Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ಸಹಕಾರಿಯಿಂದ ಉತ್ತಮ ಕೆಲಸ
    News

    ಆತ್ಮಶಕ್ತಿ ಸಹಕಾರಿಯಿಂದ ಉತ್ತಮ ಕೆಲಸ

    adminBy adminJune 17, 2024

    ಆರೋಗ್ಯ ಶಿಬಿರ ಉದ್ಘಾಟಿಸಿ ಬ್ರಹ್ಮಕುಮಾರಿ ಜಯಶ್ರೀ ಶ್ಲಾಘನೆ

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತ ಒಳ್ಳಯೆ ಕೆಲಸಗಳನ್ನು ಮಾಡುತ್ತ ಬರುತ್ತಿದೆ. ಆರೋಗ್ಯ ಸಮಸ್ಯೆಗಳು ಕಾಡುತ್ತಿರುವ ಸಂದರ್ಭದಲ್ಲಿ ಇಂಥ ಶಿಬಿರಗಳನ್ನು ಆಯೋಜಿಸುವ ಮೂಲಕ ಸ್ವಸ್ಥ, ಆರೋಗ್ಯಪೂರ್ಣ ಸಮಾಜಕ್ಕೆ ಮಹತ್ತರ ಕೊಡುಗೆ ನೀಡುತ್ತಿದೆ ಎಂದು ಬ್ರಹ್ಮಕುಮಾರಿ ಜಯಶ್ರೀ ಹೇಳಿದರು.


    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಯುವವಾಹಿನಿ ಮಂಗಳೂರು ಘಟಕ, ಯುವವಾಹಿನಿ ಮಹಿಳಾ ಘಟಕ, ಪ್ರಗತಿ ಮಹಿಳಾ ಮಂಡಲ ಉರ್ವಸ್ಟೋರ್ ಹಾಗೂ ಬ್ರಹ್ಮಕುಮಾರೀಸ್ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ಉರ್ವಸ್ಟೋರ್‌ನ ಪ್ರಗತಿ ಮಹಿಳಾ ಮಂಡಲದಲ್ಲಿ ಭಾನುವಾರ ಉಚಿತ ನೇತ್ರ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ ಉದ್ಘಾಟಿಸಿ ಮಾತನಾಡಿದರು.
    ನಿಧಿಲ್ಯಾಂಡ್ ಇನ್‌ಫ್ರಾಸ್ಟçಕ್ಚರ್ ಡೆವಲಪರ್ಸ್ ಇಂಡಿಯಾ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಪ್ರಶಾಂತ್ ಕುಮಾರ್ ಸನಿಲ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಆಯೋಜಿಸುತ್ತಿರುವ ಇಂಥ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಶುಭ ಹಾರೈಸಿದರು.
    ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷ ನಾಗೇಶ್ ಅಮೀನ್ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದಂತೆ ಕಾರ್ಯಾಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆರೋಗ್ಯ ಶಿಬಿರಕ್ಕೆ ಸಹಕಾರ ನೀಡಿರುವುದು ತುಂಬ ಸಂತೋಷವಾಗುತ್ತಿದೆ ಎಂದು ಹೇಳಿದರು. ಪ್ರಗತಿ ಮಹಿಳಾ ಮಂಡಲ ಅಧ್ಯಕ್ಷೆ ಪುಷ್ಪಾವತಿ ಕೆ.ಎ. ಮಾತನಾಡಿ ಬಡವರ್ಗದ ಜನರಿಗೆ ಉಪಯೋಗವಾಗುವ ಇಂತಹ ಆರೋಗ್ಯ ಶಿಬಿರಗಳನ್ನು ಮಾಡಲು ಅವಕಾಶ ಕಲ್ಪಿಸಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಇತರ ಸಂಘಗಳಿಗೆ ಧನ್ಯವಾದ ಸಲ್ಲಿಸಿದರು.
    ಯುವವಾಹಿನಿ ಮಂಗಳೂರು ಮಹಿಳಾ ಘಟಕ ಅಧ್ಯಕ್ಷೆ ಶುಭಾ ರಾಜೇಂದ್ರ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಲ್ಪಾವಧಿಯಲ್ಲಿ ಹಲವಾರು ಶಾಖೆಗಳನ್ನು ತೆರೆದು ಗ್ರಾಹಕರಿಗೆ ಉತ್ತಮ ಸೇವೆಗಳನ್ನು ನೀಡುತ್ತಿದೆ. ಇದರ ಜೊತೆಗೆ ಉಚಿತ ಆರೋಗ್ಯ ಶಿಬಿರ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಸ್ಮರ್ಧಾತ್ಮಕ ಪರೀಕ್ಷೆ ಎದುರಿಸಲು ಮಾರ್ಗದರ್ಶನ, ಬಡವರಿಗೆ ಉಚಿತ ಮನೆ ನಿರ್ಮಾಣ, ಬಸ್ ತಂಗುದಾಣ ನಿರ್ಮಾಣ, ಮುಂತಾದ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು. ಕೆ.ಎಂ.ಸಿ. ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹರ್ಬಟ್ ಪಿರೇರಾ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ಕೆ.ಎಂ.ಸಿ. ಆಸ್ಪತ್ರೆಯು ೪೦ಕ್ಕೂ ಮಿಕ್ಕಿ ಉಚಿತ ಶಿಬಿರಗಳನ್ನು ಆಯೋಜನೆ ಮಾಡಿದೆ. ಈ ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತçಚಿಕಿತ್ಸೆ ಮಾಡಲಾಗುವುದು, ಬಿ.ಪಿ., ಮಧುಮೇಹ ತಪಾಸಣೆ, ಎಲುಬು, ಕೀಲು, ಕಿವಿ, ಮೂಗು, ಗಂಟಲು ತಪಾಸಣೆ, ಜನರಲ್ ವೈದ್ಯಕೀಯ ಸಮಾಲೋಚನೆ, ಉಚಿತ ಔಷಧ ವಿತರಣೆ ನೀಡಲಾಗುವುದು ಎಂದು ಹೇಳಿದರು.


    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ., ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ರಮಾನಾಥ್ ಸನಿಲ್, ಚಂದ್ರಹಾಸ ಮರೋಳಿ, ಮುದ್ದು ಮೂಡುಬೆಳ್ಳೆ, ಗೋಪಾಲ್ ಎಂ, ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್, ಕೆ.ಎಂ.ಸಿ. ಆಸ್ಪತ್ರೆಯ ಕಣ್ಣಿನ ವೈದ್ಯ ಡಾ.ಉರ್ಜಾ ಶರ್ಮ, ಯುವವಾಹಿನಿ ಮಂಗಳೂರು ಘಟಕದ ಆರೋಗ್ಯ ನಿರ್ದೇಶಕ ಅರುಣ್ ಕೋಟ್ಯಾನ್, ಯುವವಾಹಿನಿ ಮಂಗಳೂರು ಘಟಕ, ಮಹಿಳಾ ಘಟಕ , ಪ್ರಗತಿ ಮಹಿಳಾ ಮಂಡಲ ಹಾಗೂ ಬ್ರಹ್ಮಕುಮಾರೀಸ್ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಸಚಿನ್ ಸ್ವಾಗತಿಸಿ, ಶಾಖಾಧಿಕಾರಿ ಸುಜಾತಾ ವಂದಿಸಿದರು. ಹಿರಿಯ ಶಾಖಾಧಿಕಾರಿ ಶ್ರೀಮತಿ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ಪ್ರಭಾರ ಶಾಖಾಧಿಕಾರಿಗಳಾದ ಸುಮನಾ ಹಾಗೂ ಶ್ರೀಮತಿ ಆಶಾ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರದ ಸಂಯೋಜನೆ ಮಾಡಿದರು. ೨೫೦ಕ್ಕೂ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಉಚಿತ ಔಷಧಿ ವಿತರಣೆ ಹಾಗೂ ನೇತ್ರ ತಪಾಸಣೆ ಮಾಡಲಾಯಿತು.

    “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತಿವರ್ಷ ಶಾಖೆಗಳ ವಾರ್ಷಿಕೋತ್ಸವÀ ಸಂದರ್ಭ ಜನರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದು ಸಂಘದ ೬೮ನೇ ಉಚಿತ ವೈದ್ಯಕೀಯ ಶಿಬಿರ. ಈ ಕಾರ್ಯಕ್ರಮವು ಬಡವರ್ಗದ ಜನರಿಗೆ ಮಾತ್ರವಲ್ಲದೇ ಶ್ರೀಮಂತ ವರ್ಗದ ಜನರಿಗೂ ಕೂಡ ತುಂಬ ಪ್ರಯೋಜನಕಾರಿಯಾಗಿದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಶಿಬಿರ ಆಯೋಜಿಸಲು ಸಹಕಾರ ನೀಡಿದ ಯುವವಾಹಿನಿ ಮಂಗಳೂರು ಘಟಕ, ಯುವವಾಹಿನಿ ಮಂಗಳೂರು ಮಹಿಳಾ ಘಟಕ, ಪ್ರಗತಿ ಮಹಿಳಾ ಮಂಡಲ ಹಾಗೂ ಬ್ರಹ್ಮಕುಮಾರೀಸ್ ಮಂಗಳೂರು ಸರ್ವ ಪಧಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಜೂನ್ ೨೩ರಂದು ಪಡುಬಿದ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿದೆ.“
    – ಚಿತ್ತರಂಜನ್ ಬೋಳಾರ್
    ಅಧ್ಯಕ್ಷರು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ



    ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ವಿಳಾಸಕ್ಕೆ ಮೇಲ್ ಮಾಡಿ:
    Email: sahakaraspandana@gmail.com
    ಮಾಹಿತಿಗೆ: 9901319694.

    Athmashakthi brahmakumari Chitharanjan Bolar Cooperative Sahakara Spandana Yuvavahini
    Previous Articleರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸಮನಾಗಿ ಸಹಕಾರ ಸಂಘಗಳ ಕೆಲಸ
    Next Article ತರಬೇತಿಗಳ ಸದುಪಯೋಗ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.