Close Menu
    Top News

    ಸಹಕಾರಿ ಸಂಘವು ಸಮುದಾಯದ ಆರ್ಥಿಕ ಶಕ್ತಿಯಾಗಲಿ

    July 3, 2026

    ವಿಶ್ವಕರ್ಮ ಸಹಕಾರ ಬ್ಯಾಂಕಿಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

    July 3, 2026

    ಎಲ್ಲ ವಲಯಗಳಲ್ಲೂ ಸಹಕಾರ ಕ್ಷೇತ್ರದ ಬೇರು

    July 3, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಶ್ವಕರ್ಮ ಸಹಕಾರ ಬ್ಯಾಂಕಿಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ
    News

    ವಿಶ್ವಕರ್ಮ ಸಹಕಾರ ಬ್ಯಾಂಕಿಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

    adminBy adminJuly 3, 2026

    ಸಿಬ್ಬಂದಿಗಳೊಂದಿಗೆ ಸಂವಾದ: ಬ್ಯಾಂಕಿಂಗ್ ಸೇವೆ, ಸಾಮಾಜಿಕ ಬದ್ಧತೆಗೆ ಮೆಚ್ಚುಗೆ

    ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ಮಂಗಳೂರಿನ ರಥಬೀದಿಯಲ್ಲಿರುವ ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿಮಿಟೆಡ್‌ನ ಪ್ರಧಾನ ಕಚೇರಿಗೆ ಭೇಟಿ ನೀಡಿದರು.

    https://chat.whatsapp.com/FCEnlTkAKCC0MGPhXtX4i4

    ಈ ಸಂದರ್ಭದಲ್ಲಿ ಬ್ಯಾಂಕಿನ ಬೆಳವಣಿಗೆ, ಗ್ರಾಹಕ ಸೇವೆ, ಡಿಜಿಟಲ್ ಬ್ಯಾಂಕಿಂಗ್, ಸಾಮಾಜಿಕ ಹೊಣೆಗಾರಿಕೆ ಹಾಗೂ ಸಹಕಾರ ಕ್ಷೇತ್ರದಲ್ಲಿ ಬ್ಯಾಂಕ್ ಸಲ್ಲಿಸುತ್ತಿರುವ ವಿವಿಧ ಸೇವೆಗಳ ಕುರಿತು ಅವರು ಮಾಹಿತಿ ಪಡೆದರು. ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಸಂಸದರು, ಹಲವು ದಶಕಗಳಿಂದ ವಿಶ್ವಾಸಾರ್ಹ ಬ್ಯಾಂಕಿಂಗ್ ಸೇವೆ ನೀಡುತ್ತಿರುವ ವಿಶ್ವಕರ್ಮ ಸಹಕಾರ ಬ್ಯಾಂಕ್ ತನ್ನ ಸ್ವರ್ಣ ಸಂಭ್ರಮದ ಅಂಗವಾಗಿ ಆಡಂಬರದ ಕಾರ್ಯಕ್ರಮಗಳಿಗೆ ಒತ್ತು ನೀಡದೆ, ಸ್ವಚ್ಛತಾ ಅಭಿಯಾನ, ಸದಸ್ಯ ಕಲ್ಯಾಣ ಯೋಜನೆಗಳು ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿರುವುದು ಶ್ಲಾಘನೀಯ ಹಾಗೂ ಇತರ ಸಹಕಾರ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.

    ಸಹಕಾರ ಬ್ಯಾಂಕುಗಳು ಸಮಾಜದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಗ್ರಾಹಕರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪಾರದರ್ಶಕತೆ, ಪ್ರಾಮಾಣಿಕತೆ ಹಾಗೂ ಸೇವಾ ಮನೋಭಾವಕ್ಕೆ ಆದ್ಯತೆ ನೀಡಬೇಕು. ತಂತ್ರಜ್ಞಾನವನ್ನು ಸಮರ್ಪಕವಾಗಿ ಅಳವಡಿಸಿಕೊಂಡು ಗುಣಮಟ್ಟದ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವುದರೊಂದಿಗೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಜನಕಲ್ಯಾಣ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ಅರ್ಹ ಫಲಾನುಭವಿಗೂ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಸಹಕಾರ ಬ್ಯಾಂಕುಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ಮೂಲಕ ಸಹಕಾರ ಕ್ಷೇತ್ರವನ್ನು ಇನ್ನಷ್ಟು ಸದೃಢಗೊಳಿಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

    ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್. ಆರ್. ಹರೀಶ್ ಆಚಾರ್ಯ ಮಾತನಾಡಿ, ವಿಶ್ವಕರ್ಮ ಸಹಕಾರ ಬ್ಯಾಂಕ್ ತಂತ್ರಜ್ಞಾನ ಆಧಾರಿತ ಆಧುನಿಕ ಬ್ಯಾಂಕಿಂಗ್ ಸೇವೆ ಹಾಗೂ ಸಾಮಾಜಿಕ ಜವಾಬ್ದಾರಿಯ ಮೂಲಕ ಸಹಕಾರ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದು, ಸಿಬ್ಬಂದಿಯ ಸಮರ್ಪಿತ ಸೇವೆಯೇ ಬ್ಯಾಂಕಿನ ಯಶಸ್ಸಿನ ಮೂಲಾಧಾರವಾಗಿದೆ ಎಂದು ಹೇಳಿದರು.

    ಬಳಿಕ ಸಂಸದರು ಪ್ರಚಲಿತ ವಿದ್ಯಮಾನಗಳು, ದೇಶದ ಆರ್ಥಿಕ ನೀತಿಗಳು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳು, ಸಹಕಾರ ಬ್ಯಾಂಕುಗಳ ಭವಿಷ್ಯ, ಸಾಮಾಜಿಕ ಬದ್ಧತೆ ಹಾಗೂ ನಾಗರಿಕ ಜವಾಬ್ದಾರಿಗಳ ಕುರಿತು ಸಿಬ್ಬಂದಿಗಳೊಂದಿಗೆ ಮುಕ್ತ ಸಂವಾದ ನಡೆಸಿದರು. ಸಿಬ್ಬಂದಿಗಳ ಪ್ರಶ್ನೆಗಳಿಗೆ ಉತ್ತರಿಸಿ, ಬ್ಯಾಂಕಿಂಗ್ ಕ್ಷೇತ್ರದ ಸವಾಲುಗಳು ಮತ್ತು ಅವಕಾಶಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

    ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು ಸಂಸದರನ್ನು ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಿದರು. ಬ್ಯಾಂಕಿನ ಕಾರ್ಯಚಟುವಟಿಕೆಗಳ ಕುರಿತು ವ್ಯವಸ್ಥಾಪಕ ನಿರ್ದೇಶಕರಾದ ವಸಂತ  ಅಡ್ಯಂತಾಯ ಮಾಹಿತಿ ನೀಡಿದರು. ಬ್ಯಾಂಕಿನ ನಿರ್ದೇಶಕರಾದ ಭರತ್ ನಿಡ್ಪಳ್ಳಿ, ರೇಷ್ಮಾ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುಜಿತ್ ಪ್ರತಾಪ್ ಹಾಗೂ ಬ್ಯಾಂಕಿನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Captain Brijesh Chowta Co Operative ministry Cooperative Cooperative Registrar Vasnath Adyantaya Vishwakarma Sahakara Bank
    Previous Articleಎಲ್ಲ ವಲಯಗಳಲ್ಲೂ ಸಹಕಾರ ಕ್ಷೇತ್ರದ ಬೇರು
    Next Article ಸಹಕಾರಿ ಸಂಘವು ಸಮುದಾಯದ ಆರ್ಥಿಕ ಶಕ್ತಿಯಾಗಲಿ

    Related Posts

    ಸಹಕಾರಿ ಸಂಘವು ಸಮುದಾಯದ ಆರ್ಥಿಕ ಶಕ್ತಿಯಾಗಲಿ

    July 3, 2026

    ಎಲ್ಲ ವಲಯಗಳಲ್ಲೂ ಸಹಕಾರ ಕ್ಷೇತ್ರದ ಬೇರು

    July 3, 2026

    ವಿಕಸಿತ ಭಾರತ ಆಗಲು ಕೈ ಜೋಡಿಸಿ

    July 3, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸಹಕಾರಿ ಸಂಘವು ಸಮುದಾಯದ ಆರ್ಥಿಕ ಶಕ್ತಿಯಾಗಲಿ

    July 3, 2026

    ವಿಶ್ವಕರ್ಮ ಸಹಕಾರ ಬ್ಯಾಂಕಿಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

    July 3, 2026

    ಎಲ್ಲ ವಲಯಗಳಲ್ಲೂ ಸಹಕಾರ ಕ್ಷೇತ್ರದ ಬೇರು

    July 3, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.