Close Menu
    Top News

    ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಬಜಗೋಳಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

    November 5, 2026

    ನವೆಂಬರ್‌ 14ರಂದು ಮಂಡೆಕೋಲಿನಲ್ಲಿ ದ.ಕ. ಜಿಲ್ಲಾಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

    November 5, 2026

    ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಕಾರಿ ಕ್ರೀಡಾಕೂಟ

    November 4, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನವೆಂಬರ್‌ 14ರಂದು ಮಂಡೆಕೋಲಿನಲ್ಲಿ ದ.ಕ. ಜಿಲ್ಲಾಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ
    News

    ನವೆಂಬರ್‌ 14ರಂದು ಮಂಡೆಕೋಲಿನಲ್ಲಿ ದ.ಕ. ಜಿಲ್ಲಾಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

    adminBy adminNovember 5, 2026

    ಸುಳ್ಯ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿ., ಮಂಗಳೂರು, ಸುಳ್ಯ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಸುಳ್ಯ ತಾಲೂಕು ಸಹಕಾರಿ ಯೂನಿಯನ್ ನಿ ಹಾಗೂ ಇತರ ಸಹಕಾರ ಸಂಘಗಳ ಸಹಕಾರದೊಂದಿಗೆ ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಮಂಡೆಕೋಲು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ 73ನೇ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ನವೆಂಬರ್‌ 14ರಂದು ಬೆಳಗ್ಗೆ 9.30ಕ್ಕೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲು ಇಲ್ಲಿ ನಡೆಯಲಿದೆ.

    https://chat.whatsapp.com/FCEnlTkAKCC0MGPhXtX4i4
    ಸಹಕಾರ ಸಂಸ್ಥೆಗಳ ಬೆಳವಣಿಗೆಯಲ್ಲಿ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲ್ಯಾಧಾರಿತ, ವೃತ್ತಿಪರ ಸೇವೆ ಎಂಬ ಧ್ಯೇಯದಲ್ಲಿ ಕಾರ್ಯಕ್ರಮ ಆಯೋಜನೆಯಾಗಿದ್ದು, ಬೆಳಗ್ಗೆ 9ಕ್ಕೆ ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಪಾಂಡುರಂಗ ರಾವ್‌ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಎಸ್‌.ಎನ್‌ ಸಪ್ತಾಹದ ಜಾಥಾ ಉದ್ಘಾಟಿಸಲಿದ್ದಾರೆ. ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸುರೇಶ್‌ ಕಣೆಮರಡ್ಕ ಸಹಕಾರ ಧ್ವಜಾರೋಹಣ ಮಾಡಲಿದ್ದಾರೆ. ದ.ಕ. ಜಿಲಾ ಸಹಕಾರ ಯೂನಿಯನ್‌ ಅಧ್ಯಕ್ಷರೂ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರೂ ಆಗಿರುವ ಶಶಿಕುಮಾರ್‌ ರೈ ಬಾಲ್ಯೊಟ್ಟು ಸಭಾಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಸಂಸದರಾದ ಕ್ಯಾ.ಬ್ರಿಜೇಶ್‌ ಚೌಟ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ವಸ್ತುಪ್ರದರ್ಶನ ಉದ್ಘಾಟಿಸಲಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಅನನ್ಯ ಸಾಧನೆಗೈದ ಸಾಧಕರಿಗೆ ಮತ್ತು ಸಹಕಾರ ಸಂಘದ ಮಾಜಿ ಅಧ್ಯಕ್ಷರುಗಳಿಗೆ ಮತ್ತು ಸುಳ್ಯ ತಾಲೂಕಿನಲ್ಲಿ 2025-2026ನೇ ಸಾಲಿನಲ್ಲಿ ನಿವೃತ್ತರಾದ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಕ್ಯಾಂಪ್ಕೊ ಅಧ್ಯಕ್ಷ ಎಸ್‌.ಆರ್‌ ಸತೀಶ್ಚಂದ್ರ ಸನ್ಮಾನ ಕಾರ್ಯಕ್ರಮ ನೆರವೇರಿಸುವರು. ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ 2027ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಿದ್ದಾರೆ. ಪುತ್ತೂರು ಸೈಂಟ್‌ ಫಿಲೋಮಿನಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಸಂತೋಷ್‌ ಶೆಟ್ಟಿ ಸುಸ್ಥಿರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ವಿಷಯದ ಬಗ್ಗೆ ವಿಚಾರ ಮಂಡನೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಹಾಗೂ ಮಂಡೆಕೋಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಸದಾನಂದ ಮಾವಜಿ ಕ್ರೀಡೋತ್ಸವದ ಬಹುಮಾನ ವಿತರಿಸಲಿದ್ದಾರೆ.


    ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಸಹಕಾರ ಯೂನಿಯನ್‌ ನಿರ್ದೇಶಕ ಹಾಗೂ ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿಷ್ಣು ಭಟ್‌ ಮೂಲೆತೋಟ, ದ.ಕ. ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕರಾದ ಭರತ್ ನೆಕ್ರಾಜೆ, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್‌.ಎನ್‌ ರಮೇಶ್‌, ಸಹಕಾರ ಸಂಘಗಳ ಪುತ್ತೂರು ಉಪವಿಭಾಗದ ಸಹಾಯಕ ನಿಬಂಧಕ ಎಸ್‌.ಎನ್‌ ರಘು, ಸುಳ್ಯ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30ರಿಂದ ಮಾಹಿತಿ ಕಾರ್ಯಾಗಾರ ನಡೆಯಲಿದ್ದು, ಕಾಳುಮೆಣಸು, ಕಾಫಿ ಹಾಗೂ ಉಪಬೆಳೆಗಳ ನಾಟಿ ಮತ್ತು ಪೋಷಣೆ ಬಗ್ಗೆ ಪ್ರಗತಿಪರ ಕೃಷಿಕ ಸುರೇಶ್‌ ಬಲ್ನಾಡ್‌ ಮಾಹಿತಿ ನೀಡಲಿದ್ದಾರೆ.
    ದ.ಕ. ಜಿಲ್ಲಾ ಸಹಕಾರ ಯೂನಿಯನ್‌ ಉಪಾಧ್ಯಕ್ಷರಾದ ನೀಲಯ ಎಂ.ಅಗರಿ, ಸಿಇಒ ಎಸ್‌.ವಿ ಹಿರೇಮಠ್‌, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಪುರುಷೋತ್ತಮ ಕಾಡುಸೊರಂಜ, ಸಿಇಒ ಉದಯ ಕುಮಾರ್‌ ಜಿ, ನಿರ್ದೇಶಕರಾದ ಕೇಶವ ಮೂರ್ತಿ ಹೆಬ್ಬಾರ್, ಲಕ್ಷ್ಮಣ ಉಗ್ರಾಣಿಮನೆ, ಲಿಂಗಪ್ಪ ಗೌಡ ಬದಿಕಾನ, ಉಮೇಶ ಮಂಡೆಕೋಲು, ಆಶಿಕ್‌ ದೇವರಗುಂಡ, ರಾಜಣ್ಣ ಎಂ.ಕೆ, ಶಶಿಧರ ಕೆ, ಸದಾನಂದ ಮಡಿವಾಳಮೂಲೆ, ತುಳಸಿನಿ ದೇವರಗುಂಡ, ಜಯಶ್ರೀ ಸಿ.ಎಸ್‌., ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿ ರತನ್‌ ಕೆ.ಎಸ್‌ ಭಾಗವಹಿಸಲಿದ್ದಾರೆ.

     

    Karnataka Rajya Sahakara Mahamandala Bengaluru Mandekolu Pacs Nelluru Kemraje Krushi Pattina Sahakara Sangha Shashikumar Rai balyottu Suresh Balnad Vishnu Bhat Mulethota
    Previous Articleಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಕಾರಿ ಕ್ರೀಡಾಕೂಟ
    Next Article ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಬಜಗೋಳಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

    Related Posts

    ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಬಜಗೋಳಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

    November 5, 2026

    ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಕಾರಿ ಕ್ರೀಡಾಕೂಟ

    November 4, 2026

    ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

    October 31, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಬಜಗೋಳಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

    November 5, 2026

    ನವೆಂಬರ್‌ 14ರಂದು ಮಂಡೆಕೋಲಿನಲ್ಲಿ ದ.ಕ. ಜಿಲ್ಲಾಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

    November 5, 2026

    ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಕಾರಿ ಕ್ರೀಡಾಕೂಟ

    November 4, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.