ಮಂಗಳೂರು: ಸಹಕಾರ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮೈಸೂರಿನಲ್ಲಿ ಆಯೋಜಿಸಲಾದ ಮಣಿಪಾಲ್ ಸಿಗ್ನಾ ಹೆಲ್ತ್ ಇನ್ಶೂರೆನ್ಸ್ ಕಂಪನಿಯ ಕರ್ನಾಟಕ ವಲಯ (ಝೋನಲ್) ಸಮಾವೇಶದಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದುಕೊಂಡಿದೆ.
https://chat.whatsapp.com/FCEnlTkAKCC0MGPhXtX4i4
ಮಣಿಪಾಲ್ ಸಿಗ್ನಾ ಹೆಲ್ತ್ ಇನ್ಶೂರೆನ್ಸ್ ಕಂಪನಿಯ ರಿಟೇಲ್ ವ್ಯವಹಾರದಲ್ಲಿ ಗುರುತಿಸಿಕೊಂಡಿರುವುದಕ್ಕೆ ಹಾಗೂ ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗಾಗಿ ಸಂಘದ ಅಧ್ಯಕ್ಷರಾದ ‘ಸಹಕಾರ ರತ್ನ’ ಚಿತ್ತರಂಜನ್ ಬೋಳಾರ್ ಅವರಿಗೆ, ಮಣಿಪಾಲ್ ಸಿಗ್ನಾ ಹೆಲ್ತ್ ಇನ್ಶೂರೆನ್ಸ್ ಕಂಪನಿ (ಲಿ.) ಇಂಡಿಯಾದ ಹಿರಿಯ ಉಪಾಧ್ಯಕ್ಷ ಧರ್ವೇಶ್ ಮಹಮ್ಮದ್ ಹಾಗೂ ಪ್ರಾದೇಶಿಕ ಮುಖ್ಯಸ್ಥ ಝಹಿದ್ ಬಜಾಜ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಮಾರಂಭದಲ್ಲಿ ಕಂಪನಿಯ ಪ್ರಾದೇಶಿಕ ವ್ಯವಸ್ಥಾಪಕ ಮೋಹನ್, ಸಹಾಯಕ ಪ್ರಾದೇಶಿಕ ವ್ಯವಸ್ಥಾಪಕ ಶಾಂತ ಮಲ್ಲಿಕಾರ್ಜುನ, ಕಿಶೋರ್ ಕೃಷ್ಣ, ಪ್ರಶಸ್ತಿ ಬೇಕಲ್ ಮತ್ತಿತರರು ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಆರೋಗ್ಯ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದೆ. ಸಂಘದ ಎಲ್ಲಾ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಇದುವರೆಗೆ ಒಟ್ಟು 116 ಉಚಿತ ಆರೋಗ್ಯ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ಶಿಬಿರಗಳಲ್ಲಿ ಕಡುಬಡವರಿಗೆ ಉಚಿತ ಔಷಧ ವಿತರಣೆ, ಸಾಮಾನ್ಯ ಆರೋಗ್ಯ ತಪಾಸಣೆ, ದಂತ ತಪಾಸಣೆ ಮತ್ತು ಚಿಕಿತ್ಸೆ ಹಾಗೂ ಉಚಿತ ಆರೋಗ್ಯ ಕಾರ್ಡ್ ವಿತರಿಸಲಾಗಿದೆ. ಅಲ್ಲದೆ ಸಂಘದ ವತಿಯಿಂದ 1,000ಕ್ಕೂ ಅಧಿಕ ಕಣ್ಣಿನ ಶಸ್ತ್ರಚಿಕಿತ್ಸೆ ಹಾಗೂ 22,000ಕ್ಕೂ ಅಧಿಕ ಉಚಿತ ಕನ್ನಡಕಗಳನ್ನು ವಿತರಿಸಲಾಗಿದೆ. ಅಲ್ಲದೇ ವಿಮಾ ಕ್ಷೇತ್ರದ 10ಕ್ಕೂ ಅಧಿಕ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಸಂಘವು, ತನ್ನ ಸದಸ್ಯರಿಗೆ ಸ್ಪರ್ಧಾತ್ಮಕ ದರದಲ್ಲಿ ಆರೋಗ್ಯ, ವಾಹನ ಹಾಗೂ ಜೀವ ವಿಮಾ ಸೇವೆಗಳನ್ನು ಒದಗಿಸುತ್ತಿದೆ. ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗಾಗಿ ಸಂಘವು ಸತತ 10 ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆಯುತ್ತಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

