Close Menu
    Top News

    ನಾಳೆ ಮೊಗೆದಷ್ಟೂ ಮೊಳೆಯುವ ಮೊಳಹಳ್ಳಿ ಕೃತಿಯ ಸಮಗ್ರ ವಿಶ್ಲೇಷಣೆ, ಸಂವಾದ ಕಾರ್ಯಕ್ರಮ

    August 29, 2026

    ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನಿಂದ ನಾಳೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ

    August 29, 2026

    ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಲು ಹೈಕೋರ್ಟ್‌ ಆದೇಶ

    August 28, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಲು ಹೈಕೋರ್ಟ್‌ ಆದೇಶ
    News

    ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಲು ಹೈಕೋರ್ಟ್‌ ಆದೇಶ

    adminBy adminAugust 28, 2026

    ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

    https://chat.whatsapp.com/FCEnlTkAKCC0MGPhXtX4i4
    ಈ ಸಂಬಂಧ ಬ್ಯಾಂಕಿನ ನಿರ್ದೇಶಕರೂ ಆಗಿರುವ ಕಡೂರಿನ ಮಾಜಿ ಶಾಸಕ ಕೆ.ಎಸ್.ಪ್ರಕಾಶ್ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್.ಪಾಟೀಲ್ ಅವರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಸಹಕಾರ ಸಂಘಗಳ ನಿಬಂಧಕರು, ಅಪೆಕ್ಸ್ ಬ್ಯಾಂಕ್ ಚುನಾವಣಾಧಿಕಾರಿ, ಸಹಕಾರ ಚುನಾವಣಾ ಪ್ರಾಧಿಕಾರ, ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಅಪೆಕ್ಸ್ ಬ್ಯಾಂಕ್‌ಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ. ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ದೇವಿಪ್ರಸಾದ್ ಶೆಟ್ಟಿ ವಕಾಲತ್ತು ವಹಿಸಿದ್ದಾರೆ.
    ಅರ್ಜಿಯಲ್ಲಿ ಏನಿದೆ?:
    ‘ಅಪೆಕ್ಸ್ ಬ್ಯಾಂಕ್‌ ನಿರ್ದೇಶಕ ಮಂಡಳಿಯ ಅವಧಿ 2025ರ ಡಿಸೆಂಬರ್ 21ಕ್ಕೆ ಮುಕ್ತಾಯಗೊಂಡಿದೆ. 2026ರ ಜನವರಿ 23ಕ್ಕೆ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆಯಿತು. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಜುಲೈ 29ಕ್ಕೆ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಅರ್ಜಿದಾರರು ಅದೇ ದಿನ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಆದರೆ, ಚುನಾವಣೆ ಮುಂದೂಡಲಾಗಿದೆ’ ಎಂಬುದು ಅರ್ಜಿದಾರರ ದೂರು. ಏತನ್ಮಧ್ಯೆ, ‘ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಅರ್ಜಿದಾರರು ಫೆಬ್ರವರಿ 17ರಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದರು. ಸಹಕಾರ ಚುನಾವಣಾ ಪ್ರಾಧಿಕಾರವು, ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವಂತೆ ಫೆಬ್ರುವರಿ 26 ಮತ್ತು ಮಾರ್ಚ್ 18ರಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿತ್ತು. ಆದರೆ, ಈ ತನಕವೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣವೇ ಚುನಾವಣೆ ನಡೆಸಲು ಪ್ರತಿವಾದಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

     

    Apex Bank Co Operative ministry Cooperative Cooperative Department Cooperative Registrar K.S Prakash Karnataka High Court
    Previous Articleಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ 71.63 ಲಕ್ಷ ರೂ ಲಾಭ, ಶೇ.12 ಡಿವಿಡೆಂಡ್
    Next Article ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನಿಂದ ನಾಳೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ

    Related Posts

    ನಾಳೆ ಮೊಗೆದಷ್ಟೂ ಮೊಳೆಯುವ ಮೊಳಹಳ್ಳಿ ಕೃತಿಯ ಸಮಗ್ರ ವಿಶ್ಲೇಷಣೆ, ಸಂವಾದ ಕಾರ್ಯಕ್ರಮ

    August 29, 2026

    ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನಿಂದ ನಾಳೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ

    August 29, 2026

    ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ 71.63 ಲಕ್ಷ ರೂ ಲಾಭ, ಶೇ.12 ಡಿವಿಡೆಂಡ್

    August 28, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ನಾಳೆ ಮೊಗೆದಷ್ಟೂ ಮೊಳೆಯುವ ಮೊಳಹಳ್ಳಿ ಕೃತಿಯ ಸಮಗ್ರ ವಿಶ್ಲೇಷಣೆ, ಸಂವಾದ ಕಾರ್ಯಕ್ರಮ

    August 29, 2026

    ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನಿಂದ ನಾಳೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ

    August 29, 2026

    ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಲು ಹೈಕೋರ್ಟ್‌ ಆದೇಶ

    August 28, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.