Close Menu
    Top News

    ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಐದನೇ ಶಾಖೆ ಉಪ್ಪಿನಂಗಡಿಯಲ್ಲಿ ಜುಲೈ 4ರಂದು ಲೋಕಾರ್ಪಣೆ

    June 30, 2026

    ಕಥೊಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬ್ರಹ್ಮಾವರದ ಸಿಬ್ಬಂದಿ ತರಬೇತಿ ಕಾರ್ಯಾಗಾರ

    June 30, 2026

    ಜುಲೈ 4ರಂದು ಹೇರೂರಿನಲ್ಲಿ ವಿಶೇಷ ಉಪನ್ಯಾಸ, ಸಂವಾದ ಕಾರ್ಯಕ್ರಮ

    June 30, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜುಲೈ 4ರಂದು ಹೇರೂರಿನಲ್ಲಿ ವಿಶೇಷ ಉಪನ್ಯಾಸ, ಸಂವಾದ ಕಾರ್ಯಕ್ರಮ
    News

    ಜುಲೈ 4ರಂದು ಹೇರೂರಿನಲ್ಲಿ ವಿಶೇಷ ಉಪನ್ಯಾಸ, ಸಂವಾದ ಕಾರ್ಯಕ್ರಮ

    adminBy adminJune 30, 2026

    ವಿಶೇಷ ಸಹಕಾರ ಸಪ್ತಾಹ ಅಂಗವಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಕಾರ್ಯಕ್ರಮ

    ಉಡುಪಿ: ಕೇಂದ್ರ ಸಹಕಾರ ಸಚಿವಾಲಯವು ತನ್ನ ಸ್ಥಾಪನೆಯ ಐದು ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನಲೆಯಲ್ಲಿ ದೇಶಾದ್ಯಂತ ‘ವಿಶೇಷ ಸಹಕಾರ ಸಪ್ತಾಹ’ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ಜುಲೈ 4ರಂದು ಶನಿವಾರ ಬ್ರಹ್ಮಾವರ ಹೇರೂರಿನ ದೇವಕಿ ಕನ್ವೆನ್ಶನ್‌ ಹಾಲ್‌ನಲ್ಲಿ ಸಹಕಾರದಿಂದ ಸಮೃದ್ಧಿ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದ್ದು ಇದರಲ್ಲಿ ಉಪನ್ಯಾಸ ಹಾಗೂ ಸಂವಾದ ಏರ್ಪಡಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಸಹಕಾರದಿಂದ ಸಮೃದ್ಧಿ ಎಂಬ ಧ್ಯೇಯವಾಕ್ಯದೊಂದಿಗೆ ಕೇಂದ್ರ ಸಹಕಾರ ಸಚಿವಾಲಯವು ಕಾರ್ಯತತ್ಪರವಾಗಿದ್ದು, ಈ ಒಂದು ವಾರದ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರವು ನೀಡಿರುವ ಕೊಡುಗೆಗಳು, ಸಾಧನೆಗಳು ಹಾಗೂ ಕೈಗೊಂಡಿರುವ ವಿವಿಧ ಉಪಕ್ರಮಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಪ್ರಚಾರ, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹೇರೂರಿನಲ್ಲಿ ನಡೆಯುವ ಕಾರ್ಯಕ್ರಮವನ್ನು ಉಡುಪಿ -ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ ವಿಧಾನಸಭಾ ಸದಸ್ಯರಾದ ಯಶ್‌ಪಾಲ್ ಸುವರ್ಣ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಭಾರತಿ ಜಿ ಭಟ್, ವೃತ್ತಿಪರ ನಿರ್ದೇಶಕರಾದ ಮಹದೇವ ಸ್ವಾಮಿ, ವ್ಯವಸ್ಥಾಪಕ ನಿರ್ದೇಶಕರಾದ ಶರಣಗೌಡ ಜಿ ಪಾಟೀಲ ಮತ್ತು ಉಡುಪಿಯ ಟೀಚರ್ಸ್‌ ಕೋ-ಆಪರೇಟಿವ್ ಬ್ಯಾಂಕ್ ಇದರ ಅಧ್ಯಕ್ಷರಾದ ದಿನಕರ ಶೆಟ್ಟಿ, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷರಾದ ಅಂಪಾರು ಜಗನ್ನಾಥ ಶೆಟ್ಟಿ ಹಾಗೂ ರಜಿತ್ ಟಿ.ಕೆ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಮಂಜುನಾಥ ಎಸ್. ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ಜಿಲ್ಲೆಯ ಹಿರಿಯ ಸಹಕಾರಿ ಧುರೀಣರೊಂದಿಗೆ “ಸಹಕಾರ ಚಳುವಳಿಯ ಪ್ರಸಕ್ತ ಬೆಳವಣಿಗೆಯ ಕುರಿತು” ಸಂವಾದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ 155 ಸೌಹಾರ್ದ ಸಹಕಾರಿಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Karnataka Rajya Souharda Samyuktha Sahakari Bengaluru Kota Shrinivas Poojary Sahakar Se Samruddhi Special Co Operative Week Yashpal Suvarna
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಡುಬಿದ್ರಿ ಶಾಖೆಯ ನಾಲ್ಕನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ
    Next Article ಕಥೊಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬ್ರಹ್ಮಾವರದ ಸಿಬ್ಬಂದಿ ತರಬೇತಿ ಕಾರ್ಯಾಗಾರ

    Related Posts

    ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಐದನೇ ಶಾಖೆ ಉಪ್ಪಿನಂಗಡಿಯಲ್ಲಿ ಜುಲೈ 4ರಂದು ಲೋಕಾರ್ಪಣೆ

    June 30, 2026

    ಕಥೊಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬ್ರಹ್ಮಾವರದ ಸಿಬ್ಬಂದಿ ತರಬೇತಿ ಕಾರ್ಯಾಗಾರ

    June 30, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಡುಬಿದ್ರಿ ಶಾಖೆಯ ನಾಲ್ಕನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ

    June 30, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಐದನೇ ಶಾಖೆ ಉಪ್ಪಿನಂಗಡಿಯಲ್ಲಿ ಜುಲೈ 4ರಂದು ಲೋಕಾರ್ಪಣೆ

    June 30, 2026

    ಕಥೊಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬ್ರಹ್ಮಾವರದ ಸಿಬ್ಬಂದಿ ತರಬೇತಿ ಕಾರ್ಯಾಗಾರ

    June 30, 2026

    ಜುಲೈ 4ರಂದು ಹೇರೂರಿನಲ್ಲಿ ವಿಶೇಷ ಉಪನ್ಯಾಸ, ಸಂವಾದ ಕಾರ್ಯಕ್ರಮ

    June 30, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.