ಬೆಳ್ತಂಗಡಿ: ಪ್ರವರ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಪ್ರಥಮ ವಾರ್ಷಿಕ ಮಹಾಸಭೆ ಜುಲೈ 4ರಂದು ಸೊಸೈಟಿಯ ಆವರಣದಲ್ಲಿ ಸಂಘದ ಅಧ್ಯಕ್ಷರಾದ ರಾಜಿತ್ ರೈ ಟಿ.ಸಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
https://chat.whatsapp.com/FCEnlTkAKCC0MGPhXtX4i4
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕಾರ್ಯಕ್ಷೇತ್ರವನ್ನು ವಿಸ್ತರಿಸುವ ಕುರಿತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪವನ್ ಕುಮಾರ್ ಶೆಟ್ಟಿ ವರದಿ ಮಂಡನೆ ಮಾಡಿದರು. ಸಂಘದ ಸಿಬ್ಬಂದಿ ಸ್ವಾತಿ ಸಭೆಯ ನೋಟಿಸ್ ಓದಿದರು. ಸಿಬ್ಬಂದಿ ಅನುಷಾ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪ್ರಧಾನ ವ್ಯವಸ್ಥಾಪಕರಾದ ಪ್ರೇಮ್ ರೋಷಲ್ ಡಿಸೋಜ ಸ್ವಾಗತಿಸಿ, ವಂದಿಸಿದರು.



