Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂಗಳೂರು ಶಿಕ್ಷಕರ ಸಹಕಾರಿ ಕ್ರೆಡಿಟ್ ಸಂಘ ನಿ. ವಾರ್ಷಿಕ ಮಹಾಸಭೆ
    Mahasabhe

    ಮಂಗಳೂರು ಶಿಕ್ಷಕರ ಸಹಕಾರಿ ಕ್ರೆಡಿಟ್ ಸಂಘ ನಿ. ವಾರ್ಷಿಕ ಮಹಾಸಭೆ

    adminBy adminOctober 5, 2023



    ಶಿಕ್ಷಕರ ಸಹಕಾರಿ ಕ್ರೆಡಿಟ್ ಸಂಘ (ನಿ) ಇದರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡ ಶಿಕ್ಷಕರ ಸಹಕಾರಿ ಕ್ರೆಡಿಟ್ ಸಂಘ ನಿ. ಇದರ 34ನೇ ಮಹಾ ಸಭೆಯು ದಿನಾಂಕ: 4.09.2023ರಂದು ನಗರದ “ಹೋಟೇಲ್ ಶ್ರೀನಿವಾಸ್ “ನಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಸಿ. ಪ್ರಭಾಕರ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

    ಸಂಘದ ಅಧ್ಯಕ್ಷರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಘದ ಕಾರ್ಯವೈಖರಿ, ಮತ್ತು ಸಂಘ ಬೆಳೆಯಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಯೋಜನೆ ಮಾಡುವ ಇಂಗಿತ ವ್ಯಕ್ತಪಡಿಸಿ ಸದಸ್ಯರೆಲ್ಲರೂ ಒಗ್ಗಟ್ಟಿನಲ್ಲಿ ಸಂಘದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಕೋರಿದರು.

    ವರದಿ ವರ್ಷದಲ್ಲಿ ಸಂಘವು ಒಟ್ಟು 4013 ಸದಸ್ಯರನ್ನು ಹೊಂದಿದ್ದು ರೂ. 5,42,00,500 ಪಾಲು ಬಂಡವಾಳವನ್ನು, ರೂ. 47,30,92,595 ಠೇವಣಿ ಹೊಂದಿದ್ದು, ರೂ.61,48,98,037 ದುಡಿಯುವ ಬಂಡವಾಳದೊಂದಿಗೆ ಒಟ್ಟು ರೂ.90,01,83,530 ವ್ಯವಹಾರ ನಡೆಸಿದ್ದು ವರ್ಷಾಂತ್ಯಕ್ಕೆ ಒಟ್ಟು ರೂ.43,21,21,950 ಹೊರಬಾಕಿ ಸಾಲ ಇರುತ್ತದೆ.

    ನಿಧನ ಹೊಂದಿದ ಸಂಘದ ಸದಸ್ಯರಿಗೆ ಸಭೆಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ರಾಜ್ಯ ಮಟ್ಟದ ಮತ್ತು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಿಕ್ಷಕರನ್ನು ಗೌರವಿಸಲಾಯಿತು. ಸಂಘದ ಸದಸ್ಯರ ಮಕ್ಕಳಲ್ಲಿ 2022-2023ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಈ ಪ್ರತಿಭಾ ಪುರಸ್ಕಾರದ ಪ್ರಾಯೋಜಕತ್ವವನ್ನು ವಹಿಸಿದ ಸಂಘದ ಸದಸ್ಯರಾದ ಮಿಲಾಗ್ರಿಸ್ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕ ಶ್ರೀ ಸ್ಟ್ಯಾನಿ ಫ್ರಾನ್ಸಿಸ್ ಬಾರೆಟ್ಟೊರವರನ್ನು ಅಭಿನಂದಿಸಲಾಯಿತು.

    ಸದಸ್ಯರಾದ ಕಲಾಶ್ರೀ ವಿದ್ವಾನ್ ಶ್ರೀ ಕೆ. ಚಂದ್ರಶೇಖರ ನಾವಡರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಭೆಯಲ್ಲಿ ಸಂಘದ 2022-2023ನೇ ಸಾಲಿನ ವರದಿ, ಲೆಕ್ಕ ಪತ್ರ ಮಂಡನೆ, ಸದಸ್ಯರ ಪ್ರಶ್ನೆಗಳಿಗೆ ಸಮಜಾಯಿಸಿಕೆ, ಅಂದಾಜು ಆಯ್ಯವ್ಯಯದ ಮಂಡನೆ ಇತ್ಯಾದಿಗಳನ್ನು ಕಾರ್ಯ ಸೂಚಿಯಂತೆ ನೆರವೇರಿಸಲಾಯಿತು.

    ಸಂಘದ ನಿರ್ದೇಶಕರುಗಳಾದ ಶ್ರೀ ರಾಮಶೇಷ ಶೆಟ್ಟಿ, ಶ್ರೀ ಉದಯಶಂಕರ ನಾಯ್ಕ್ ಟಿ.,  ಶ್ರೀ ಪಿ. ಡಿ. ಶೆಟ್ಟಿ, ಶ್ರೀ ಅಂಬರೀಶ್, ಶ್ರೀ ಸುರೇಶ್ ರಾವ್ ಬಿ., ಶ್ರೀಮತಿ ಹಿಲ್ಡಾ ಕ್ಲೆಮೆನ್ಸಿಯಾ ಪಿಂಟೋ, ಶ್ರೀ ವಸಂತ ಕೆ., ಶ್ರೀ ಪುಟ್ಟಸ್ವಾಮಿ ಆರ್., ಶ್ರೀ ವಿಜಯ ಆಳ್ವ, ಶ್ರೀ ಮಾರ್ಕ್ ಜೆ. ಮೆಂಡೋನ್ಸಾ, ಶ್ರೀ ಚಂದ್ರಶೇಖರ್ ಸಿ. ಎಚ್, ಶ್ರೀ ತಿಪ್ಪೋಜಿ ಎಮ್. ವೈ, ಶ್ರೀಮತಿ ರೀಟಾ ಡೆಸಾ, ಶ್ರೀಮತಿ ವನಿತಾ, ಶ್ರೀ ಉಸ್ಮಾನ್ ಜಿ. ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಶ್ರೀಮತಿ ಶರ್ಮಿಳಾ ಕೆ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷರಾದ ಶ್ರೀ ಕೆ. ಎಂ. ಕೆ. ಮಂಜನಾಡಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

    Cooperative Mahasabhe Mangalore Sahakara Spandana society Spandana Cooperative Teachers Cooperative
    Previous Articleನಿಯಮಗಳನ್ನು ಉಲ್ಲಂಘಿಸಿದ ನಾಲ್ಕು ಸಹಕಾರಿ ಬ್ಯಾಂಕ್‌ಗಳ ವಿರುದ್ಧ ಭಾರತೀಯ ರಿಸರ್ವ್ ಬ್ಯಾಂಕ್ ಕ್ರಮ ಕೈಗೊಂಡಿದೆ ಮತ್ತು ಅವುಗಳ ಮೇಲೆ ವಿತ್ತೀಯ ದಂಡವನ್ನು ವಿಧಿಸಿದೆ.
    Next Article “ಸಾಲ ಮರುಪಾವತಿ ಮಾಡುವಂತೆ ಒತ್ತಾಯಿಸುವುದು, ಬೆದರಿಸುವುದು ಆತ್ಮಹತ್ಯೆಗೆ ಪ್ರಚೋದನೆಯಾಗಲಾರದು: “

    Related Posts

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ಗ್ರಾಹಕರ ಸಭೆ

    July 17, 2026

    ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮೊದಲನೇ ತ್ರೈಮಾಸಿಕದಲ್ಲಿ ಗಣನೀಯ ಪ್ರಗತಿ

    July 10, 2026

    ಎನ್‌ಸಿಯುಐ ಚುನಾವಣೆ; 10 ಸ್ಥಾನಗಳಿಗೆ ಜುಲೈ 18 ರಂದು ಮತದಾನ; ರಾಜ್ಯದ ಸಹಕಾರಿ ಧುರೀಣರಾದ ಹೆಚ್‌.ಕೆ ಪಾಟೀಲ್‌, ಅಣ್ಣಾಸಾಹೇಬ್‌ ಜೊಲ್ಲೆ ಕಣದಲ್ಲಿ

    July 9, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.