ಮಂಗಳೂರು: ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಮಂಗಳೂರು ವತಿಯಿಂದ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಆಗಸ್ಟ್ 9ರಂದು ಭಾನುವಾರ ಬೆಳಗ್ಗೆ 10.30ಕ್ಕೆ ಮಂಗಳೂರಿನ ಶ್ರೀ ಶರವು ಮಹಾಗಣಪತಿ ದೇವಸ್ಥಾನದ ಸಮೀಪದ ಶ್ರೀ ರಾಧಾಕೃಷ್ಣ ಹಾಲ್‌ನಲ್ಲಿ (ಬಾಳಂಭಟ್ ಹಾಲ್) ನಡೆಯಲಿದೆ.
https://chat.whatsapp.com/FCEnlTkAKCC0MGPhXtX4i4
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರು ದೀಪ ಪ್ರಜ್ವಲನೆ ನೆರವೇರಿಸಿ ಆಶೀರ್ವಚನ ನೀಡಲಿದ್ದಾರೆ. ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಕಳ ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರೂ, ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರೂ ಆಗಿರುವ ಡಾ.ಸುಧಾಕರ ಶೆಟ್ಟಿಯವರು ಶುಭಾಶಂಸನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಡಾ. ವೈ. ಭರತ್ ಶೆಟ್ಟಿ, ಕರ್ನಾಟಕ ಸರ್ಕಾರದ ಮಾಜಿ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್, ಐಎಎಸ್ (ನಿವೃತ್ತ) ಭಾಗವಹಿಸಲಿದ್ದಾರೆ. ಸಂಸ್ಥೆಯ ಉಪಾಧ್ಯಕ್ಷರಾದ ಎ.ಆನಂದ ಆಚಾರ್ಯ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ ಅವರು ಭಾಗವಹಿಸಲಿದ್ದಾರೆ. ಸಂಸ್ಥೆಯ ನಿರ್ದೇಶಕರಾದ ಕೆ.ಯಜ್ಞೇಶ್ವರ ಆಚಾರ್ಯ, ವೈ.ವಿ ವಿಶ್ವಜ್ಞಮೂರ್ತಿ, ವಿ. ಜಯ ಆಚಾರ್, ಕೆ.ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್ ಪತ್ತಾರ್, ರೋಹಿಣಿ ಎಂ.ಪಿ, ಜ್ಯೋತಿ ಎಂ.ವಿ, ರಮೇಶ್ ರಾವ್ ಯು., ಕೆ.ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ್ ಎ.ಎಸ್ ಉಪಸ್ಥಿತರಿರಲಿದ್ದಾರೆ.
ಸಮಾರಂಭದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವುದರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತರನ್ನು ಸನ್ಮಾನಿಸಿ ಪುರಸ್ಕರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.








