ಸುರತ್ಕಲ್: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಹಾಗೂ ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘ ಸುರತ್ಕಲ್ ಇದರ ಜಂಟಿ ಸಹಭಾಗಿತ್ವದಲ್ಲಿ ಸಹಕಾರ ಸಂಘಗಳ ನಿರ್ದೇಶಕರಿಗೆ ಹಾಗೂ ಸಿಬ್ಬಂದಿಗೆ ಕ್ಲಸ್ಟರ್ ತರಬೇತಿ ಶಿಬಿರವು ಇತ್ತೀಚೆಗೆ ಸುರತ್ಕಲ್ ಕುಲಾಲ ಸಂಘದ ಸರ್ವಜ್ಞ ಮಿನಿ ಹಾಲ್ ನಲ್ಲಿ ನಡೆಯಿತು.
https://chat.whatsapp.com/FCEnlTkAKCC0MGPhXtX4i4
ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ನಾಗೇಶ್ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಇದರ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ವಿ ಹಿರೇಮಠ ಭಾಗವಹಿಸಿದ್ದರು. ಸಹಕಾರಿ ಸಂಘದಲ್ಲಿ ನಿರ್ದೇಶಕರ ಹಾಗೂ ಸಿಬ್ಬಂದಿಯ ಕಾರ್ಯತತ್ಪರತೆ ಎಂಬ ವಿಷಯದ ಬಗ್ಗೆ ಮೂಡುಬಿದಿರೆಯ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಉಪನ್ಯಾಸಕಿ ಬಿಂದು ನಾಯರ್ ಉಪನ್ಯಾಸ ನೀಡಿದರು.
ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಮುದ್ದು ಎಸ್ ಮೂಲ್ಯ, ಮೋಹನ್ ಐ ಮೂಲ್ಯ, ಗಂಗಾಧರ್ ಬಂಜನ್ ಕುಳಾಯಿ, ಭೋಜ ಬಂಗೇರ ಕೆ., ವಾಸು ಬಂಜನ್, ಬಾಬುಚಂದ್ರ ಐ, ದಯಾನಂದ ಪಡ್ರೆ ಹಾಗೂ ಉಷಾ ಬಂಗೇರ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ ಮೂಲ್ಯ, ಆಂತರಿಕ ಲೆಕ್ಕಪರಿಶೋಧಕರಾದ ಜಗಜೀವನ್ ದಾಸ್ ಉಪಸ್ಥಿತರಿದ್ದರು. ಸಹಕಾರಿ ಸಂಘದ ಶಾಖಾ ವ್ಯವಸ್ಥಾಪಕ ರವೀಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.











