Close Menu
    Top News

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕಿಗೆ ರೂ 1.15 ಕೋಟಿ ನಿವ್ವಳ ಲಾಭ: ಶೇಕಡಾ 16 ಡಿವಿಡೆಂಡ್ ಘೋಷಣೆ
    News

    ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕಿಗೆ ರೂ 1.15 ಕೋಟಿ ನಿವ್ವಳ ಲಾಭ: ಶೇಕಡಾ 16 ಡಿವಿಡೆಂಡ್ ಘೋಷಣೆ

    adminBy adminAugust 18, 2026

    ಬೆಂಗಳೂರು: ಇಲ್ಲಿನ ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕಿನ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಬ್ಯಾಂಕಿನ ಅಧ್ಯಕ್ಷರಾದ ನಂಜೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

    https://chat.whatsapp.com/FCEnlTkAKCC0MGPhXtX4i4
    ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ನಂಜೇಗೌಡ ಅವರು, ಬ್ಯಾಂಕು 2025-26ನೇ ವರ್ಷಾಂತ್ಯಕ್ಕೆ ರೂ 69.35 ಕೋಟಿ ಸಾಲ ಹೊರಬಾಕಿ ಹಾಗೂ ರೂ 100.38 ಕೋಟಿ ಠೇವಣಿ ಗಳಿಸಿದೆ. ಬ್ಯಾಂಕಿನ ಪ್ರತಿಯೊಂದು ಸಾಧನೆಗೂ ಬ್ಯಾಂಕಿನ ಸದಸ್ಯರು, ಗ್ರಾಹಕರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳ ಪರಿಶ್ರಮ ಕಾರಣವಾಗಿದೆ. 2025-26ನೇ ಸಾಲಿನಲ್ಲಿ ಬ್ಯಾಂಕು ರೂ 1.15 ಕೋಟಿ ನಿವ್ವಳ ಲಾಭ ಗಳಿಸಿದೆ. ಬ್ಯಾಂಕಿನ ಸದಸ್ಯರಿಗೆ ಈ ಬಾರಿ ಶೇ.16ರಂತೆ ಡಿವಿಡೆಂಡ್ ಘೋಷಣೆ ಮಾಡಲಾಗಿದೆ. ಈಗಾಗಲೇ ಬ್ಯಾಂಕಿನ ಮೂರು ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು ಇನ್ನೂ ಹೆಚ್ಚಿನ ಶಾಖೆಗಳನ್ನು ತೆರೆಯಲು ಬ್ಯಾಂಕಿನ ಆಡಳಿತ ಮಂಡಳಿ ಕಾರ್ಯಪ್ರವೃತವಾಗಿದೆ. ಪ್ರತಿಬಾರಿಯಂತೆ ಈ ಬಾರಿ 200 ಜನ ಬ್ಯಾಂಕಿನ ಹಿರಿಯ ಸ್ಥಾಪಕ ಸದಸ್ಯರುಗಳಿಗೆ ಸನ್ಮಾಲಿಸಲಾಗಿದೆ ಎಂದು ಹೇಳಿದರು. ಬ್ಯಾಂಕಿನ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಬಾರಿಯಂತೆ ಈ ಬಾರಿಯೂ ಪ್ರತಿಭಾ ಪುರಸ್ಕಾರ ನೀಡಿ ಉತ್ತೆಜನ ನೀಡಲಾಯಿತು.


    ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಬಿ.ಎಂ ಮಾತನಾಡಿ, ಬ್ಯಾಂಕಿನ ಇತಿಹಾಸದಲ್ಲಿ ಮೊದಲ ಬಾರಿ ರೂ 100 ಕೋಟಿಗೂ ಅಧಿಕ ಠೇವಣಿ ಸಂಗ್ರಹಿಸಿ ಟೈರ್ 1 ಬ್ಯಾಂಕಿನಿಂದ ಟೈರ್ 2 ಬ್ಯಾಂಕಾಗಿ ಪರಿವರ್ತನೆಗೊಂಡಿದೆ. ಇದು ಬ್ಯಾಂಕಿನ ಸದಸ್ಯರು ಹಾಗೂ ಗ್ರಾಹಕರು ಬ್ಯಾಂಕಿನ ಮೇಲೆ ಇರಿಸಿರುವ ವಿಶ್ವಾಸ ಹಾಗೂ ನಂಬಿಕೆಗೆ ಸಾಕ್ಷಿಯಾಗಿದೆ ಎಂದರು.
    ಬ್ಯಾಂಕಿನ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಬಾರಿಯಂತೆ ಈ ಬಾರಿಯೂ ಪ್ರತಿಭಾ ಪುರಸ್ಕಾರ ನೀಡಿ ಉತ್ತೇಜನ ನೀಡಲಾಯಿತು. ಬ್ಯಾಂಕಿನ ಉಪಾಧ್ಯಕ್ಷರಾದ ಸಿ.ಹೆಚ್ ಶ್ರೀನಿವಾಸ್‌, ಮಾಜಿ ಅಧ್ಯಕ್ಷರಾದ ಕೃಷ್ಣೇಗೌಡ, ನಿರ್ದೇಶಕರುಗಳಾದ ಎ.ಕೇಶವ, ಡಿ.ಅಶೋಕ್, ಕೆ.ರಾಮಯ್ಯ, ಆರ್.ಶ್ರೀನಿವಾಸಮೂರ್ತಿ, ಜಿ.ದೇವರಾಜು, ಜಿ.ಕೃಷ್ಣ, ಎಂ.ಆರ್.ರಾಜೇಶ್ವರೀ, ಡಿ.ಆರ್.ಸುರೇಖಾ, ಜಿ.ಟಿ.ವೆಂಕಟೇಶ್ (ರೇವಣ್ಣ), ಬಿ.ಆರ್.ದೀಪಕ್‌, ಗೋವಿಂದಪ್ಪ ಮಂಜುನಾಥ,, ಬಿ.ಎಸ್.ಶಿವಪ್ರಸಾದ್ ಉಪಸ್ಥಿತರಿದ್ದರು.

     

    Banking Co Operative ministry Cooperative Cooperative Department Cooperative Registrar Nanje Gowda Shree Lakshminarayana Co Operative Bank Shree Laskhminarayana Co Operative Bank Bengaluru
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಆಟಿದ ಪೊಲಬು
    Next Article ಸೂರ್ಯ ಸೌಹಾರ್ದ ಸೊಸೈಟಿಯ ಮೂರನೇ ವಾರ್ಷಿಕ ಮಹಾಸಭೆ

    Related Posts

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.