Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ಸಹಕಾರಿ ೩.೩ ಕೋಟಿ ರೂ ಲಾಭ ವರದಿರ‍್ಷದಲ್ಲಿ ೨೦೦೦ ಕೋಟಿ ರೂ,ಅಧಿಕ ವ್ಯವಹಾರ
    Mahasabhe

    ಆತ್ಮಶಕ್ತಿ ಸಹಕಾರಿ ೩.೩ ಕೋಟಿ ರೂ ಲಾಭ ವರದಿರ‍್ಷದಲ್ಲಿ ೨೦೦೦ ಕೋಟಿ ರೂ,ಅಧಿಕ ವ್ಯವಹಾರ

    adminBy adminApril 9, 2024


    ನಿರಂತರ ಉನ್ನತ ಸಾಧನೆಯ ಹಾದಿಯಲ್ಲಿ ಸಾಗಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ೨೦೨೩-೨೪ನೇ ಸಾಲಿನಲ್ಲಿ ೨೦೦೦ ಕೋಟಿ ರೂ.ಗೂ ಮೀರಿ ವಾರ್ಷಿಕ ವಹಿವಾಟು ನಡೆಸಿದೆ. ವರದಿ ಸಾಲಿನಲ್ಲಿ ೨೨೫ ಕೋಟಿ ರೂ.ಗೂ ಅಧಿಕ ಠೇವಣಿ, ೧೭೮ ಕೋಟಿ ರೂ.ಗೂ ಮಿಕ್ಕಿ ಸಾಲ, ೧.೪೮ ಕೋಟಿ ರೂ. ಪಾಲು ಬಂಡವಾಳದೊAದಿಗೆ ಸಂಘವು ೩.೩ ಕೋಟಿ ರೂ. ಗೂ ಮಿಕ್ಕಿ ಲಾಭ ಗಳಿಸಿದೆ.

    ಸಂಘದ ದಶಮಾನೋತ್ಸವದ ಸಂದರ್ಭದಲ್ಲಿ ೧೪,೦೦೦ ಚದರಡಿಯ ಸ್ವಂತ ಕಟ್ಟಡ ಹೊಂದಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೀತಿ ಸಾಧನೆ ಮಾಡಿದ ಏಕಮಾತ್ರ ವಿವಿಧೋದ್ದೇಶ ಸಹಕಾರಿ ಸಂಘ ಎನಿಸಿದೆ. ಅಲ್ಪಾವಧಿಯಲ್ಲೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೩೦ ಶಾಖೆಗಳು ಆರಂಭವಾಗಿ ನುರಿತ ಸಿಬ್ಬಂದಿ ವರ್ಗದ ಅತ್ಯುತ್ತಮ ಗುಣಮಟ್ಟದ ಸೇವೆಗಾಗಿ ರಾಜ್ಯ ಹಾಗೂ ರಾಷ್ಟçಮಟ್ಟದ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಆತ್ಮಶಕ್ತಿ ಸಹಕಾರಿ ಸಂಘವು ಮಹಿಳಾ ಸಬಲೀಕರಣ ಧ್ಯೇಯದೊಂದಿಗೆ ಶೇ. ೯೫ ಮಹಿಳಾ ಸಿಬ್ಬಂದಿಗಳಿಂದಲೇ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದೆ. ಸಂಘವು ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಮಾತ್ರವಲ್ಲದೇ, ಕೊಡಗು, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗಳ ವ್ಯಾಪ್ತಿಗಳಿಗೆ ತನ್ನ ಶಾಖೆಗಳನ್ನು ವಿಸ್ತರಿಸುವ ಯೋಜನೆ ಹಮ್ಮಿಕೊಂಡಿದೆ ಎಂದು ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ತಿಳಿಸಿದ್ದಾರೆ.


    ಸಂಘದ ಸದಸ್ಯರಿಗೆ ನಿರಂತರ ಡಿವಿಡೆಂಡ್ ನೀಡುತ್ತಿದ್ದು, ಪ್ರಾರಂಭದಿಂದಲೂ ಆಡಿಟ್ ವರ್ಗೀಕರಣದಲ್ಲಿ “ಎ” ತರಗತಿ ಗಳಿಸಿದೆ. ಸಂಘವು ಲಾಭಾಂಶದಲ್ಲಿ ಶೈಕ್ಷಣಿಕ, ಸಾಮಾಜಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅವಶ್ಯಕತೆ ಇರುವವರಿಗೆ ಸಹಾಯಧನ ನೀಡುತ್ತಾ ಬಂದಿದೆ. ಅಸಂಘಟಿತ ಮಹಿಳೆಯರಿಗೆ ಸ್ವ-ಸಹಾಯ ಸಂಘಗಳ ಮುಖೇನ ಸಾಲ ನೀಡಿದ್ದಲ್ಲದೆ ಮಹಿಳೆಯರ ಸಬಲೀಕರಣಕ್ಕೆ ಪ್ರಾಶಸ್ತ್ಯ ನೀಡಿದೆ. ಪ್ರತಿ ಶಾಖೆಗಳ ವಾರ್ಷಿಕೋತ್ಸವ ಸಮಾರಂಭದಂದು ಪ್ರಮುಖ ಆಸ್ಪತ್ರೆಗಳ ಸಹಯೋಗ ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ, ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ಉಚಿತ ದಂತ ತಪಾಸಣಾ ಶಿಬಿರ, ಉಚಿತ ಆರೋಗ್ಯ ಕಾರ್ಡ್ ವಿತರಣೆ ಮುಂತಾದ ಶಿಬಿರಗಳನ್ನು ಆಯೋಜಿಸಿದೆ. ವಿಶೇಷವಾಗಿ ಉಚಿತ ಕಣ್ಣಿನ ತಪಾಸಣೆ ನಡೆಸಿ ೧೪,೫೦೦ ಹೆಚ್ಚು ಕನ್ನಡಕ ವಿತರಣೆ ಮಾಡಿದ್ದು, ೫೦೦ಕ್ಕೂ ಹೆಚ್ಚು ಜನರಿಗೆ ಕಣ್ಣಿನ ಉಚಿತ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ. ಇದುವರೆಗೆ ಒಟ್ತು ೬೪ಕ್ಕೂ ಮಿಕ್ಕಿ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸಲು ಸಹಕರಿಸಿದ ಎಲ್ಲಾ ವೈದ್ಯಾಧಿಕಾರಿಗಳನ್ನು ಮತ್ತು ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ಸಂಘವು ಗೌರವಿಸಿದೆ. ಪಡೀಲ್‌ನಲ್ಲಿ ಬಸ್‌ಸ್ಟ್ಯಾಂಡ್ ನಿರ್ಮಾಣ, ನೀರುಮಾರ್ಗದಲ್ಲಿ ಮನೆಯ ನವೀಕರಣ, ಅಸಹಾಯಕರಿಗೆ ಸಹಾಯಧನ ಮುಂತಾದ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸಂಘವು ಐಎಎಸ್‌, ಕೆಎಎಸ್‌, ಐಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಪ್ರೇರಣಾ ಶಿಬಿರ ಮತ್ತು ಅರ್ಹ ಬಡ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುವುದರ ಜೊತೆಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೋತ್ತರಗಳನ್ನು ವಿತರಿಸಿದೆ. ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಸರಕಾರಿ ಆದೇಶದಂತೆ ಬಡ್ತಿ ಹೊಂದಲು ಸಹಕಾರಿ ನಿರ್ವಹಣೆಯಲ್ಲಿ ಉನ್ನತ ಶಿಕ್ಷಣದ ಅಗತ್ಯವಿದ್ದು ನಮ್ಮ ಸಂಘವು ಪ್ರಾದೇಶಿಕ ಸಹಕಾರ ತರಬೇತಿ ಕೇಂದ್ರ ಬೆಂಗಳೂರು ಇದರ ಸಹಯೋಗದೊಂದಿಗೆ ಮಂಗಳೂರು ಕೇಂದ್ರವಾಗಿ ಉನ್ನತ ಡಿಪ್ಲೋಮಾ ತರಬೇತಿ ನೀಡುವ ವ್ಯವಸ್ಥೆಯನ್ನು ಮಾಡಿದೆ

    Cooperative Loan Recovery of Cooperative Society Sahakara Spandana Spandana Cooperative
    Previous Articleಶ್ರೀಶಾ ಸೌಹಾರ್ದ ಕೋ ಆಪರೇಟಿವ್ ನಿರೀಕ್ಷೆ ಮೀರಿದ ಸಾಧನೆ: ಲಾಭಾಂಶ ಕಳೆದ ವರ್ಷಕ್ಕಿಂತ ಶೇ.60 ಏರಿಕೆ
    Next Article ಸಿಬ್ಬಂದಿಗೆ ಉತ್ತಮ ಮನೋಭಾವ, ಕೆಲಸದ ಮೇಲೆ ತೃಪ್ತಿ: ಎಂಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಾನ್ ವಾಸ್ ಅಭಿಪ್ರಾಯ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.