ಮಂಗಳೂರು: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ 10 ಎಂ.ಎಲ್ ನಂದಿನಿ ತುಪ್ಪವನ್ನು ದ.ಕ.ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರಿ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಉಡುಪಿ ಜಿಲ್ಲೆಯ ಶ್ರೀ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಗುರುವಾರ ಬಿಡುಗಡೆ ಮಾಡಿದರು.
https://chat.whatsapp.com/FCEnlTkAKCC0MGPhXtX4i4
ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ, ಉಪಾಧ್ಯಕ್ಷರಾದ ಉದಯ ಎಸ್.ಕೋಟ್ಯಾನ್, ನಿರ್ದೇಶಕರಾದ ಸುಚರಿತ ಶೆಟ್ಟಿ, ಮಂಜಯ್ಯ ಶೆಟ್ಟಿ, ಮಮತಾ ಆರ್. ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ರವಿರಾಜ ಉಡುಪ ಹಾಗೂ ದ.ಕ.ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರು ಉಪಸ್ಥಿತರಿದ್ದರು. 10 ಎಂ.ಎಲ್‌ನ ನಂದಿನಿ ತುಪ್ಪ ಪ್ರತಿ ಪ್ಯಾಕೆಟ್‌ಗೆ ರೂಪಾಯಿ 10ರಂತೆ ಗ್ರಾಹಕರಿಗೆ ಲಭ್ಯವಾಗಲಿದೆ.



