ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿ. ಮಂಗಳೂರು, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರ ಸಹಕಾರ ಸಂಘಗಳ ಸಹಯೋಗದೊಂದಿಗೆ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಪೆರಾಡಿ, ಬೆಳ್ತಂಗಡಿ ತಾಲೂಕು ಇವರ ನೇತೃತ್ವದಲ್ಲಿ 73ನೇ ದ.ಕ. ಜಿಲ್ಲಾಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಮತ್ತು ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 75ನೇ ವರ್ಷದ ಅಮೃತಮಹೋತ್ಸವ “ಪಾಂಚಜನ್ಯ” ಸಂಗಮ ಸಭಾಭವನ ಮತ್ತು ಗೋದಾಮು ಕಟ್ಟಡ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಡೆಯಲಿದೆ.
https://chat.whatsapp.com/FCEnlTkAKCC0MGPhXtX4i4
ಬೆಳಗ್ಗೆ ಗಂಟೆ 9.30ಕ್ಕೆ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಛೇರಿಯ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ನೂತನ ಕಟ್ಟಡ ಉದ್ಘಾಟನೆ ಮಾಡಿ, ಉತ್ತಮ ನವೋದಯ ಸಂಘಗಳಿಗೆ ಗೌರವಾರ್ಪಣೆ ಮಾಡಲಿದ್ದಾರೆ. ರಾಜ್ಯದ ಸಹಕಾರ ಸಚಿವರಾದ ಲಕ್ಷ್ಮಣ ಸವದಿಯವರು ಸಂಗಮ ಸಭಾಭವನ ಉದ್ಘಾಟಿಸಲಿದ್ದಾರೆ. ಆರೋಗ್ಯ ಸಚಿವ ಯು.ಟಿ ಖಾದರ್ ಪಂಚಸಿರಿ ಸಭಾಭವನ ಉದ್ಘಾಟನೆ ಮಾಡಲಿದ್ದಾರೆ. ಶಾಸಕ ಹರೀಶ್ ಪೂಂಜ ರಸಗೊಬ್ಬರ ವಿಭಾಗ ಉದ್ಘಾಟಿಸಲಿದ್ದಾರೆ. ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸತೀಶ್ ಕೆ.ಕಾಶಿಪಟ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪಡಿತರ ವಿಭಾಗ ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಲಿಫ್ಟ್ ಉದ್ಘಾಟನೆ ಮಾಡಲಿದ್ದಾರೆ. ಮಂಗಳೂರು ವಿದ್ಯುತ್ ಸರಬರಾಜು ಮಂಡಳಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸಿಎಸ್ಸಿ ವಿಭಾಗ ಉದ್ಘಾಟಿಸಲಿದ್ದಾರೆ. ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ರವಿರಾಜ್ ಹೆಗ್ಡೆಯವರು ಉತ್ತಮ ಹೈನುಗಾರರನ್ನು ಸನ್ಮಾನಿಸಲಿದ್ದಾರೆ. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ವಸತಿ ಸಮುಚ್ಛಯ ಉದ್ಘಾಟನೆ ಮಾಡಲಿದ್ದು, ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಅಳದಂಗಡಿ ಅರಮನೆಯ ಅರಸರಾದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ರೈತ ಸಂಗಮ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ಆನುವಂಶೀಯ ಆಡಳಿತ ಮೊಕ್ತೇಸರ ಎ. ಜೀವಂಧರ್ ಕುಮಾರ್ ಯಾನೆ ಕಂಚಿಪೂವಣಿಯವರು ಸಹಕಾರಿ ಜಾಥಾ ಉದ್ಘಾಟನೆ ಮಾಡಲಿದ್ದು, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಅವರು ಸಹಕಾರಿ ಧ್ವಜಾರೋಹಣ ಮಾಡಲಿದ್ದಾರೆ. ಶಿರ್ತಾಡಿ ಕಾರ್ಮೆಲ್ ಮಾತೆಯ ದೇವಾಲಯದ ಧರ್ಮಗುರು ವಂದನೀಯ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ ಮುಖ್ಯ ಕಾರ್ಯನಿರ್ವಹಣಾಧಿಕಾರಿಯ ಕಚೇರಿ ಉದ್ಘಾಟಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉತ್ತಮ ಸಂಘಗಳಿಗೆ ಗೌರವಾರ್ಪಣೆ ಮಾಡಲಿದ್ದಾರೆ. ಬೆಳ್ತಂಗಡಿ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಮ್ ಸಭಾ ಕೊಠಡಿ ಉದ್ಘಾಟನೆ ಮಾಡಲಿದ್ದು, ಮಾಸ್ ಅಧ್ಯಕ್ಷ ಕೆ. ಸೀತಾರಾಮ ರೈ ಉತ್ತಮ ಕೃಷಿಕರನ್ನು ಸನ್ಮಾನಿಸುವರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ ವಿಶೇಷ ಸಾಧಕರಿಗೆ ಸನ್ಮಾನ ಮಾಡಲಿದ್ದಾರೆ. ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್.ಎನ್ ರಮೇಶ್ ಕ್ಯಾಲೆಂಡರ್ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್ಸಿಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಸಹಕಾರ ಸಂಘಗಳ ಪುತ್ತೂರು ವಿಭಾಗ ಸಹಾಯಕ ನಿಬಂಧಕ ಎಸ್.ಎಂ ರಘು ಭಾಗವಹಿಸಲಿದ್ದಾರೆ.
ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಶ್ರೀಪತಿ ಉಪಾಧ್ಯಾಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಾ ಮತ್ತು ಸಿಬ್ಬಂದಿ ವರ್ಗ, ನಿರ್ದೇಶಕರಾದ ಎನ್. ಆರ್. ಸೀತಾರಾಮ ರೈ, ಪ್ರವೀಣ್ ಗಿಲ್ಬರ್ಟ್ ಪಿಂಟೊ, ದೇವಕಿ ಡಿ. ಶೆಟ್ಟಿ, ಸುಜಾತ, ಕೃಷ್ಣಪ್ಪ, ರಾಜೇಶ್ ಎನ್. ಶೆಟ್ಟಿ, ಸುರೇಶ್ ಅಂಚನ್, ಅಕ್ಷಯ ಕುಮಾರ್, ವಿಜಯ ನಾಯ್ಕ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಸುದರ್ಶನ್ ಕೋಟ್ಯಾನ್, ದ.ಕ. ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ನೀಲಯ ಎಂ.ಅಗರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ ಹಿರೇಮಠ ಭಾಗವಹಿಸಲಿದ್ದಾರೆ.
ಸಂಜೆ 6ರಿಂದ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸತೀಶ್ ಕೆ.ಕಾಶಿಪಟ್ಣ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘ ನಿ, ಮಂಗಳೂರು ಇದರ ಅಧ್ಯಕ್ಷ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಡಿ. ಮಂಗಳೂರು ಇದರ ಮ್ಯಾನೇಜಿಂಗ್ ಟ್ರಸ್ಟಿ ಮೇಘರಾಜ್, ಪೆರಾಡಿ ಬದ್ರಿಯಾ ಜುಮಾ ಮಸೀದಿ ಧರ್ಮಗುರು ಜನಾಬ್ ಸಫ್ಘಾನ್ ಬಾಖವಿ ಮಾಪಾಲ್, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಭಗೀರಥ ಜಿ., ತೆಲಿಕೆದ ಬೊಳ್ಳಿ ಡಾ.ದೇವದಾಸ್ ಕಾಪಿಕಾಡ್, ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್, ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರುಗಳಾದ ಶಂಕರ ಭಟ್ ಎಸ್. ಬಾಲ್ಯ, ಹೇಮರಾಜ್ ಕೆ., ಪಿ.ಕೆ. ರಾಜು ಪೂಜಾರಿ, ಎನ್. ಆರ್. ಸೀತಾರಾಮ ರೈ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2.30ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಕೆ.ಪಿ ಮಿಲನ್ ಕುಮಾರ್ ಸಾರಥ್ಯದಲ್ಲಿ ಬ್ಯಾಂಡ್ ಸಮ್ಮಿಲನ್, ಸಂಜೆ 4ರಿಂದ ಕುದ್ರೋಳಿ ಗಣೇಶ್ ಅವರಿಂದ ವಿಸ್ಮಯ ಜಾದೂ, ರಾತ್ರಿ 7ರಿಂದ ಚಾ ಪರ್ಕ ಕಲಾವಿದೆರ್ ಕುಡ್ಲ ಅಭಿನಯಿಸುವ ಸುಣ್ಣದ ಬೊಟ್ಟು ನಾಟಕ ಪ್ರದರ್ಶನಗೊಳ್ಳಲಿದೆ.








