ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ವತಿಯಿಂದ ವಿಶ್ವ ಅಂಚೆ ದಿನಾಚರಣೆ ಪ್ರಯುಕ್ತ ಸಂಘದ ಎಲ್ಲಾ ಶಾಖೆಗಳಲ್ಲಿ ಅಂಚೆ ನೌಕರರಿಗೆ ವಿಶೇಷ ಗೌರವಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
https://chat.whatsapp.com/FCEnlTkAKCC0MGPhXtX4i4
ಸಂಘದ ಪ್ರಧಾನ ಕಚೇರಿಯಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಅಂಚೆ ನೌಕರರ ಸೇವೆಯನ್ನು ಶ್ಲಾಘಿಸುತ್ತ, ಅವರನ್ನು ಗೌರವಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಅಂಚೆ ನೌಕರರ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಯನ್ನು ಸುಧಾರಿಸಲು ಸಹಕಾರ ತತ್ವದಡಿ ಕಾರ್ಯನಿರ್ವಹಿಸುತ್ತಿರುವ ಅಂಚೆ ಮತ್ತು ಬಿ.ಎಸ್.ಎನ್.ಎಲ್. ನೌಕರರ ಸಹಕಾರ ಸಂಘ ಬಳ್ಳಾಲ್‌ಭಾಗ್, ಮಂಗಳೂರು ಇಲ್ಲಿಗೆ ಭೇಟಿ ನೀಡಿ, ಸಂಘದ ಅಧ್ಯಕ್ಷ ಎಸ್. ಶೈಲೇಶ್ ಕುಮಾರ್ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರನ್ನು ಗೌರವಿಸುವ ಮೂಲಕ ದಿನಾಚರಣೆಯನ್ನು ಮತ್ತೂ ವಿಶೇಷವಾಗಿ ಆಚರಿಸಲಾಯಿತು. ಸಂಘದ ಎಲ್ಲಾ ಶಾಖೆಗಳಲ್ಲಿ ಒಟ್ಟು 50ಕ್ಕೂ ಅಧಿಕ ಅಂಚೆ ನೌಕರರನ್ನು ಗೌರವಿಸಿ ಸನ್ಮಾನಿಸಲಾಯಿತು.
ಆತ್ಮಶಕ್ತಿ ಸಹಕಾರ ಸಂಘವು ಆರ್ಥಿಕ ವ್ಯವಹಾರದ ಜೊತೆಗೆ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದ್ದು, ವಿವಿಧ ದಿನಾಚರಣೆಗಳನ್ನು ಅರ್ಥಪೂರ್ಣವಾಗಿ ಆಚರಿಸುತ್ತ ಬರುತ್ತಿರುವುದು ಸಂಘದ ವಿಶೇಷವಾಗಿದೆ.









