Close Menu
    Top News

    ಡಾ. ಎಂ.ಎನ್ ರಾಜೇಂದ್ರ ಕುಮಾರ್ ಸಹಕಾರಿ ಚಳವಳಿಗೆ ಸ್ಫೂರ್ತಿ

    November 27, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್‌ಗೆ ‘ಕರುನಾಡ ರತ್ನ’ ಪ್ರಶಸ್ತಿ

    November 27, 2026

    ನಾಳೆ ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಕಿನ್ನಿಗೋಳಿ ಶಾಖೆ ಉದ್ಘಾಟನೆ

    November 26, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್‌ಗೆ ‘ಕರುನಾಡ ರತ್ನ’ ಪ್ರಶಸ್ತಿ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್‌ಗೆ ‘ಕರುನಾಡ ರತ್ನ’ ಪ್ರಶಸ್ತಿ

    adminBy adminNovember 27, 2026

    ಮಂಗಳೂರು: ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ನೀಡಲಾಗುವ ರಾಜ್ಯದ ಶ್ರೇಷ್ಠ ಸಾಧಕ ಪುರಸ್ಕಾರ ‘ಕರುನಾಡ ರತ್ನ’ ಪ್ರಶಸ್ತಿ ಹಾಗೂ ಬಿರುದಿಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಭಾಜನರಾಗಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ನವೆಂಬರ್‌ 29ರಂದು ಬೆಂಗಳೂರಿನ ಜೆ.ಸಿ. ರಸ್ತೆಯ ಪುರಭವನದಲ್ಲಿ ಕನ್ನಡ ನುಡಿ – ನಮನ ಹಬ್ಬದ ಅಂಗವಾಗಿ ಕರ್ನಾಟಕ ಮೀಡಿಯಾ ಕ್ಲಬ್‌ನ ಅಧ್ಯಕ್ಷರಾದ ರಮೇಶ್ ಎಸ್.ಜಿ. ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಹಕಾರ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಚಿತ್ತರಂಜನ್ ಬೋಳಾರ್ ಅವರು ಸಲ್ಲಿಸಿದ ಅನನ್ಯ ಸೇವೆ, ಸಂಘದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
    ಚಿತ್ತರಂಜನ್‌ ಬೋಳಾರ್‌ ಅವರು ಸಹಕಾರ ಕ್ಷೇತ್ರದ ಜೊತೆಗೆ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯ, ಸಾಂಸ್ಕೃತಿಕ…. ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಲ್ಲಿಸಿದ ಅನನ್ಯ ಸೇವೆಗೆ ಅನೇಕ ರಾಷ್ಟೀಯ, ರಾಜ್ಯ ಮಟ್ಟದ ಪ್ರಶಸ್ತಿಗಳಿಂದ ಪುರಸ್ಕ್ರತರಾಗಿದ್ದಾರೆ. ಇವರಿಗೆ “ಸಹಕಾರ ರತ್ನ ಪ್ರಶಸ್ತಿ” “ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ”, “ರಾಷ್ಟ್ರೀಯ ಬಸವಶ್ರೀ ಪ್ರಶಸ್ತಿ”, “ಸಮಾಜ ರತ್ನ ಪ್ರಶಸ್ತಿ””, “ಸಜ್ಜನ – ಚಂದನ ಸದ್ಭಾವನಾ ರಾಜ್ಯ ಪ್ರಶಸ್ತಿ”, “ಪರಿವರ್ತನಾಶ್ರೀ ರಾಜ್ಯ ಪ್ರಶಸ್ತಿ”, “ಭಾರತ ರತ್ನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿ”, “ಐಐಬಿ ಬೆಸ್ಟ್ ಬಿಸಿನೆಸ್ ಲೀಡರ್‌ಶಿಪ್ ಅವಾರ್ಡ್ -2022 ಪ್ರಶಸ್ತಿ”, “ತೌಳವ ಸಹಕಾರಿ ಮಾಣಿಕ್ಯ”, “ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ”, “ವಿಶಿಷ್ಟ ಸೇವಾ ಪ್ರಶಸ್ತಿ” ಜೊತೆಗೆ ಹತ್ತು ಹಲವಾರು ಸಂಘ -ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಇವರನ್ನು ವಿವಿಧ ಸಹಕಾರ ಸಂಘ- ಸಂಸ್ಥೆಗಳು ಗುರುತಿಸಿ ಸನ್ಮಾನಿಸಿವೆ.


    ಸಂಘದ ಸಕ್ರಿಯ ಚಟುವಟಿಕೆಯೊಂದಿಗೆ ಅಧ್ಯಕ್ಷರ ಕ್ರಿಯಾಶೀಲತೆಯು ಉಲ್ಲೇಖನೀಯ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ನಿರಂತರ ನಾಲ್ಕನೇ ಬಾರಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ (ನಿ.) ಬೆಂಗಳೂರು ಇದರ ಆಡಳಿತ ಮಂಡಳಿಗೆ ಮೈಸೂರು ವಿಭಾಗದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾದವರು. ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ ಇದರ ಕಾರ್ಯಾಧ್ಯಕ್ಷರಾಗಿ, ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾಗಿ, ದ.ಕ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಮಂಗಳೂರು ಇದರ ನಿರ್ದೇಶಕರಾಗಿ, ದ.ಕ. ಜಿಲ್ಲಾ ಸಗಟು ಮಾರಾಟ ಸಹಕಾರ ಸಂಘ ಇದರ ಮಾಜಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ.


    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್‌ ಮುಂದಾಳತ್ವದಲ್ಲಿ ಮಹಿಳಾ ಸಬಲೀಕರಣ ದೃಷ್ಟಿಯಿಂದ ಮಾಡುತ್ತಿರುವ ಸೇವೆ ಅನುಕರಣೀಯವಾದುದು. ಸಂಘದ ವಿಶೇಷತೆಯಲ್ಲಿ ಶೇ.100ರಷ್ಟು ಹಿಂದುಳಿದ ವರ್ಗಕ್ಕೆ ಸೇರಿದ ಸಿಬ್ಬಂದಿಗಳು ಉದ್ಯೋಗದಲ್ಲಿದ್ದು, ಇದರಲ್ಲಿ ಶೇ.60ರಷ್ಟು ಏಕ ಪೋಷಕರನ್ನು ಹೊಂದಿದ್ದು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಿಂದ ಸ್ವಚ್ಛತಾ ಸಿಬ್ಬಂದಿಯವರೆಗೆ ಸಂಘದಲ್ಲಿ ಶೇ.95ರಷ್ಟು ಮಹಿಳಾ ಸಿಬ್ಬಂದಿಗಳೇ ಸೇವೆ ಸಲ್ಲಿಸುತ್ತಿದ್ದು ಮಹಿಳೆಯರ ಮುಖಾಂತರ ಸಂಘದ ವ್ಯವಹಾರ ನಡೆಸುತ್ತಿರುವುದು, ಅಪೂರ್ವವೆನಿಸಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಇತರ ಸಂಘಗಳ ಮೂಲಕ ಸುಮಾರು 117ಕ್ಕೂ ಮೀರಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಆ ಮೂಲಕ 1,000ಕ್ಕೂ ಮಿಕ್ಕಿ ಕಣ್ಣಿನ ಕ್ಯಾಟ್ರಾಕ್ಟ್ ಚಿಕಿತ್ಸೆ, ಉಚಿತ ಔಷಧ, ಶಸ್ತ್ರಚಿಕಿತ್ಸಾ ವೆಚ್ಚ ಹಾಗೂ ೨೨,೦೦೦ಕ್ಕೂ ಹೆಚ್ಚು ಕನ್ನಡಕವನ್ನು ಉಚಿತವಾಗಿ ವಿತರಿಸಿರುವುದಷ್ಟೆ ಅಲ್ಲದೇ ಉಚಿತ ಆರೋಗ್ಯ ಕಾರ್ಡನ್ನು ಬಡ ಕುಟುಂಬಗಳಿಗೆ ಪ್ರತಿವರ್ಷ ವಿತರಿಸುತ್ತ ಬರುತ್ತಿದ್ದಾರೆ. ಅಸಹಾಯಕ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ವರ್ಷಂಪ್ರತಿ ಕಲಿಕಾ ಕಾಲೇಜುಗಳಿಗೆ ನೇರವಾಗಿ ವಿದ್ಯಾರ್ಥಿಗಳ ದಾಖಲಾತಿ ಮತ್ತು ಪರೀಕ್ಷಾ ಶುಲ್ಕಗಳನ್ನು ಪಾವತಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಶಕ್ತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮೂಲಕ ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಪ್ರೇರಣಾ ಶಿಬಿರವನ್ನು ಕಳೆದ 15 ವರುಷಗಳಿಂದ ಆಯೋಜಿಸಿ ಸುಮಾರು 100 ಬಡ ವರ್ಗದ ವಿದ್ಯಾರ್ಥಿಗಳನ್ನು ಈ ಶಿಬಿರದಿಂದ ಆಯ್ಕೆ ಮಾಡಿ ಅವರಿಗೆ ಉಚಿತವಾಗಿ ಐ.ಎ.ಎಸ್ / ಐ.ಪಿ.ಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವಲ್ಲಿ ಉಚಿತ ತರಬೇತಿ ನೀಡುವುದರ ಜೊತೆಗೆ ಸರಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮಾದರಿ ಪ್ರಶ್ನೋತ್ತರಗಳನ್ನು ದಿನಪತ್ರಿಕೆಗಳ ಸಹಯೋಗದೊಂದಿಗೆ ವಿತರಿಸುತ್ತ ಬರುತ್ತಿದ್ದಾರೆ. ಏಕವ್ಯಕ್ತಿ ಪ್ರೇರಕರಾಗಿ ಬಹುಮುಖಿ ಪೂರಕರಾಗುವಲ್ಲಿ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ಉದಾಹರಣೆಯಾಗಿ ನಿಲ್ಲುತ್ತಾರೆ.

    Atmashakthi Vividhoddesha Sahakari Sangha Banking Chittaranjan Bolar Co Operative ministry Cooperative Cooperative Department Cooperative Registrar Karunada Ratna
    Previous Articleನಾಳೆ ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಕಿನ್ನಿಗೋಳಿ ಶಾಖೆ ಉದ್ಘಾಟನೆ
    Next Article ಡಾ. ಎಂ.ಎನ್ ರಾಜೇಂದ್ರ ಕುಮಾರ್ ಸಹಕಾರಿ ಚಳವಳಿಗೆ ಸ್ಫೂರ್ತಿ

    Related Posts

    ಡಾ. ಎಂ.ಎನ್ ರಾಜೇಂದ್ರ ಕುಮಾರ್ ಸಹಕಾರಿ ಚಳವಳಿಗೆ ಸ್ಫೂರ್ತಿ

    November 27, 2026

    ನಾಳೆ ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಕಿನ್ನಿಗೋಳಿ ಶಾಖೆ ಉದ್ಘಾಟನೆ

    November 26, 2026

    ಸಹಕಾರಿ ಬ್ಯಾಂಕುಗಳ ಸೈಬರ್ ಭದ್ರತೆಗೆ ಆದ್ಯತೆ ನೀಡಿ: ಆರ್‌ಬಿಐ ಗವರ್ನರ್

    November 25, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಡಾ. ಎಂ.ಎನ್ ರಾಜೇಂದ್ರ ಕುಮಾರ್ ಸಹಕಾರಿ ಚಳವಳಿಗೆ ಸ್ಫೂರ್ತಿ

    November 27, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್‌ಗೆ ‘ಕರುನಾಡ ರತ್ನ’ ಪ್ರಶಸ್ತಿ

    November 27, 2026

    ನಾಳೆ ಪರಿವರ್ತನಾ ಕೋ ಆಪರೇಟಿವ್‌ ಸೊಸೈಟಿಯ ಕಿನ್ನಿಗೋಳಿ ಶಾಖೆ ಉದ್ಘಾಟನೆ

    November 26, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.