ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ವಿಶೇಷ ಗೌರವಾರ್ಪಣೆ ಕಾರ್ಯಕ್ರಮವನ್ನು ಸಂಘದ ಎಲ್ಲಾ ಶಾಖೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ಗೌರವಿಸುವ ಮೂಲಕ ಆಚರಿಸಲಾಯಿತು.
https://chat.whatsapp.com/FCEnlTkAKCC0MGPhXtX4i4
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ವಿಶೇಷ ಗೌರವಾರ್ಪಣೆ ಕಾರ್ಯಕ್ರಮಕ್ಕೆ ಪ್ರಧಾನ ಕಚೇರಿಯಲ್ಲಿ ಚಾಲನೆ ನೀಡಿದರು. ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸುಮಾರು 50ಕ್ಕೂ ಮಿಕ್ಕಿ ಅಂಗನವಾಡಿ ಕಾರ್ಯಕರ್ತರಿಗೆ ಸಂಘದ ಎಲ್ಲಾ ಶಾಖೆಗಳಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷವಾಗಿ ಗೌರವಾರ್ಪಣೆ ಮಾಡಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಆರ್ಥಿಕ ವ್ಯವಹಾರದ ಜೊತೆಜೊತೆಗೆ ತನ್ನನ್ನು ಸಾಮಾಜಿಕ ಸೇವಾ ಚಟುವಟಿಕೆಗಳೊಂದಿಗೆ ಜೋಡಿಸಿಕೊಂಡು ಮುನ್ನಡೆಯುತ್ತಿದೆ. ಅದರೊಂದಿಗೆ ವಿವಿಧ ದಿನಾಚರಣೆಗಳನ್ನು ಕೂಡ ಅರ್ಥಪೂರ್ಣವಾಗಿ ಆಯೋಜಿಸಿಕೊಂಡು ಬರುತ್ತಿರುವುದು ಸಂಘದ ವಿಶೇಷತೆಗಳಲ್ಲೊಂದಾಗಿದೆ.



