ಮಂಗಳೂರು: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಜುಲೈ 13ರಂದು ಸೋಮವಾರ ಬೆಳಗ್ಗೆ 10.30ಕ್ಕೆ ನಡೆಯಲಿದೆ.
https://chat.whatsapp.com/FCEnlTkAKCC0MGPhXtX4i4
ಉರ್ವ ಎಂ.ಎಸ್.ಸಿ.ಎಲ್ ಇಂಡೋರ್ ಸ್ಟೇಡಿಯಂ ಕಟ್ಟಡದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶ್ರೀದೇವಿ ಶಿಕ್ಷಣ ಸಮೂಹ ಸಂಸ್ಥೆ ಹಾಗೂ ಮಂಗಳೂರಿನ ಕ್ವಾಲಿಟಿ ಗ್ರೂಪ್ ಆಫ್ ಹೋಟೆಲ್ಸ್‌ನ ಅಧ್ಯಕ್ಷರಾದ ಡಾ.ಎ.ಸದಾನಂದ ಶೆಟ್ಟಿ ಉದ್ಘಾಟಿಸಲಿದ್ದಾರೆ. ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಾಪಕಾಧ್ಯಕ್ಷರಾದ ಎಸ್.ಜಯರಾಮ್ ಶೆಟ್ಟಿ, ಉರ್ವ ಶ್ರೀ ಮಾರಿಯಮ್ಮ ದೈವಸ್ಥಾನದ ಆಡಳಿತ ಮೊಕ್ತೇಸರ ಲಕ್ಷ್ಮಣ ಅಮೀನ್ ಕೋಡಿಕಲ್ ಮತ್ತು ದ.ಕ. ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಅಜಿತ್ ಜಿ.ಶೆಟ್ಟಿ ಕೋರ್ಯಾರು, ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ ಶೆಟ್ಟಿ ಉಪಸ್ಥಿತರಿರಲಿದ್ದಾರೆ. ಸೊಸೈಟಿಯ ನಿರ್ದೇಶಕರಾದ ಎಸ್.ಜಯರಾಮ ಶೆಟ್ಟಿ, ಸೀತಾರಾಮ ಶೆಟ್ಟಿ, ಬಾಲಕೃಷ್ಣ ಪೂಂಜ ಹೆಚ್, ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ ಎ, ಕೃಷ್ಣ ರೈ ಟಿ., ಎಂ.ಜಯರಾಮ ಶೆಟ್ಟಿ ಮುಂಡಾಡಿಗುತ್ತು, ರಾಜೇಶ್ ಶೆಟ್ಟಿ ನವಶಕ್ತಿ, ಪ್ರಕಾಶ್ ಶೆಟ್ಟಿ ನೊಚ್ಚ, ಸಾರಿಕಾ ಶೆಟ್ಟಿ, ವಿಜಯ ಬಿ.ಶೆಟ್ಟಿ, ಶಾಖಾ ಪ್ರಬಂಧಕರಾದ ದಿನಕರ ರೈ ಡಿ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ.





