ದೇಶ, ಕಾರ್ಯ ಶ್ಲಾಘನೀಯ

    June 22, 2026

    ಶ್ರೀ ಗುರು ರಾಘವೇಂದ್ರ ಸೌಹಾರ್ದ ಸಹಕಾರಿ ಸಂಘದ ಪ್ರಾರಂಭೋತ್ಸವ

    June 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಕಲ್ಲಡ್ಕ ಶ್ರೀರಾಮ ಕಾಲೇಜಿನ ವಿದ್ಯಾರ್ಥಿಗೆ ಗೌರವ ಅಭಿನಂದನೆ

    June 23, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    ಸೌಹಾರ್ದ ಸಹಕಾರಿಗಳ ಒಕ್ಕೂಟದ ಉದ್ದೇಶ, ಕಾರ್ಯ ಶ್ಲಾಘನೀಯ

    June 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.