ಮಂಗಳೂರು: ನೂತನವಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಅವರಿಗೆ ಎಂಸಿಸಿ ಬ್ಯಾಂಕ್ ಲಿಮಿಟೆಡ್ ವತಿಯಿಂದ ಸನ್ಮಾನ ಕಾರ್ಯಕ್ರಮ ಶನಿವಾರ ನಡೆಯಿತು.
ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಸ್ವಾಗತಿಸಿ ಮಾತನಾಡಿ, “ಎಂ.ಸಿ.ಸಿ ಬ್ಯಾಂಕ್ ಸಮಾಜದ ಬಗ್ಗೆ ಹೆಚ್ಚಿನ ಜವಾಬ್ದಾರಿ ಹೊಂದಿದೆ, ಕಳೆದ ಆರು ವರ್ಷಗಳಿಂದ ಸಮಾಜದ ಒಳಿತಿಗಾಗಿ ಬ್ಯಾಂಕ್ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಬ್ಯಾಂಕಿನ ಶತಮಾನೋತ್ಸವದ ನಂತರದ ರಜತ ಮಹೋತ್ಸವದ ಸಂದರ್ಭ ರಾಜ್ಯದಲ್ಲಿ 125 ಶಾಖೆಗಳನ್ನು ಹೊಂದುವ ಆಶಯವಿದೆ” ಎಂದು ಹೇಳಿದರು.
ಮಾಜಿ ಶಾಸಕ ಜೆ.ಆರ್.ಲೋಬೊ ಅಭಿನಂದನಾ ಭಾಷಣ ಮಾಡಿ, ಸನ್ಮಾನಿತರೊಂದಿಗಿನ ತಮ್ಮ ಸಂಬಂಧವನ್ನು ಸ್ಮರಿಸಿ, ಗಣ್ಯ ವ್ಯಕ್ತಿಗಳಿಗೆ ನೀಡುವ ಸನ್ಮಾನಗಳು ಸಮಾಜದ ಮೇಲಿನ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ ಎಂದರು.
ಐವನ್ ಡಿಸೋಜ, ಸ್ಟ್ಯಾನಿ ಅಲ್ವಾರಿಸ್ ಮತ್ತು ಉಮರ್ ಯು.ಎಚ್. ಅವರನ್ನು ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಐವನ್ ಡಿಸೋಜ, ಬ್ಯಾಂಕಿನ ಸಿಬ್ಬಂದಿಗಳ ಕಠಿಣ ಪರಿಶ್ರಮದಿಂದ ಬ್ಯಾಂಕು ತ್ತಮ ಲಾಭಾಂಶ ಹೊಂದಿದೆ ಎಂದು ಹೇಳಿ ತಮ್ಮನ್ನು ಅಭಿನಂದಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು. ಗೌರವ ಸ್ವೀಕರಿಸಿದ ಸ್ಟ್ಯಾನಿ ಅಲ್ವಾರಿಸ್ ಮತ್ತು ಉಮರ್ ಯು. ಎಚ್. ಗೌರವಕ್ಕೆ ವಂದಿಸಿದರು. ಬ್ಯಾಂಕಿನ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ, ಬ್ಯಾಂಕಿನ ನಿರ್ದೇಶಕರಾದ ಆಂಡ್ರ್ಯೂ ಡಿಸೋಜ, ಐರಿನ್ ರೆಬೆಲ್ಲೊ, ಅನಿಲ್ ಪತ್ರಾವೊ, ಎಲ್ರಾಯ್ ಕಿರಣ್ ಕ್ರಾಸ್ಟೊ, ಜೆ.ಪಿ. ರೊಡ್ರಿಗಸ್, ರೋಶನ್ ಡಿಸೋಜ, ಡಾ|ಫ್ರೀಡಾ ಡಿಸೋಜ, ಮೆಲ್ವಿನ್ ವಾಸ್, ಹೆರಾಲ್ಡ್ ಮೊಂತೇರೊ, ವಿನ್ಸೆಂಟ್ ಲಸ್ರಾದೊ, ಸುಶಾಂತ್ ಸಲ್ಡಾನ್ಹಾ, ಆಲ್ವಿನ್ ಮೊಂತೇರೊ, ಫೆಲಿಕ್ಸ್ ಡಿಕ್ರೂಜ್, ಶ್ರೀಮತಿ ಶರ್ಮಿಳಾ ಮಿನೇಜಸ್ ಉಪಸ್ಥಿತರಿದ್ದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡೇವಿಡ್ ಡಿಸೋಜ ವಂದಿಸಿ, ಮನೋಜ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು. ಉಪಪ್ರಧಾನ ವ್ಯವಸ್ಥಾಪಕ ರಾಜ್ ಮಿನೇಜಸ್ ಉಪಸ್ಥಿತರಿದ್ದರು.
ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಮೇಲ್ ಮಾಡಿ:
ಇಮೇಲ್: sahakaraspandana@gmail.com
ಮಾಹಿತಿಗೆ ಸಂಪರ್ಕಿಸಿ: 9901319694.