Close Menu
    Top News

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮತ್ಸ್ಯ ಸಂಪದ ಯೋಜನೆಯಲ್ಲಿ 25 ಸಾವಿರ ಕೋಟಿ ರೂ. ಅನುದಾನ
    News

    ಮತ್ಸ್ಯ ಸಂಪದ ಯೋಜನೆಯಲ್ಲಿ 25 ಸಾವಿರ ಕೋಟಿ ರೂ. ಅನುದಾನ

    adminBy adminJuly 25, 2026

    ಉಡುಪಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 25 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದ್ದು, ಜಿಲ್ಲೆಯ ಮೀನುಗಾರರು ಹೆಚ್ಚಿನ ಪ್ರಯೋಜನ ಪಡೆಯುವಂತಾಗಬೇಕು. ಈ ಬಗ್ಗೆ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಶಾಸಕ ಯಶ್​ಪಾಲ್​ ಎ. ಸುವರ್ಣ ಹೇಳಿದರು.

    https://chat.whatsapp.com/FCEnlTkAKCC0MGPhXtX4i4
    ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್​ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ, ಬ್ರಹ್ಮಾವರ ಮತ್ತು ಕಾಪು ತಾಲೂಕಿನ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಆಯೋಜಿಸಿದ್ದ ಆಡಳಿತ ನಿರ್ವಹಣೆ ಕುರಿತ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ ಕ್ಷೇತ್ರವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಹಯೋಗದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ. ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಶಿಬಿರದಲ್ಲಿ ಪಾಲ್ಗೊಂಡು, ಸರ್ಕಾರದ ಹೊಸ ಯೋಜನೆಗಳ ಮಾಹಿತಿಯನ್ನು ಮೀನುಗಾರರಿಗೆ ತಲುಪಿಸಬೇಕು. ಆಗ ಮಾತ್ರ ಯೋಜನೆಯ ಪ್ರಯೋಜನ ಮೀನುಗಾರರಿಗೆ ಸಿಗುತ್ತದೆ ಎಂದು ಹೇಳಿದರು. ಮೀನುಗಾರರಿಗೆ ನಿಗದಿತ ಕೆಲಸದ ಸಮಯ ಇರುವುದಿಲ್ಲ. ಆದ್ದರಿಂದ ಅಧಿಕಾರಿಗಳು ಅವರ ಅನುಕೂಲದ ಸಮಯದಲ್ಲಿ ಭೇಟಿ ನೀಡಿ ಯೋಜನೆಗಳ ಮಾಹಿತಿ ನೀಡಬೇಕು. ಜಿಲ್ಲೆಯ 70ಕ್ಕೂ ಹೆಚ್ಚು ಮೀನುಗಾರರ ಸಹಕಾರಿ ಸಂಘಗಳಿಗೆ ಖುದ್ದಾಗಿ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸುವ ಕಾರ್ಯ ನಡೆಸಬೇಕು ಎಂದು ಸಲಹೆ ನೀಡಿದರು.
    ಉಡುಪಿ ಜಿಲ್ಲಾ ಸಹಕಾರ ಯೂನಿಯನ್​ ನಿರ್ದೇಶಕರಾದ ಅಲೆವೂರು ಹರೀಶ್​ ಕಿಣಿ ಹಾಗೂ ಎಚ್​. ಗಂಗಾಧರ ಶೆಟ್ಟಿ ಉಪಸ್ಥಿತರಿದ್ದರು. ಮೀನುಗಾರಿಕಾ ಸಹಾಯಕ ನಿರ್ದೇಶಕಿ ರೆನಿಟಾ ಡಿಸೋಜ ಮೀನುಗಾರಿಕಾ ಇಲಾಖೆಯ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಪುತ್ತೂರು ಸೈಂಟ್​ ಫಿಲೋಮಿನಾ ಕಾಲೇಜಿನ ಸಂತೋಷ್​ ಶೆಟ್ಟಿ ಒತ್ತಡ ನಿರ್ವಹಣೆ ಮತ್ತು ಸಮಯ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು. ಉಡುಪಿ ಜಿಲ್ಲಾ ಸಹಕಾರ ಯೂನಿಯನ್​ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್​ ಕಾರ್ಯಕ್ರಮ ನಿರೂಪಿಸಿದರು.

    Alevooru Harish Kini H Gangadhara Shetty Matsya Sampada Pradhanamantri Matsya Sampada Putturu Saint Philomina College Udupi Jilla Sahakara Union Yashpal Suvarna
    Previous Articleಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ
    Next Article ನಾಳೆ ದಿವ್ಯ ಸಮಾಜ ನಿರ್ಮಾಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ, ನೇತ್ರ ಚಿಕಿತ್ಸೆ

    Related Posts

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.