ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ವತಿಯಿಂದ 116ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಹಾಗೂ ರಕ್ತದಾನ ಶಿಬಿರ ಅಕ್ಟೋಬರ್ 25ರಂದು ಬೆಳಗ್ಗೆ 9.30ರಿಂದ ಅಪರಾಹ್ನ 12.30ರವರೆಗೆ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಸೂರ್ಯರಶ್ಮಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
https://chat.whatsapp.com/FCEnlTkAKCC0MGPhXtX4i4
ಆತ್ಮಶಕ್ತಿ ಸಹಕಾರಿ ಸಂಘದ ಪಡೀಲು ಶಾಖೆಯ ವತಿಯಿಂದ ನಡೆಯುವ ಈ ವೈದ್ಯಕೀಯ ಶಿಬಿರದಲ್ಲಿ ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್, ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ದಂತ ತಪಾಸಣೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳ ಭರ್ತಿ ಮಾಡುವುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು, ಹಾಗೂ ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡ್ ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು.
ಈ ವೈದ್ಯಕೀಯ ಶಿಬಿರವನ್ನು ಹಿಂದೂ ಯುವಸೇನೆ ಸೂರ್ಯನಾರಾಯಣ ಶಾಖೆ, ಮರೋಳಿ, ಗ್ರಾಮ ಸಮಿತಿ ಮರೋಳಿ, ಟೀಮ್ ಮರೋಳಿ, ಶ್ರೀರಾಮ ಭಜನಾ ಮಂದಿರ, ಮರೋಳಿ ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದೆ. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











