Close Menu
    Top News

    ಸಹಕಾರಿ ರಂಗದಲ್ಲಿ ಪ್ರಿಯದರ್ಶಿನಿ ಸೊಸೈಟಿ ಉತ್ತಮ ಹೆಸರು ಪಡೆಯಲಿ

    November 16, 2026

    ಸಹಕಾರಿ ಕ್ಷೇತ್ರದ ಬೆಳವಣಿಗೆಯಲ್ಲಿ ದ.ಕ. ಜಿಲ್ಲೆ ಮುಂಚೂಣಿ

    November 16, 2026

    ಕೃಷಿ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ

    November 14, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರಿ ಕ್ಷೇತ್ರದ ಬೆಳವಣಿಗೆಯಲ್ಲಿ ದ.ಕ. ಜಿಲ್ಲೆ ಮುಂಚೂಣಿ
    News

    ಸಹಕಾರಿ ಕ್ಷೇತ್ರದ ಬೆಳವಣಿಗೆಯಲ್ಲಿ ದ.ಕ. ಜಿಲ್ಲೆ ಮುಂಚೂಣಿ

    adminBy adminNovember 16, 2026

    ಸಹಕಾರ ಸಪ್ತಾಹ ಎರಡನೇ ದಿನದ ಕಾರ್ಯಕ್ರಮದಲ್ಲಿ ಶಶಿಕುಮಾರ್ ರೈ ಬಾಲ್ಯೊಟ್ಟು ಅಭಿಪ್ರಾಯ

    ಪುತ್ತೂರು: ಸಹಕಾರಿ ಸಂಸ್ಥೆಗಳು ಜನಸಾಮಾನ್ಯರ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಜನನದಿಂದ ಜೀವನದ ಕೊನೆಯವರೆಗೂ ವಿವಿಧ ರೀತಿಯಲ್ಲಿ ಸಹಕಾರ ಕ್ಷೇತ್ರವು ಜನರಿಗೆ ನೆರವಾಗುತ್ತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವ ಸಾಧನೆ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು.

    https://chat.whatsapp.com/FCEnlTkAKCC0MGPhXtX4i4
    ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಮಂಗಳೂರು ಹಾಗೂ ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿಯ ಸಹಕಾರ ಜ್ಯೋತಿ ಸಭಾಭವನದಲ್ಲಿ 73ನೇ ಸಹಕಾರ ಸಪ್ತಾಹದ ಎರಡನೇ ದಿನದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಹಕಾರಿ ಸಂಸ್ಥೆಗಳು ಜನರಿಗೆ ಆತ್ಮೀಯ ಸೇವೆ ನೀಡುವ ಮೂಲಕ ಗ್ರಾಹಕರ ವಿಶ್ವಾಸ ಗಳಿಸಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಹೋಲಿಸಿದರೆ ಸಹಕಾರಿ ಸಂಘಗಳಲ್ಲಿ ಗ್ರಾಹಕರಿಗೆ ಹೆಚ್ಚಿನ ಆತ್ಮೀಯತೆ ಮತ್ತು ವೈಯಕ್ತಿಕ ಗಮನ ದೊರೆಯುತ್ತದೆ. ಗ್ರಾಹಕರ ಅಗತ್ಯಗಳನ್ನು ಅರಿತು ಸಿಬ್ಬಂದಿಗಳು ಸ್ಪಂದಿಸುತ್ತಾರೆ. ಚೆಕ್ ಬರೆಯುವುದರಿಂದ ಹಿಡಿದು ಬ್ಯಾಂಕಿಂಗ್ ವ್ಯವಹಾರಗಳವರೆಗೆ ಅಗತ್ಯ ನೆರವು ನೀಡುವ ಮೂಲಕ ಜನಸ್ನೇಹಿ ಸೇವೆ ಒದಗಿಸುತ್ತಿದ್ದಾರೆ. ಮಗು ಹುಟ್ಟಿದಾಗಿನಿಂದಲೇ ಉಳಿತಾಯ ಖಾತೆ ತೆರೆಯುವ ಅವಕಾಶದಿಂದ ಹಿಡಿದು ಜೀವನದ ವಿವಿಧ ಹಂತಗಳಲ್ಲಿ ಸಹಕಾರಿ ಸಂಸ್ಥೆಗಳು ಜನರಿಗೆ ನೆರವಾಗುತ್ತಿದೆ ಎಂದು ಹೇಳಿದರು.
    ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಗ್ರಾಹಕ ಸ್ನೇಹಿ ಆಡಳಿತ ಮತ್ತು ಉತ್ತಮ ಸೇವೆ ಸಿಗುತ್ತಿದೆ. ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತ ಕಾರ್ಯನಿರ್ವಹಿಸುತ್ತಿರುವ ಸಂಘಕ್ಕೆ ಉತ್ತಮ ಪ್ರಶಸ್ತಿಗಳು ದೊರೆಯುವ ನಿರೀಕ್ಷೆಯಿದೆ. ಸಂಘದ ಸಿಬ್ಬಂದಿ ವರ್ಗದವರ ಅನುಭವಪೂರ್ಣ ಸೇವೆಯೂ ಶ್ಲಾಘನೀಯ. ಸಹಕಾರ ಸಪ್ತಾಹದಂತಹ ಕಾರ್ಯಕ್ರಮಗಳ ಯಶಸ್ಸಿನಲ್ಲಿ ಸಹಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
    ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಬೆಳವಣಿಗೆಯ ಜತೆಗೆ ಜಿಲ್ಲೆಯ ಕೃಷಿ ಪತ್ತಿನ ಸಹಕಾರಿ ಸಂಘಗಳು ಹಾಗೂ ಇತರ ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೂ ಪ್ರೋತ್ಸಾಹ ನೀಡಲಾಗಿದೆ. ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಮೊಳಹಳ್ಳಿ ಶಿವರಾಯರು ಹಾಕಿಕೊಟ್ಟ ಭದ್ರ ಬುನಾದಿ ಮಹತ್ವದ್ದಾಗಿದೆ ಎಂದು ಶಶಿಕುಮಾರ್‌ ರೈ ಬಾಲ್ಯೊಟ್ಟು ಹೇಳಿದರು.

    ಪಾಣೆಮಂಗಳೂರು ಸೇತುವೆ ನಿರ್ಮಾಣದಲ್ಲೂ ಸಹಕಾರಿಗಳ ಕೊಡುಗೆ
    ಪಾಣೆಮಂಗಳೂರಿನ ಹಳೆಯ ಸೇತುವೆ ನಿರ್ಮಾಣದಲ್ಲಿಯೂ ಸಹಕಾರಿಗಳ ಮಹತ್ವದ ಪಾತ್ರವಿದೆ. ಮೊಳಹಳ್ಳಿ ಶಿವರಾಯರು ಹಾಗೂ ಪ್ರಭಾಕರ ರೈ ಅವರು ಸಹಕಾರಿಗಳನ್ನು ಒಗ್ಗೂಡಿಸಿ 16 ಸಾವಿರ ರೂ. ಸಂಗ್ರಹಿಸಿ ಸೇತುವೆ ನಿರ್ಮಾಣಕ್ಕೆ ಮುಂದಾಗಿದ್ದರು. ಬಳಿಕ ಮೈಸೂರು ಆಡಳಿತದ ಅನುಮತಿ ಪಡೆದು ಕಾಮಗಾರಿ ನಡೆಸಲಾಯಿತು. ಸಂಗ್ರಹಿಸಿದ ಹಣವನ್ನು ಬಡ್ಡಿ ಸಮೇತ ಮೂರು ವರ್ಷಗಳಲ್ಲಿ ಮರುಪಾವತಿಸುವ ಮೂಲಕ ಮೊಳಹಳ್ಳಿ ಶಿವರಾಯರು ಸಹಕಾರಿ ಕ್ಷೇತ್ರದ ಬದ್ದತೆಯನ್ನು ತೋರಿಸಿದ್ದರು. ಈ ಐತಿಹಾಸಿಕ ವಿಚಾರವನ್ನು ಜಿಲ್ಲಾ ಸಹಕಾರಿ ಯೂನಿಯನ್ ಪ್ರಕಟಿಸುತ್ತಿರುವ ಪುಸ್ತಕದ ಮೂಲಕ ಬೆಳಕಿಗೆ ತರಲಾಗಿದೆ ಎಂದು ಶಶಿಕುಮಾರ್ ರೈ ತಿಳಿಸಿದರು.

    ಕಾರ್ಯಕ್ರಮ ಉದ್ಘಾಟಿಸಿದ ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷೆ ಕೆ.ಗೌರಿ ಎಚ್‌ ಮಾತನಾಡಿ ಜನಸಾಮಾನ್ಯರಿಂದ ಹಿಡಿದು ಎಲ್ಲ ವರ್ಗದವರಿಗೂ ಸುಲಲಿತವಾಗಿ ನೆರವು ಮತ್ತು ಸಹಕಾರ ದೊರೆಯುವುದು ಸಹಕಾರಿ ಸಂಘಗಳಲ್ಲಿ ಮಾತ್ರ. ಪರಸ್ಪರ ಸಹಕಾರದ ಮೂಲಕವೇ ಸಹಕಾರಿ ಸಂಸ್ಥೆಗಳು ಬೆಳವಣಿಗೆ ಸಾಧಿಸುತ್ತಿದ್ದು, ಈ ನಿಟ್ಟಿನಲ್ಲಿ ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ ಸಾರ್ಥಕತೆ ಕಾಣುತ್ತಿದೆ. ಹಲವು ಸಹಕಾರಿ ಸಂಘಗಳಿಗೆ ಬೆನ್ನೆಲುಬಾಗಿ ನಿಂತು ಹೆಮ್ಮರವಾಗಿ ಬೆಳೆದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಸಹಕಾರದಿಂದ ಜಿಲ್ಲೆಯ ಸಂಘಗಳು ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಸಾಧ್ಯವಾಗಿದೆ. ಸಹಕಾರಿ ಸಂಘಗಳಲ್ಲಿ ನಾವೆಲ್ಲರೂ ಪರಸ್ಪರ ಸಹಕಾರಿಗಳಾಗಿ ಕಾರ್ಯನಿರ್ವಹಿಸಬೇಕು ಎಂದರು.

    ಏಳು ದಿನ ಸಹಕಾರ ಸಂಘಗಳಿಗೆ ಹಬ್ಬ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿವರ್ಷ ನವೆಂಬ್‌ 14ರಿಂದ 20ರ ತನಕ ಏಳು ದಿನಗಳ ಕಾಲ ಸಹಕಾರ ಸಪ್ತಾಹ ಆಚರಿಸಲಾಗುತ್ತದೆ. ಸಹಕಾರಿ ಕ್ಷೇತ್ರದ ವಿವಿಧ ವಿಷಯಗಳನ್ನು ಆಧರಿಸಿ ಜಿಲ್ಲೆಯ ಬೇರೆ ಬೇರೆ ಕಡೆ ಕಾರ್ಯಕ್ರಮಗಳು ನಡೆಯುತ್ತವೆ, ಸಹಕಾರ ಚಳವಳಿಗೆ 122 ವರ್ಷಗಳ ಇತಿಹಾಸವಿದ್ದು, ಸಹಕಾರ ಪಿತಾಮಹ ಮೊಳಹಳ್ಳಿ ಶಿವರಾಯರನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳುವುದು ನಮ್ಮ ಕರ್ತವ್ಯ ಎಂದು ಹೇಳಿದರು.
    ಜೆಸಿಐ ಇಂಡಿಯಾದ ರಾಷ್ಟ್ರೀಯ ತರಬೇತುದಾರ ಕೃಷ್ಣಮೋಹನ್‌ ಪಿ.ಎಸ್‌ ಗಣಕೀಕರಣ, ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲೀಕರಣ ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಕೆದಂಬಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷೆಕೃಷ್ಣಕುಮಾರ್ ರೈ, ದ.ಕ. ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಮಂಜುನಾಥ್ ಎಸ್.ಎಸ್., ಬನ್ನೂರು ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕ ಮೋಹನ್ ಪಕ್ಕಳ ಶುಭ ಹಾರೈಸಿದರು. ಸಂಘದ ನಿರ್ದೇಶಕರಾದ ಅರ್ಪಣಾ ಎಸ್., ಪುಷ್ಪಾವತಿ, ಮಾಜಿ ನಿರ್ದೇಶಕಿ ಯಶೋದಾ ಕೆ. ಗೌಡ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕ ಪೂವಪ್ಪ, ಸಹಕಾರಿ ಸಂಘಗಳಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಮನೋಹರ್‌, ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ್ ರಾವ್ ಬಪ್ಪಳಿಗೆ, ಎ.ವಿ.ಜಿ. ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ, ನಿರ್ದೇಶಕ ಎ.ವಿ.ನಾರಾಯಣ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.
    ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಇನುಶ್ರೀ ಎಸ್. ಶೆಟ್ಟಿ, ವಿಜಯಲಕ್ಷ್ಮೀ, ರಜನಿ ಆಚಾರ್ಯ, ಸುಚೇತ ಜಿ. ನಾಯಕ್, ಜ್ಯೋತಿ ಹೇರಂಬ, ದೀಕ್ಷಾ ಪೈ, ಚಂದ್ರಾವತಿ ಕೆ. ಹಾಗೂ ಸಿಬ್ಬಂದಿ ಚೈತ್ರ, ಅಶ್ವಿನಿ ಅತಿಥಿಗಳನ್ನು ಗೌರವಿಸಿದರು. ಸಂಘದ ನಿರ್ದೇಶಕಿ ಮೋಹಿನಿ ಪಿ. ನಾಯ್ಕ ಪ್ರಾರ್ಥಿಸಿದರು. ನಿರ್ದೇಶಕಿ ಉಷಾ ಮುಳಿಯ ಸ್ವಾಗತಿಸಿದರು. ಉಪಾಧ್ಯಕ್ಷೆ ಇಂದಿರಾ ಬಿ.ಕೆ. ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾ ಎಸ್‌ ವಂದಿಸಿದರು.

    Co Operative ministry Cooperative Cooperative Department Cooperative Registrar Gowri H Putturu Mahila Vividhoddesha Sahakara Sangha Sahakara Saptaha Shashikumar Rai balyottu
    Previous Articleಕೃಷಿ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ
    Next Article ಸಹಕಾರಿ ರಂಗದಲ್ಲಿ ಪ್ರಿಯದರ್ಶಿನಿ ಸೊಸೈಟಿ ಉತ್ತಮ ಹೆಸರು ಪಡೆಯಲಿ

    Related Posts

    ಸಹಕಾರಿ ರಂಗದಲ್ಲಿ ಪ್ರಿಯದರ್ಶಿನಿ ಸೊಸೈಟಿ ಉತ್ತಮ ಹೆಸರು ಪಡೆಯಲಿ

    November 16, 2026

    ಕೃಷಿ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ

    November 14, 2026

    ಎಚ್.ಡಿ.ಸಿ.ಎಂ ಕೋರ್ಸ್‌ ಪರೀಕ್ಷೆಯ ಫಲಿತಾಂಶ ಪ್ರಕಟ

    November 14, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸಹಕಾರಿ ರಂಗದಲ್ಲಿ ಪ್ರಿಯದರ್ಶಿನಿ ಸೊಸೈಟಿ ಉತ್ತಮ ಹೆಸರು ಪಡೆಯಲಿ

    November 16, 2026

    ಸಹಕಾರಿ ಕ್ಷೇತ್ರದ ಬೆಳವಣಿಗೆಯಲ್ಲಿ ದ.ಕ. ಜಿಲ್ಲೆ ಮುಂಚೂಣಿ

    November 16, 2026

    ಕೃಷಿ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ

    November 14, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.