ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಸಂಜಯ ಪಾಟೀಲ ಸಲಹೆ
ವಿಜಯಪುರ: ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ‘ಸಹಕಾರದಿಂದ ಸಮೃದ್ಧಿ’ ಎಂಬ ಧ್ಯೇಯವಾಕ್ಯದೊಂದಿಗೆ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು, ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟ ನಿ., ವಿಜಯಪುರ ಹಾಗೂ ಶಾಂತಿನಿಕೇತನ ಶಿಕ್ಷಣ ಸಂಸ್ಥೆ, ವಿಜಯಪುರ ಇವರ ಸಹಯೋಗದೊಂದಿಗೆ ಬುಧವಾರ ಸಹಕಾರ ವಿಚಾರ ಸಂಕಿರಣ ಕಾರ್ಯಕ್ರಮವನ್ನು ವಿಜಯಪುರದ ಶಾಂತಿನಿಕೇತನ ಕಾಲೇಜು ಭವನದಲ್ಲಿ ಆಯೋಜಿಸಲಾಗಿತ್ತು.
https://chat.whatsapp.com/FCEnlTkAKCC0MGPhXtX4i4
ಶಾಂತಿನಿಕೇತನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುರೇಶ ಬಿರಾದಾರ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಸಂಜಯ ಬ.ಪಾಟೀಲ ಮಾತನಾಡಿ, ಯುವಕರು, ಮಹಿಳೆಯರು ಸಹಕಾರಿ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಂಡು ವಿಕಸಿತ ಭಾರತ ಆಗಲು ಕೈಜೋಡಿಸಬೇಕು ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಗಳಾಗಿ ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟ ನಿ., ವಿಜಯಪುರ, ಇದರ ಉಪಾಧ್ಯಕ್ಷರಾದ ಚಂದ್ರಶೇಖರ ಕವಟಗಿ, ಒಕ್ಕೂಟದ ನಿರ್ದೇಶಕರಾದ ಸಿದ್ಧು ಮಲ್ಲಿಕಾರ್ಜುನ ಮಠ, ಅರುಣ ಎಸ್. ಮಠ, ಅರುಣ ಆರ್. ವಾರದ ಇವರುಗಳು ಉಪಸ್ಥಿತರಿದ್ದರು.
ಒಕ್ಕೂಟದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಂಪನಗೌಡ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಅರುಣ ಆರ್. ವಾರದ ಸ್ವಾಗತಿಸಿದರು. ಚಂದ್ರಶೇಖರ ಕವಟಗಿ ಪ್ರಾಸ್ತಾವಿಕ ಮಾತನಾಡಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ಬಸವರಾಜ ಎಸ್ ವಂದಿಸಿದರು.
ʼಸಹಕಾರ ಕ್ಷೇತ್ರದ ಪರಿಚಯ ಮತ್ತು ಕಾರ್ಯವೈಖರಿಗಳುʼ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿವೃತ್ತ ಉಪಪ್ರಧಾನ ವ್ಯವಸ್ಥಾಪಕರಾದ ಆರ್.ಎಮ್.ಬಣಕಾರ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಸೌಹಾರ್ದ ಸಹಕಾರಿಗಳು ಮತ್ತು ಶಾಂತಿನಿಕೇತನ ಶಿಕ್ಷಣ ಸಂಸ್ಥೆಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೇರಿದಂತೆ ಪ್ರತಿನಿಧಿಗಳು ಭಾಗವಹಿಸಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com





