ಕುಂದಾಪುರ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ದೇಶದಲ್ಲಿ ಅತಿಹೆಚ್ಚು ರಾಷ್ಟ್ರೀಕೃತ ಬ್ಯಾಂಕ್‌ಗಳ ಸೃಷ್ಟಿಗೆ ಕಾರಣವಾಗಿದ್ದರೂ ಇಂದು ಅವುಗಳು ಒಂದರಲ್ಲೊಂದು ವಿಲೀನಗೊಳ್ಳುವ ಪ್ರಮೇಯ ಎದುರಾಗಿದೆ. ಇಂಥ ಸಂದರ್ಭದಲ್ಲಿ ಉಭಯ ಜಿಲ್ಲೆಗಳಲ್ಲಿ ಸಹಕಾರಿ ಬ್ಯಾಂಕ್‌ಗಳು ಜನರಿಗೆ ಉತ್ತಮ ಸೇವೆ ಒದಗಿಸುತ್ತ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರ ಸಂಘದ ನವೀಕೃತ ಸುವರ್ಣ ಸೌಧ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದ ಬೆಳವಣಿಗೆಯ ಜೊತೆಗೆ ಮಹಿಳಾ ಸಬಲೀಕರಣವೂ ಆಗಿದೆ.
ನವೋದಯ ಗುಂಪುಗಳ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದಾರೆ. ರಾಜ್ಯದಲ್ಲಿ ಏಳು ಜಿಲ್ಲೆಗಳಲ್ಲಿ ನವೋದಯ ಸ್ವಸಹಾಯ ಗುಂಪುಗಳು ಇಂದು ಪ್ರಬಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ ಡಾ.ರಾಜೇಂದ್ರ ಕುಮಾರ್, ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಕಟ್ಟಡಕ್ಕೆ ೧೦ ಲಕ್ಷ ರೂ. ದೇಣಿಗ ನೀಡುವುದಾಗಿ ಘೋಷಿಸಿದರು.ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಡಳಿತ ಸಭಾಭವನ ಉದ್ಘಾಟಿಸಿ ಮಾತನಾಡಿ, ಸಹಕಾರಿ ಕ್ಷೇತ್ರ ಬೆಳೆದು ಬಂದಿರುವುದು ಪರಸ್ಪರ ನಂಬಿಕೆ ಹಾಗೂ ವಿಶ್ವಾಸದ ಮೇಲೆ. ಮೊಳಹಳ್ಳಿ ಶಿವರಾವ್, ಕಾರ್ನಾಡ್ ಸದಾಶಿವರಾವ್ ಮೊದಲಾದ ಮಹೋನ್ನತ ನಾಯಕರು ಸಹಕಾರ ಕ್ಷೇತ್ರಕ್ಕೆ ತಮ್ಮ ಬದುಕನ್ನು ಸಮರ್ಪಿಸಿಕೊಂಡಿದ್ದರು. ಎ.ಜಿ.ಕೊಡ್ಗಿಯವರು ವಿಕಸಿತ ಸಮಾಜದ ಕನಸು ಕಂಡು ಅಮಾಸೆಬೈಲು ಗ್ರಾಮದ ಅಭಿವೃದ್ಧಿಗಾಗಿ ದುಡಿದಿದ್ದರು. ಅವರ ನೆನಪು ಸದಾ ಸ್ಮರಣೀಯ ಎಂದು ಹೇಳಿದರು.ಕುಂದಾಫುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ನವೀಕೃತ ಸಭಾಭವನ ಉದ್ಘಾಟಿಸಿದರು. ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ನವೋದಯ ಕೊಠಡಿ ಉದ್ಘಾಟಿಸಿದರು.
ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್ ಪಡಿತರ ವಿಭಾಘ ಉದ್ಘಾಟಿಸಿದರು. ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ.ಮಹೇಶ್ ಹೆಗ್ಡೆ, ಎಸ್.ರಾಜು ಪೂಜಾರಿ, ಕುಂದಾಪುರ ಸಹಕಾರ ಸಂಘಗಳ ಸಹಾಯಕ ಉಪನಿಬಂಧಕ ಅರುಣ್ ಕುಮಾರ್ ಎಸ್.ವಿ, ಅಮಾಸೆಬೈಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕುಲಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಸಂಘದ ಉಪಾಧ್ಯಕ್ಷ ಶೇಖರ ನಾಯ್ಕ, ನಿರ್ದೇಶಕರಾದ ನಾರಾಯಣ ರಾವ್, ಕೆ.ಮಂಜಯ್ಯ ಶೆಟ್ಟಿ, ನರಸಿಂಹ ಶೆಟ್ಟಿ, ಸತೀಶ್ ಹೆಗ್ಡೆ, ಗೋಪಾಲ ಪೂಜಾರಿ, ತಿಮ್ಮಪ್ಪ ಪೂಜಾರಿ, ದಿನೇಶ್ ಶೆಟ್ಟಿಗಾರ, ಸುಜಯಾ ಹೆಗ್ಡೆ, ರಾಧಿಕಾ, ಅಕ್ಷತ್ ಕುಮಾರ್, ಬಿ.ಪ್ರವೀಣ್ ಕುಮಾರ್, ರಘುಪತಿ ರಾವ್, ನಾಗರಾಜ ಪೂಜಾರಿ, ವಲಯ ಮೇಲ್ವಿಚಾರಕ ಎ.ಉದಯ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ನಿರ್ದೇಶಕ ಸತೀಶ ಹೆಗಡೆ ಸ್ವಾಗತಿಸಿದರು. ಸಿಇಒ ಕೃಷ್ಣ ಕುಮಾರ್ ಭಾಗವತ್ ಪ್ರಾಸ್ತಾವಿಕ ಮಾತನಾಡಿದರು. ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.
ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ವಿಳಾಸಕ್ಕೆ ಮೇಲ್ ಮಾಡಿ: sahakaraspandana@gmail.com
ಮಾಹಿತಿಗೆ: 9901319694.