Close Menu
    Top News

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026

    ಅಕ್ಟೋಬರ್ 4ರಂದು ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಸಿಬ್ಬಂದಿ, ನಿರ್ದೇಶಕರ ಕಾರ್ಯತತ್ಪರತೆ ಕುರಿತು ಕ್ಲಸ್ಟರ್ ತರಬೇತಿ

    October 1, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಸಂಘಗಳ ಠೇವಣಿ ನಿಯಮ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
    News

    ಸಹಕಾರ ಸಂಘಗಳ ಠೇವಣಿ ನಿಯಮ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

    adminBy adminAugust 7, 2026

    ಬೆಂಗಳೂರು: ಸಹಕಾರಿ ಬ್ಯಾಂಕುಗಳು ತಮ್ಮ ಠೇವಣಿಯ ಶೇ.20 ಮೊತ್ತವನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕುಗಳಲ್ಲಿ ಠೇವಣಿ ಇರಿಸಬೇಕು ಮತ್ತು ಬ್ಯಾಂಕಿನ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿವರ್ಷ ತಮ್ಮ ಆಸ್ತಿ ವಿವರ ಘೋಷಿಸಬೇಕು ಎಂಬುದು ಸೇರಿದಂತೆ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಗೆ 2025ರಲ್ಲಿ ತರಲಾಗಿರುವ ಹಲವು ತಿದ್ದುಪಡಿಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

    https://chat.whatsapp.com/FCEnlTkAKCC0MGPhXtX4i4

    ಈ ವಿಚಾರವಾಗಿ ಶಿವಮೊಗ್ಗದ ಕರ್ನಾಟಕ ರಾಜ್ಯ ಅಡಿಕೆ ಸಹಕಾರ ಮಹಾಮಂಡಳ ನಿಯಮಿತ, ದಿ ತೋಟಗಾರ್ಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತವು ಸಲ್ಲಿಸಿರುವ ಅರ್ಜಿಯು ನ್ಯಾ| ಎಂ.ಐ ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಅರ್ಜಿbಆಲಿಸಿದ ನ್ಯಾಯಪೀಠವು ರಾಜ್ಯ ಸರಕಾರ, ಸಹಕಾರ ಇಲಾಖೆ, ಸಂಸದೀಯ ಮತ್ತು ಶಾಸನ ರಚನಾ ಇಲಾಖೆ, ಸಹಕಾರ ಸಂಘಗಳ ನಿಬಂಧಕರಿಗೆ ನೋಟಿಸ್‌ ಜಾರಿಗೊಳಿಸಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಆ.18ಕ್ಕೆ ಮುಂದೂಡಿತು. ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್‌ ಎಸ್. ಪಾಟೀಲ್ ವಾದ ಮಂಡಿಸಿದರು. ಸಹಕಾರ ಸಂಘಗಳ ಕಾಯ್ದೆಗೆ ತರಲಾಗಿರುವ ತಿದ್ದುಪಡಿಗಳು ಸಹಕಾರ ಸಂಘಗಳ ಸ್ವಾಯತ್ತತೆಯನ್ನು ಕಸಿದುಕೊಳ್ಳಲಿದೆ. ಈ ತಿದ್ದುಪಡಿಗಳು ಸಂವಿಧಾನಬಾಹಿರವಾಗಿದ್ದು, ಅವುಗಳನ್ನು ರದ್ದುಪಡಿಸಬೇಕು. ಅರ್ಜಿ ಇತ್ಯರ್ಥ ಆಗುವ ತನಕ ಕಾಯ್ದೆಯ ತಿದ್ದುಪಡಿಗಳ ಜಾರಿಗೆ ತಡೆ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

     

    Apex Bank DCC Bank Karnataka Highcourt Karnataka Rajya Adike Sahakara Mahamandala Mamcos The Thotagars Credit Co Operative Society
    Previous Articleಶ್ರೀ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಲ್ಯಪದವು ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ
    Next Article ನಿರ್ದೇಶಕರ ಅಧಿಕಾರಾವಧಿ ಕೇಸು ವಿಚಾರಣೆ ಮತ್ತೆ ಮುಂದೂಡಿಕೆ: ಆಗಸ್ಟ್ 14ಕ್ಕೆ ದಿನಾಂಕ ನಿಗದಿ

    Related Posts

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026

    ಅಕ್ಟೋಬರ್ 4ರಂದು ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಸಿಬ್ಬಂದಿ, ನಿರ್ದೇಶಕರ ಕಾರ್ಯತತ್ಪರತೆ ಕುರಿತು ಕ್ಲಸ್ಟರ್ ತರಬೇತಿ

    October 1, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026

    ಅಕ್ಟೋಬರ್ 4ರಂದು ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಸಿಬ್ಬಂದಿ, ನಿರ್ದೇಶಕರ ಕಾರ್ಯತತ್ಪರತೆ ಕುರಿತು ಕ್ಲಸ್ಟರ್ ತರಬೇತಿ

    October 1, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.