ಮಂಗಳೂರು: ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು, ಇವರಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್, ಮಂಗಳೂರು ಇವರ ಸಮನ್ವಯದಲ್ಲಿ ಮಂಗಳೂರು ಕೇಂದ್ರವಾಗಿಸಿಕೊಂಡು ನಡೆಸಲ್ಪಡುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೊಮಾ (ಎಚ್.ಡಿ.ಸಿ.ಎಂ) 68, 69ನೇ ಅಧಿವೇಶನ ದೂರ ಶಿಕ್ಷಣ ಕೋರ್ಸಿನ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.
https://chat.whatsapp.com/FCEnlTkAKCC0MGPhXtX4i4
ಪ್ರಥಮ ಸ್ಥಾನವನ್ನು ಖಾಸಗಿ ಸಂಸ್ಥೆಯ ಉದ್ಯೋಗಿ ಸುಮಿತ್ರಾ, ದ್ವಿತೀಯ ಸ್ಥಾನ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ರೈತರ ಸೇವಾ ಸಹಕಾರಿ ಸಂಘದ ಇನ್ಚಾರ್ಚ್ ಮ್ಯಾನೇಜಿಂಗ್ ಡೈರೆಕ್ಟರ್ ಅಭಿಷೇಕ್ ಶೆಟ್ಟಿ ಹಾಗೂ ಹಳೆಯಂಗಡಿ ಪ್ರಿಯದರ್ಶಿನಿ ಸಹಕಾರಿ ಸಂಘದ ಸಿಬ್ಬಂದಿ ಕ್ಯಾರಲ್ ಡಿಸೋಜ ತೃತೀಯ ಸ್ಥಾನ ಪಡೆದಿರುತ್ತಾರೆ. ಈ ಬ್ಯಾಚ್ನಲ್ಲಿ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯ 61 ಶಿಕ್ಷಣಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ ನಾಲ್ವರು ಶಿಕ್ಷಣಾರ್ಥಿಗಳು ಉನ್ನತ ಶ್ರೇಣಿಯಲ್ಲಿ, ಮತ್ತು 25 ಶಿಕ್ಷಣಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.


