Close Menu
    Top News

    ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    September 10, 2026

    ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಸಿಎಂ ಆಪ್ತ ಎಸ್.ರವಿ ಅವಿರೋಧ ಆಯ್ಕೆ

    September 10, 2026

    ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ 17ನೇ ವಾರ್ಷಿಕ ಸಭೆ

    September 10, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಸಿಎಂ ಆಪ್ತ ಎಸ್.ರವಿ ಅವಿರೋಧ ಆಯ್ಕೆ
    News

    ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಸಿಎಂ ಆಪ್ತ ಎಸ್.ರವಿ ಅವಿರೋಧ ಆಯ್ಕೆ

    adminBy adminSeptember 10, 2026

    ಬೆಂಗಳೂರು: ಸಹಕಾರ ಕ್ಷೇತ್ರದ ಪ್ರಮುಖ ಸಂಸ್ಥೆಯಾದ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷ ಗಾದಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಬಂಧಿ ಹಾಗೂ ಆಪ್ತರಾಗಿರುವ ವಿಧಾನ ಪರಿಷತ್ ಸದಸ್ಯ ಎಸ್‌.ರವಿ ಅವರ ಪಾಲಾಗಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಶರಣಗೌಡ ಬಯ್ಯಾಪುರ ಆಯ್ಕೆಯಾಗಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ಅಪೆಕ್ಸ್‌ ಬ್ಯಾಂಕ್‌ಗೆ ನಾಲ್ಕು ತಿಂಗಳ ಮೊದಲೇ ಚುನಾವಣೆ ನಡೆಯಬೇಕಿತ್ತು. ಆದರೆ ಆಕಾಂಕ್ಷಿಗಳ ಮಧ್ಯೆ ಪ್ರಬಲ ಸ್ಪರ್ಧೆ ಇದ್ದ ಕಾರಣ ಚುನಾವಣೆ ಮುಂದೂಡಿಕೆಯಾಗುತ್ತಲೇ ಬಂದಿತ್ತು. ಅಂತಿಮವಾಗಿ ರವಿ ಮತ್ತು ಕೆ.ಎನ್‌ ರಾಜಣ್ಣ ಅವರ ಮಧ್ಯೆ ಪೈಪೋಟಿ ತೀವ್ರವಾಗಿತ್ತು. ಆದರೆ ಇಂದು ರವಿ ಅವರಿಗೆ ಅಧ್ಯಕ್ಷ ಸ್ಥಾನ, ಶರಣಗೌಡ ಬಯ್ಯಾಪುರ ಅವರಿಗೆ ಉಪಾಧ್ಯಕ್ಷ ಸ್ಥಾನವನ್ನು ಕಲ್ಪಿಸಿ ಕುತೂಹಲಕ್ಕೆ ತೆರೆ ಎಳೆಯಲಾಯಿತು.
    ಬುಧವಾರ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅಪೆಕ್ಸ್ ಬ್ಯಾಂಕ್‌ನ 19 ನಿರ್ದೇಶಕರೊಂದಿಗೆ ಸಭೆ ನಡೆಸಿದ್ದರು. ಸಂಜೆ, ನಿರ್ದೇಶಕರು, ಸವದಿ ಮತ್ತು ರಾಜಣ್ಣ ಖಾಸಗಿ ಹೋಟೆಲ್‌ನಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದರು. ಈ ಸಭೆಯ ವೇಳಗೆ ಬಹುತೇಕ ನಿರ್ದೇಶಕರು ರವಿ ಅವರ ಪರವಿದ್ದ ಕಾರಣ ಚುನಾವಣೆ ನಡೆಸದೇ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.


    ಅಪೆಕ್ಸ್ ಬ್ಯಾಂಕ್ ಚುನಾವಣಾ ಪ್ರಕ್ರಿಯೆ ಕುರಿತು ಬೆಂಗಳೂರಿನಲ್ಲಿ ಸಹಕಾರ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟನೆ ನೀಡಿದ್ದು, “ಮೊದಲ ಎರಡೂವರೆ ವರ್ಷಗಳ ಅವಧಿಗೆ ಎಂಎಲ್‌ಸಿ ರವಿ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ಶರಣಗೌಡ ಬಯ್ಯಾಪುರ ಅವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ನಾಮಪತ್ರ ಸಲ್ಲಿಕೆ ಬಳಿಕ ಇಬ್ಬರ ಆಯ್ಕೆ ಅಂತಿಮಗೊಂಡಿದ್ದು, ಮುಂದಿನ ಎರಡೂವರೆ ವರ್ಷಗಳ ಅಧಿಕಾರಾವಧಿ ಕುರಿತು ಆ ನಂತರವೇ ತೀರ್ಮಾನಿಸಲಾಗುವುದು” ಎಂದು ತಿಳಿಸಿದರು.

    Apex Bank Karnataka Banking Co Operative ministry Cooperative Department Cooperative Registrar D.K Shivakumar K N Rajanna S Ravi Sharanu Bayyapura
    Previous Articleಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ 17ನೇ ವಾರ್ಷಿಕ ಸಭೆ
    Next Article ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    Related Posts

    ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    September 10, 2026

    ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ 17ನೇ ವಾರ್ಷಿಕ ಸಭೆ

    September 10, 2026

    ಸ್ವಸ್ತಿಕ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

    September 10, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    September 10, 2026

    ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಸಿಎಂ ಆಪ್ತ ಎಸ್.ರವಿ ಅವಿರೋಧ ಆಯ್ಕೆ

    September 10, 2026

    ಸ್ವಾಭಿಮಾನಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ 17ನೇ ವಾರ್ಷಿಕ ಸಭೆ

    September 10, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.