ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಹೇಳಿಕೆ
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 33ನೇ ಶಾಖೆ ಉದ್ಘಾಟನೆ
ಮಂಗಳೂರು: ಸಹಕಾರ ಕ್ಷೇತ್ರ ಕ್ಷಿಪ್ರವಾಗಿ ವಿಸ್ತರಣೆಗೊಳ್ಳುತ್ತಾ ಸಾಗುತ್ತಿದ್ದು, ಗ್ರಾಹಕರಿಗೆ ತಳಮಟ್ಟದಿಂದ ಉತ್ತಮ ಸೇವೆ ನೀಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.
ಸುರತ್ಕಲ್ ಕೃಷ್ಣಾಪುರದ ಆರನೇ ಬ್ಲಾಕ್ನಲ್ಲಿರುವ ಎಚ್ಎನ್ಜಿಸಿ ಐಕನ್ ಪ್ಲಾನೆಟ್ ಕಟ್ಟಡದಲ್ಲಿ ಸೋಮವಾರ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 33ನೇ ಶಾಖೆ ಉದ್ಘಾಟಿಸಿ ಮಾತನಾಡಿದರು. ಆತ್ಮಶಕ್ತಿ ಸಹಕಾರ ಸಂಘವು ಕ್ಷಿಪ್ರಗತಿಯಲ್ಲಿ 33 ಶಾಖೆಯವರೆಗೆ ವಿಸ್ತರಿಸಿರುವುದು ಅದರ ಗುಣಮಟ್ಟದ ಸೇವೆ ಹಾಗೂ ಗ್ರಾಹಕರ ವಿಶ್ವಾಸ ಗಳಿಸಿರುವುದಕ್ಕೆ ಸಾಕ್ಷಿ ಎಂದರು.
ಸಂಸದ ಬ್ರಿಜೇಶ್ ಚೌಟ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸಂಸ್ಥೆಯು ಶೇ.95ರಷ್ಟು ಮಹಿಳಾ ಸಿಬ್ಬಂದಿಗೆ ಅವಕಾಶ ನೀಡಿರುವುದು ಶ್ಲಾಘನೀಯ ಎಂದರು. ಮಾಜಿ ಶಾಸಕ ಮೊಯಿದಿನ್ ಬಾವಾ, ಮನಪಾ ಮಾಜಿ ಸದಸ್ಯರಾದ ತಿಲಕ್ರಾಜ್ ಕೃಷ್ಣಾಪುರ ಶುಭಹಾರೈಸಿದರು. ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರನ್ನು ಸಂಘದ ವತಿಯಿಂದ ಸಮ್ಮಾನಿಸಲಾಯಿತು.
https://translate.google.com/website?sl=en&tl=kn&hl=kn&client=srp&u=https://chat.whatsapp.com/Ge11n7QCiMj5QyPvCc0H19
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷ್ಣಾಪುರದಲ್ಲಿ ಕಟ್ಟಡವನ್ನು ಖರೀದಿಸಿ, ಶಾಖೆ ಆರಂಬಿಸಿದ್ದೇವೆ. ಡಾ|ರಾಜೇಂದ್ರ ಕುಮಾರ್ರವರು ಬೆನ್ನೆಲುಬಾಗಿ ಸಂಸ್ಥೆಗೆ ಪ್ರೋತ್ಸಾಹ ನೀಡುತ್ತಾ ಬಂದಿರುವುದರಿಂದ ಸಂಘ ಯಶಸ್ಸು ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದರು. ಭದ್ರತಾಕೋಶ, ಗಣಕೀಕೃತ ಬ್ಯಾಂಕಿಂಗ್, ನಿರಖು ಠೇವಣಿ ಪತ್ರ ಬಿಡುಗಡೆ, ಇ-ಮುದ್ರಾಂಕ ಸೇವೆಗೆ ಚಾಲನೆ ನೀಡಿ, ನೂತನ ಗ್ರಾಹಕರಿಗೆ ವಿವಿಧ ಸೇವಾ ದಾಖಲೆ ಪತ್ರ ವಿತರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶಶಿಕುಮಾರ್ ರೈ ಬಲ್ಯೊಟ್ಟು, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ದೇವೇಂದ್ರ ಕೋಟ್ಯಾನ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯಾ ವಿಜಯ್, ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಸೀತಾರಾಮ್ ಎನ್., ರಮನಾಥ ಸನಿಲ್, ಚಂದ್ರಹಾಸ್ ಮರೋಳಿ, ಮುದ್ದು ಮೂಡುಬೆಳ್ಳೆ, ಗೋಪಾಲ್ ಎಂ., ಉಮಾವತಿ , ಸಲಹೆಗಾರರಾದ ಅಶೋಕ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಸ್ವಾಗತಿಸಿ, ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.
ನಿರಖು ಠೇವಣಿ ಮೇಲೆ ವಿಶೇಷ ಬಡ್ಡಿ
ಉದ್ಘಾಟನೆ ಪ್ರಯುಕ್ತ ನಿರಖು ಠೇವಣಿ ಮೇಲೆ ವಿಶೇಷ ಬಡ್ಡಿ, ಪ್ರತಿ ಗ್ರಾಂ ಗೆ ಗರಿಷ್ಟ ಚಿನ್ನಾಭರಣ ಸಾಲ, ಇ-ಮುದ್ರಾಂಕ ಸೇವೆ, ನೆಫ್ಟ್, ಆರ್ಟಿಜಿಎಸ್, ವಿಮಾ ಸೌಲಭ್ಯ ಮತ್ತಿತರ ಸೇವೆ ದೊರಕಲಿದೆ. ಶಾಖೆಯ ಉದ್ಘಾಟನೆಯ ಪ್ರಯುಕ್ತ ದೇರಳಕಟ್ಟೆಯ ಯೇನಪೊಯ ವಿವಿಯ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರದ ವೈದ್ಯರಿಂದ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣೆ ಶಿಬಿರ, ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಮುಕ್ಕದ ವೈದ್ಯರಿಂದ ದಂತ ತಪಾಸಣೆ ನಡೆಯಿತು.
ಸಹಕಾರಿ ಸಂಸ್ಥೆಗಳ ಸುದ್ದಿ ಪ್ರಕಟಣೆಗಾಗಿ ಈ ಕೆಳಗಿನ ಮೇಲ್ ಮಾಡಿ:
ಇಮೇಲ್: sahakaraspandana@gmail.com
ಮಾಹಿತಿಗೆ: 9901319694