ಸುಳ್ಯ: 73ನೇ ಜಿಲ್ಲಾಮಟ್ಟದ ಸಹಕಾರ ಸಪ್ತಾಹ ಅಂಗವಾಗಿ ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಆರೋಗ್ಯಕರ ಜೀವನಕ್ಕೆ ಮ್ಯಾರಥಾನ್ ಒಂದು ಹೆಜ್ಜೆ ಎಂಬ ಧ್ಯೇಯವಾಕ್ಯದಡಿಯಲ್ಲಿ ಅಕ್ಟೋಬರ್ 25ರ ಭಾನುವಾರ (ನಾಳೆ) ಮ್ಯಾರಥಾನ್ ಸ್ಪರ್ಧೆ ಆಯೋಜಿಸಲಾಗಿದೆ.
https://chat.whatsapp.com/FCEnlTkAKCC0MGPhXtX4i4
ಸ್ಪರ್ಧೆಯು ಬೆಳಗ್ಗೆ 7 ಗಂಟೆಗೆ ಮಂಡೆಕೋಲು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭವಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ಅವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.











