ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದಿಂದ ನಡೆಸಲ್ಪಡುವ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
https://chat.whatsapp.com/FCEnlTkAKCC0MGPhXtX4i4
ಮೂಡುಬಿದಿರೆಯ ಲಾಡಿಯಲ್ಲಿರುವ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ನಲ್ಲಿ ತರಬೇತಿ ನಡೆಯಲಿದ್ದು, 14-11.2026ರಂದು ಪ್ರಾರಂಭವಾಗುವ ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 06 ತಿಂಗಳು/180 ದಿನಗಳ ಅವಧಿಯ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್’ ತರಬೇತಿಯನ್ನು ಪಡೆಯಲಿಚ್ಚಿಸುವ ಖಾಸಗಿ /ಎಸ್.ಸಿ/ಎಸ್.ಟಿ/ ಬಿಪಿಎಲ್ ವರ್ಗದ ಅಭ್ಯರ್ಥಿಗಳಿಂದ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಪ್ರವೇಶ ಪಡೆಯಲು ಕೊನೆಯ ದಿನಾಂಕ: 14-11-2026 ಆಗಿರುತ್ತದೆ. ಖಾಸಗಿ ಅಭ್ಯರ್ಥಿಗಳಿಗೆ ರೂ. 10,000 ಪ್ರವೇಶ ಶುಲ್ಕ ಮತ್ತು ಬಿಪಿಎಲ್/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಂಪೂರ್ಣವಾಗಿ ಪ್ರವೇಶಾತಿ ಶುಲ್ಕದಿಂದ ವಿನಾಯಿತಿ ನೀಡಲಾಗುವುದು. ಈ ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸರ್ಕಾರದಿಂದ ಪರವಾನಗಿ ನೀಡಲಾಗುವುದು. ಪರವಾನಗಿ ಪಡೆದ ಅಭ್ಯರ್ಥಿಗಳು ಸಹಕಾರ ಸಂಸ್ಥೆಗಳಲ್ಲಿ ಲೆಕ್ಕಪರಿಶೋಧಕರಾಗಿ ಕಾರ್ಯನಿರ್ವಹಿಸಬಹುದು. ಹಾಗೆಯೇ ಸಹಕಾರ ಸಂಸ್ಥೆಗಳಲ್ಲಿ ಲೆಕ್ಕಪರಿಶೋಧಕರಾಗಿ ನೇಮಕವಾಗಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ: 7022429440, 8971361396, 7259729104 ಸಂಪರ್ಕಿಸಬಹುದು. ದೂರವಾಣಿ: 08258 -236561, ವಿಳಾಸ: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟೀವ್ ಮ್ಯಾನೇಜ್ಮೆಂಟ್, ಲಾಡಿ, ಮೂಡುಬಿದಿರೆ, ದ.ಕ. – 574227. Email: moodbidrikicm@gmail.com.


