Close Menu
    Top News

    ಕೃಷಿ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ

    November 14, 2026

    ಎಚ್.ಡಿ.ಸಿ.ಎಂ ಕೋರ್ಸ್‌ ಪರೀಕ್ಷೆಯ ಫಲಿತಾಂಶ ಪ್ರಕಟ

    November 14, 2026

    ಪ್ರಿಯದರ್ಶಿನಿ ಸಹಕಾರ ಸಂಘದ ಅಧ್ಯಕ್ಷ ಎಚ್. ವಸಂತ್ ಬೆರ್ನಾಡ್‌ರಿಗೆ ಸಹಕಾರ ರತ್ನ ಪುರಸ್ಕಾರ

    November 13, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕೃಷಿ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ
    News

    ಕೃಷಿ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ

    adminBy adminNovember 14, 2026

    ಮಂಡೆಕೋಲಿನಲ್ಲಿ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಶಶಿಕುಮಾರ್ ರೈ ಬಾಲ್ಯೊಟ್ಟು ಅಭಿಪ್ರಾಯ

    ಸುಳ್ಯ: ಕೃಷಿ ಕ್ಷೇತ್ರ ಅಭಿವೃದ್ಧಿ ಹೊಂದಲು ಸಹಕಾರ ಕ್ಷೇತ್ರ ದೊಡ್ಡ ಕೊಡುಗೆ ನೀಡಿದೆ. ಸಹಕಾರ ಸಂಘಗಳು ಬೆಳೆದು ಜನಮಾನಸದಲ್ಲಿ ಭದ್ರವಾಗಿ ನೆಲೆನಿಂತು ಪ್ರತಿಯೊಂದು ಕುಟುಂಬಕ್ಕೆ ಆರ್ಥಿಕ ಭದ್ರತೆ ನೀಡಿದೆ. ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ದೊಡ್ಡ ಕೊಡುಗೆ ನೀಡಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ, ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು.

    https://chat.whatsapp.com/FCEnlTkAKCC0MGPhXtX4i4
    ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಶನಿವಾರ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಮಂಗಳೂರು, ಸುಳ್ಯ ತಾಲೂಕು ಸಹಕಾರಿ ಯೂನಿಯನ್, ಸುಳ್ಯ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಇತರ ಸಹಕಾರ ಸಂಘಗಳ ಸಹಕಾರದೊಂದಿಗೆ ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಜಿಲ್ಲಾ ಮಟ್ಟದ 73ನೇ ಸಹಕಾರ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ, ಜನರು ಸ್ವಾವಲಂಬಿಯಾಗಿ ಬದುಕಲು ಸಹಕಾರ ಸಂಘಗಳು ಭದ್ರ ಆರ್ಥಿಕ ಅಡಿಪಾಯ ಒದಗಿಸಿಕೊಟ್ಟಿದೆ. ಸಹಕಾರ ಸಪ್ತಾಹ ಸಹಕಾರ ಕ್ಷೇತ್ರದ ಹಬ್ಬ ಎಂದು ಹೇಳಿದರು. ಜನರ ಎಲ್ಲಾ ಅಗತ್ಯಗಳಿಗೆ ಆರ್ಥಿಕ ಸಹಕಾರ ನೀಡುವ ಮೂಲಕ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದೆ, ರೈತರ ಜೊತೆ ಕೈ ಜೋಡಿಸುವ ಮೂಲಕ ಸಹಕಾರ ಸಂಘಗಳು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿದೆ ಎಂದರು.

    ಮುಖ್ಯ ಅತಿಥಿಯಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ ಸಪ್ತಾಹದ ಜಾಥಾ ಉದ್ಘಾಟಿಸಿ ಮಾತನಾಡಿದರು.

    ಸುಸ್ಥಿರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ವಿಷಯದಲ್ಲಿ ನಡೆದ ವಿಚಾರಗೋಷ್ಠಿಯಲ್ಲಿ ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಂತೋಷ್ ಶೆಟ್ಟಿ ಉಪನ್ಯಾಸ ನೀಡಿದರು.

    2027ನೇ ಸಾಲಿನ ಕ್ಯಾಲೆಂಡ‌ರ್‌ನ್ನು ದ.ಕ.ಜಿಲ್ಲಾ ಸಹಕಾರಿ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ.ಹಿರೇಮಠ ಬಿಡುಗಡೆ ಮಾಡಿದರು. ಮಂಡೆಕೋಲು ಸಹಕಾರ ಸಂಘದ ಲೋಗೋವನ್ನು ಶಾಸಕಿ ಭಾಗೀರಥಿ ಮುರುಳ್ಯ ಬಿಡುಗಡೆ ಮಾಡಿದರು.

    ಇದೇ ಸಂದರ್ಭದಲ್ಲಿ ಶಶಿಕುಮಾರ್ ರೈ ಬಾಲ್ಯೊಟ್ಟು, ಕ್ಯಾಂಪ್ಕೋ ನಿರ್ದೇಶಕ ಎ.ವಿ.ತೀರ್ಥರಾಮ, ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ಮಾಜಿ ಅಧ್ಯಕ್ಷ ಪ್ರಭಾಕರ ನಾಯಕ್, ಡಿಸಿಸಿ ಬ್ಯಾಂಕ್ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥನ್ ನಾಯರ್, ಮಂಗಳೂರು ಲೆಕ್ಕ ಪರಿಶೋಧನಾ ಇಲಾಖೆಯ ಸಹಕಾರ ಸಂಘಗಳ ನಿವೃತ್ತ ಹಿರಿಯ ಉಪನಿರ್ದೇಶಕ ಬಾಲಸುಬ್ರಹ್ಮಣ್ಯ ಭಟ್ ಅವರನ್ನು ಸನ್ಮಾನಿಸಲಾಯಿತು. ಸಹಕಾರ ಸಂಘದ ಮಾಜಿ ಅಧ್ಯಕ್ಷರುಗಳಿಗೆ ಮತ್ತು ಸುಳ್ಯ ತಾಲೂಕಿನಲ್ಲಿ 2025 – 26ನೇ ಸಾಲಿನಲ್ಲಿ ನಿವೃತ್ತರಾದ ಸಿಬ್ಬಂದಿಗಳಿಗೆ ಗೌರವಾರ್ಪಣೆ ಮಾಡಲಾಯಿತು. ಕ್ರೀಡೋತ್ಸವದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

    ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ವಿಷ್ಣು ಭಟ್ ಮೂಲೆತೋಟ, ಸಹಕಾರ ಸಂಘಗಳ ಪುತ್ತೂರು ಉಪವಿಭಾಗದ ಸಹಾಯಕ ನಿಬಂಧಕ ಎಸ್.ಎಂ.ರಘು, ಜಿಲ್ಲಾ ಬ್ಯಾಂಕಿನ ಪ್ರತಿನಿಧಿ ರತನ್.ಕೆ.ಎಸ್ ಉಪಸ್ಥಿತರಿದ್ದರು. ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಉಪಾಧ್ಯಕ್ಷ ಪುರುಷೋತ್ತಮ ಕಾಡುಸೊರಂಜ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್.ಜಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ಜಿ ಕ್ರೀಡಾಕೂಟದ ವಿಜೇತರ ಪಟ್ಟಿ ವಾಚಿಸಿದರು. ಸಮಾರಂಭಕ್ಕೆ ಮುನ್ನ ಆಕರ್ಷಕ ಜಾಥಾ ನಡೆಯಿತು.

    Bhagirathi Murulya Co Operative ministry Cooperative Cooperative Department Cooperative Registrar Mandekolu Pacs Sahakara Saptaha Shashikumar Rai balyottu
    Previous Articleಎಚ್.ಡಿ.ಸಿ.ಎಂ ಕೋರ್ಸ್‌ ಪರೀಕ್ಷೆಯ ಫಲಿತಾಂಶ ಪ್ರಕಟ

    Related Posts

    ಎಚ್.ಡಿ.ಸಿ.ಎಂ ಕೋರ್ಸ್‌ ಪರೀಕ್ಷೆಯ ಫಲಿತಾಂಶ ಪ್ರಕಟ

    November 14, 2026

    ಪ್ರಿಯದರ್ಶಿನಿ ಸಹಕಾರ ಸಂಘದ ಅಧ್ಯಕ್ಷ ಎಚ್. ವಸಂತ್ ಬೆರ್ನಾಡ್‌ರಿಗೆ ಸಹಕಾರ ರತ್ನ ಪುರಸ್ಕಾರ

    November 13, 2026

    ಜಾಕೆ ಮಾಧವ ಗೌಡ, ಪದ್ಮನಾಭ ಕೊಟ್ಟಾರಿ, ಎಚ್ ‌ವಸಂತ ಬೆರ್ನಾಡ್‌ರಿಗೆ ಸಹಕಾರ ರತ್ನ ಪುರಸ್ಕಾರ

    November 13, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಕೃಷಿ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ

    November 14, 2026

    ಎಚ್.ಡಿ.ಸಿ.ಎಂ ಕೋರ್ಸ್‌ ಪರೀಕ್ಷೆಯ ಫಲಿತಾಂಶ ಪ್ರಕಟ

    November 14, 2026

    ಪ್ರಿಯದರ್ಶಿನಿ ಸಹಕಾರ ಸಂಘದ ಅಧ್ಯಕ್ಷ ಎಚ್. ವಸಂತ್ ಬೆರ್ನಾಡ್‌ರಿಗೆ ಸಹಕಾರ ರತ್ನ ಪುರಸ್ಕಾರ

    November 13, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.