ಹಳೆಯಂಗಡಿ: ಹಳೆಯಂಗಡಿಯ ಹರಿಓಂ ಬಿಲ್ಡಿಂಗ್ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಐದನೇ ಶಾಖೆಯು ಉಡುಪಿಯಲ್ಲಿ ಅಕ್ಟೋಬರ್ 25ರಂದು ಉದ್ಘಾಟನೆಗೊಳ್ಳಲಿದೆ.
https://chat.whatsapp.com/FCEnlTkAKCC0MGPhXtX4i4
ಉಡುಪಿಯ ಸನಿಲ್ ಪ್ಲಾಜಾದಲ್ಲಿ ಬೆಳಗ್ಗೆ 10.30ಕ್ಕೆ ಮೂಲ್ಕಿ ಅರಮನೆಯ ಅರಸರಾದ ಎಂ.ದುಗ್ಗಣ್ಣ ಸಾವಂತರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಅಭಯಚಂದ್ರ ಜೈನ್ ದೀಪ ಪ್ರಜ್ವಲನೆ ಮಾಡಲಿದ್ದು, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಅವರು ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಮಿಥನ್ ರೈ ಕಂಪ್ಯೂಟರ್ ವ್ಯವಸ್ಥೆಗೆ ಚಾಲನೆ ನೀಡಲಿದ್ದಾರೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರೂ, ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರೂ ಆಗಿರುವ ಡಾ.ಐಕಳಬಾವ ದೇವಿಪ್ರಸಾದ್ ಶೆಟ್ಟಿಯವರು ಪ್ರಿಯದರ್ಶಿನಿ ಸ್ವಸಹಾಯ ಗುಂಪಿಗೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಕೆ.ಆರ್, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಸರಸ್ವತಿ ಕೋ ಆಪರೇಟಿವ್ ಸೊಸೈಟಿ ಪಡುಕುತ್ಯಾರ್ ಇದರ ಅಧ್ಯಕ್ಷರಾದ ಬಿ.ಸೂರ್ಯಕುಮಾರ್, ಉಡುಪಿಯ ಲೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯ ನಿರ್ದೇಶಕರಾದ ಡಾ.ಸುಶೀಲ್ ಜತ್ತನ್ನ, ಹೈಟೆಕ್ ಮೆಡಿಕೇರ್ ಹಾಸ್ಪಿಟಲ್ನ ಎಂ.ಡಿ. ಡಾ.ಟಿ.ಎಸ್ ರಾವ್, ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀಧರ್ ದೇವಾಡಿಗ, ಹೋಮಿಯೋಪಥಿಕ್ ಪಿಸಿಶಿಯನ್ ಡಾ.ಬೆರಿಲ್ ಎ.ಬೆರ್ನಾಡ್, ಸನಿಲ್ ಪ್ಲಾಜಾ ಕಟ್ಟಡದ ಮಾಲೀಕರಾದ ಶಂಭು ಎ.ಸನಿಲ್ ಭಾಗವಹಿಸಲಿದ್ದಾರೆ.

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಚ್.ವಸಂತ್ ಬೆರ್ನಾರ್ಡ್, ಉಪಾಧ್ಯಕ್ಷರಾದ ವಿಜಯ ಕುಮಾರ್ ಸನಿಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪೂಜಾರಿ, ನಿರ್ದೇಶಕರಾದ ಉಮಾನಾಥ ಜೆ.ಶೆಟ್ಟಿಗಾರ್, ಧನಂಜಯ ಮಟ್ಟು, ಗೌತಮ್ ಜೈನ್, ಗಣೇಶ್ ಪ್ರಸಾದ್ ದೇವಾಡಿಗ, ಜೈ ಕೃಷ್ಣ ಕೋಟ್ಯಾನ್, ಡಾ.ಶೆರಿಲ್ ಅಯೋನಾ ಐಮನ್, ರೇಖಾ ಶೆಟ್ಟಿ, ಹರೀಶ್ ಎನ್.ಪುತ್ರನ್, ನವೀನ್ ಸಾಲ್ಯಾನ್ ಪಂಜ, ಮೋಹನದಾಸ್, ಅನಿಲ್ ಪೂಜಾರಿ ಸಸಿಹಿತ್ಲು, ರಜಿಯಾ ಬಾನು, ಕರಿಯ ಕಾಡಿಗ ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.



