ನವದೆಹಲಿ: ಸೆಪ್ಟೆಂಬರ್ 28ರಿಂದ 30ರವರೆಗೆ ಪ್ರಸ್ತಾಪಿತ ಸಾರ್ವಜನಿಕ ವಲಯದ ಬ್ಯಾಂಕ್ಗಳ ಮುಷ್ಕರದ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 27ರ ಭಾನುವಾರ ಪಟ್ಟಣ ಸಹಕಾರಿ ಬ್ಯಾಂಕ್ಗಳು ತಮ್ಮ ಶಾಖೆಗಳನ್ನು ತೆರೆಯುವಂತೆ ಸೂಚಿಸಲಾಗಿದೆ. ಚೆಕ್ ಟ್ರಂಕೇಷನ್ ಸಿಸ್ಟಮ್ (CTS) ಕ್ಲಿಯರಿಂಗ್ ಮತ್ತು ಸೆಟಲ್ಮೆಂಟ್ ಪ್ರಕ್ರಿಯೆ ಸುಗಮವಾಗಿ ನಡೆಯುವಂತೆ ಈ ಕ್ರಮ ಕೈಗೊಳ್ಳಲಾಗಿದೆ.
https://chat.whatsapp.com/FCEnlTkAKCC0MGPhXtX4i4
ಮಹಾರಾಷ್ಟ್ರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ಸ್ ಫೆಡರೇಷನ್ ಭಾನುವಾರದ ಬ್ಯಾಂಕಿಂಗ್ ಕಾರ್ಯಾಚರಣೆ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ಗೆ ಸ್ಪಷ್ಟೀಕರಣ ಕೋರಿದ ಹಿನ್ನೆಲೆಯಲ್ಲಿ ಈ ಮಾಹಿತಿ ನೀಡಲಾಗಿದೆ. ಆರ್ಬಿಐ ಸೂಚನೆಯಂತೆ ಸೆಪ್ಟೆಂಬರ್ 27ರಂದು CTS ಕ್ಲಿಯರಿಂಗ್ ಕಾರ್ಯನಿರ್ವಹಿಸಲಿದೆ. ಹೀಗಾಗಿ ಪಟ್ಟಣ ಸಹಕಾರಿ ಬ್ಯಾಂಕ್ಗಳು ಕ್ಲಿಯರಿಂಗ್ ಮತ್ತು ಸೆಟಲ್ಮೆಂಟ್ ಉದ್ದೇಶಕ್ಕಾಗಿ ಶಾಖೆಗಳನ್ನು ತೆರೆಯಬೇಕಾಗುತ್ತದೆ. ಆದಾಗ್ಯೂ, ಬ್ಯಾಂಕ್ ಆಡಳಿತ ಮಂಡಳಿ ನಿರ್ಧರಿಸಿದಲ್ಲಿ, ಇತರೆ ಸಾಮಾನ್ಯ ಬ್ಯಾಂಕಿಂಗ್ ವಹಿವಾಟುಗಳನ್ನೂ ಭಾನುವಾರ ನಡೆಸಲು ಅವಕಾಶವಿದೆ. ಯಾವ ಸೇವೆಗಳು ಲಭ್ಯವಿರುತ್ತವೆ ಎಂಬುದನ್ನು ಗ್ರಾಹಕರಿಗೆ ಮುಂಚಿತವಾಗಿ ತಿಳಿಸುವಂತೆ ಸಹಕಾರಿ ಬ್ಯಾಂಕ್ಗಳಿಗೆ ಸೂಚಿಸಲಾಗಿದೆ.
ಬ್ಯಾಂಕ್ಗಳು ತಮ್ಮ ಗ್ರಾಹಕರಿಗೆ ಇ-ಮೇಲ್ ಅಥವಾ ಎಸ್ಎಂಎಸ್ ಮೂಲಕ ಭಾನುವಾರದ ಶಾಖಾ ಕಾರ್ಯಾಚರಣೆ ಹಾಗೂ ಲಭ್ಯವಿರುವ ಸೇವೆಗಳ ಕುರಿತು ತಕ್ಷಣ ಮಾಹಿತಿ ನೀಡಬೇಕು ಎಂದು ತಿಳಿಸಲಾಗಿದೆ. CTS ಕ್ಲಿಯರಿಂಗ್ ಮತ್ತು ಸೆಟಲ್ಮೆಂಟ್ನಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ಗಳಿಗೆ ಸೂಚಿಸಲಾಗಿದೆ.


