Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ
    News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    adminBy adminJuly 23, 2026

    ರಾಜ್ಯ ಸಹಕಾರಿ ಬ್ಯಾಂಕ್‌ಗಳಲ್ಲಿ ಎನ್‌ಪಿಎ ಏರಿಕೆ: ರಾಜ್ಯಸಭೆಯಲ್ಲಿ ಸಚಿವ ಪಂಕಜ್‌ ಚೌಧರಿ ಮಾಹಿತಿ

    ನವದೆಹಲಿ: ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳಲ್ಲಿ ಎನ್‌ಪಿಎ (ಅನುತ್ಪಾದಕ ಆಸ್ತಿ) ಪ್ರಮಾಣವು ಮಾರ್ಚ್ 31, 2026ರ ವೇಳೆಗೆ 21,769 ಕೋಟಿ ರೂ.ಗೆ ಇಳಿಕೆಯಾಗಿದೆ. ಇದು ಕಳೆದ ಆರು ವರ್ಷಗಳಲ್ಲೇ ಅತ್ಯಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್‌ ಚೌಧರಿ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಪಟ್ಟಣ ಸಹಕಾರಿ ಬ್ಯಾಂಕುಗಳಲ್ಲಿ 2021ರ ಮಾರ್ಚ್‌ ವೇಳೆಗೆ ಇದ್ದ ಅನುತ್ಪಾದಕ ಆಸ್ತಿ ಎನ್‌ಪಿಎ ಪ್ರಮಾಣ 37,993 ಕೋಟಿ ರೂ.ನಿಂದ ಆರು ವರ್ಷಗಳಲ್ಲಿ 21,769 ಕೋಟಿ ರೂ.ಗೆ ಇಳಿಕೆಯಾಗಿದೆ ಎಂದು ಹೇಳಿದರು. ಇದಕ್ಕೂ ಮೊದಲು ಸಂಸತ್ತಿನ ಮುಂದೆ ಇರಿಸಲಾದ ರಾಷ್ಟ್ರೀಕೃತ ಬ್ಯಾಂಕುಗಳ 6.17 ಲಕ್ಷ ಕೋಟಿಯ ಎನ್‌ಪಿ ಪ್ರಮಾಣವು ಆರು ವರ್ಷಗಳಲ್ಲಿ 2.46 ಲಕ್ಷ ಕೋಟಿಗೆ ಇಳಿಕೆ ಮತ್ತು ಖಾಸಗಿ ಬ್ಯಾಂಕುಗಳ ಎನ್‌ಪಿಎ ಪ್ರಮಾಣವು 2.02 ಲಕ್ಷ ಕೋಟಿಯಿಂದ 1.26 ಲಕ್ಷ ಕೋಟಿಗೆ ಇಳಿಕೆಯಾಗಿರುವ ಮಾಹಿತಿಗೆ ಪೂರಕವಾಗಿ ಸಹಕಾರಿ ಬ್ಯಾಂಕುಗಳ ಎನ್‌ಪಿಎ ಲೆಕ್ಕಾಚಾರಗಳನ್ನು ತೋರಿಸಲಾಗಿದೆ. ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತೆಗೆದುಕೊಂಡ ಸಮಗ್ರ ಕ್ರಮಗಳಿಂದಾಗಿ, ಶೆಡ್ಯೂಲ್ಡ್ ವಾಣಿಜ್ಯ ಬ್ಯಾಂಕುಗಳ ಒಟ್ಟು ಎನ್‌ಪಿಎ ದರವು ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ಕುಸಿತ ಕಂಡಿದೆ ಎಂದು ಅವರು ಮಾಹಿತಿ ನೀಡಿದರು.
    ಸಹಕಾರಿ ಬ್ಯಾಂಕಿಂಗ್ ವಲಯದಲ್ಲಿ ನಬಾರ್ಡ್ ಒದಗಿಸಿದ ಮಾಹಿತಿಯ ಪ್ರಕಾರ, ರಾಜ್ಯ ಸಹಕಾರಿ ಬ್ಯಾಂಕುಗಳ ಎನ್‌ಪಿಎಗಳು ಮಾರ್ಚ್ 2021ರಲ್ಲಿ ರೂ 14,113 ಕೋಟಿಯಿಂದ ಮಾರ್ಚ್ 2025ರಲ್ಲಿ ರೂ 16.422 ಕೋಟಿಗೆ ಏರಿಕೆಯಾಗಿದೆ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳಲ್ಲಿ ಇದು ಮಾರ್ಚ್ 2026ರ ಹೊತ್ತಿಗೆ ರೂ. 35,483 ಕೋಟಿಗಳಷ್ಟಿದ್ದು, ಮಾರ್ಚ್ 2021 ರಲ್ಲಿ ರೂ. 34.610 ಕೋಟಿಗಳಷ್ಟಿತ್ತು. ಇಲ್ಲಿಯೂ ಎನ್‌ಪಿಎ ಪ್ರಮಾಣದಲ್ಲಿ ಏರಿಕೆಯಾಗಿದೆ. ಬಹು-ರಾಜ್ಯ ಸಹಕಾರಿ ಸಂಘಗಳ ಎನ್‌ಪಿಎಗಳ ಡೇಟಾವನ್ನು ತಾನು ನಿರ್ವಹಿಸುವುದಿಲ್ಲ ಎಂದು ಸಹಕಾರ ಸಚಿವಾಲಯ ಸಂಸತ್ತಿಗೆ ತಿಳಿಸಿದೆ.

    Nabaard NPA Pankaj Chowdhari Scheduled Bank State Co Operative Bank The Karnataka State Co Operative Urban Banks Federation Urban Co Operative Bank
    Previous Articleಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    Related Posts

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026

    ಸೌಹಾರ್ದ ಕಾಯ್ದೆಯ ಚೌಕಟ್ಟಿನಲ್ಲಿ ಸಹಕಾರ ಸಂಘಗಳ ಅಭಿವೃದ್ಧಿ

    July 21, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.